Breaking News

ಫೆ.23 ರಂದು ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳಿಂದ ಬೃಹತ್ ಪ್ರತಿಭಟನಾ ರ್ಯಾಲಿ

Spread the love

ಬೆಂಗಳೂರು: “ಶಿಕ್ಷಣ ಇಲಾಖೆಯ ಧೋರಣೆ, ದ್ವಂದ್ವ ನಿಲುವು, ಅವೈಜ್ಞಾನಿಕ ಕ್ರಮಗಳನ್ನು ಖಂಡಿಸಿ ಫೆ. 23ರಂದು ಬೃಹತ್‌ ಪ್ರತಿಭಟನಾ ರ‍್ಯಾಲಿ ಮತ್ತು ಸಮಾವೇಶ ಹಮ್ಮಿಕೊಳ್ಳಲಾಗಿದೆ” ಎಂದು ರಾಜ್ಯ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಸಂಘಟನೆಯ (ಕ್ಯಾಮ್ಸ್) ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್‌ ಶನಿವಾರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ನಡೆಯಲಿರುವ ಬೃಹತ್‌ ಪ್ರತಿಭಟನಾ ರ‍್ಯಾಲಿಯಲ್ಲಿ ರಾಜ್ಯಾದ್ಯಂತ ಖಾಸಗಿ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ, ಶಿಕ್ಷಕರು, ವ್ಯವಸ್ಥಾಪಕರು ಸೇರಿ 25 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ” ಎಂದು ಹೇಳಿದರು.

“ಕ್ಯಾಮ್ಸ್‌ ಮತ್ತು ಇತರ 10 ರಾಜ್ಯ ಸಂಘಟನೆಗಳನ್ನು ಒಳಗೊಂಡ ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿಗಳು, ಶಿಕ್ಷಣ- ಶಿಕ್ಷಕೇತರ ಸಿಬ್ಬಂದಿಯ ಸಮನ್ವಯ ಸಮಿತಿಯ ಅಡಿಯಲ್ಲಿ ಈ ರ‍್ಯಾಲಿ ಮತ್ತು ಪ್ರತಿಭಟನಾ ಸಮಾವೇಶ ನಡೆಯಲಿದೆ. ಸಂಜೆ 4 ಗಂಟೆಯವರೆಗೆ ಪ್ರತಿಭಟನೆ ನಡೆಯಲಿದೆ” ಎಂದು ತಿಳಿಸಿದರು.

“ಸರ್ಕಾರದ ಅನೇಕ ನಿಯಮಗಳು ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಆರ್ಥಿಕ ಸಂಕಷ್ಟಕ್ಕೆ ನೂಕಿದೆ. ಶಿಕ್ಷಣ ಸಚಿವರು ಮತ್ತು ಶಿಕ್ಷಣ ಇಲಾಖೆ ನಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ಇದರ ವಿರುದ್ಧ ಪ್ರತಿಭಟನೆ ನಡೆಯಲಿದೆ” ಎಂದು ಅವರು ಆಕ್ರೋ


Spread the love

About Laxminews 24x7

Check Also

ಹೃದಯಾಘಾತದಿಂದ ಸಾವನ್ನಪ್ಪಿದ ಡಾ.ಸಂದೀಪ್ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಬ್ಬಾಕ ಸ್ವಾಮಿ

Spread the loveಶಿವಮೊಗ್ಗ/ತುಮಕೂರು: ಕಳೆದ ಒಂದೇ ತಿಂಗಳಲ್ಲಿ ಹಾಸನ ಜಿಲ್ಲೆಯಲ್ಲಿ 19 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಈಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ