Breaking News

ಕೋವಿಡ್‌ ಲಸಿಕೆ ಪಡೆದವರಿಗೆ ಆನ್‌ಲೈನ್‌ ಮೂಲಕವೇ ನೀಡಲಾಗುತ್ತಿರುವ ಪ್ರಮಾಣ ಪತ್ರದಲ್ಲಿ ಯಾವುದೇ ತಪ್ಪಾಗಿದ್ದರೆ ಅದನ್ನು ಸರಿಪಡಿಸಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ.

Spread the love

ನವದೆಹಲಿ: ಕೋವಿಡ್‌ ಲಸಿಕೆ ಪಡೆದವರಿಗೆ ಆನ್‌ಲೈನ್‌ ಮೂಲಕವೇ ನೀಡಲಾಗುತ್ತಿರುವ ಪ್ರಮಾಣ ಪತ್ರದಲ್ಲಿ ಯಾವುದೇ ತಪ್ಪಾಗಿದ್ದರೆ ಅದನ್ನು ಸರಿಪಡಿಸಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ. ಈ ಕುರಿತು ಆರೋಗ್ಯ ಸೇತು ಆಯಪ್‌ನ ಅಧಿಕೃತ ಟ್ವೀಟರ್‌ ಖಾತೆಯಿಂದ ಮಾಹಿತಿ ನೀಡಲಾಗಿದೆ.

ಈ ಅವಕಾಶದ ಅನ್ವಯ ಪ್ರಮಾಣಪತ್ರದಲ್ಲಿ ಹೆಸರು, ಜನ್ಮವರ್ಷ, ಲಿಂಗದಲ್ಲಿ ಆಗಿರುವ ಯಾವುದೇ ತಪ್ಪು ಮಾಹಿತಿಯನ್ನು ಸ್ವತಃ, ಲಸಿಕೆ ಪಡೆದವರು ಬದಲಾವಣೆ ಮಾಡಿಕೊಳ್ಳಬಹುದು. ಮುಂದಿನ ದಿನಗಳಲ್ಲಿ ವಿದೇಶ ಪ್ರಯಾಣ ಸೇರಿದಂತೆ ನಾನಾ ವಿಷಯಗಳಿಗೆ ಕೋವಿಡ್‌ ಪ್ರಮಾಣ ಪತ್ರ ಕಡ್ಡಾಯವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ದೋಷ ತಿದ್ದುಪಡಿಗೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಬಳಕೆದಾರರು ಕೋವಿನ್‌ ವೆಬ್‌ಸೈಟ್‌ಗೆ ಲಾಗಿನ್‌ ಆಗುವ ಮೂಲಕ ಈ ಬದಲಾವಣೆ ಮಾಡಿಕೊಳ್ಳಬಹುದು.
ಕೋವಿಡ್‌ ಲಸಿಕೆ ಪಡೆದುಕೊಂಡವರಿಗೆ ತಮ್ಮ ಸ್ಟೇಟಸ್‌ ಅಪ್‌ಡೇಟ್‌ ಮಾಡುವ ಅವಕಾಶವನ್ನು ಕೆಲ ದಿನಗಳ ಹಿಂದೆ ಸರ್ಕಾರ ಕಲ್ಪಿಸಿತ್ತು. ಅದರನ್ವಯ ಮೊದಲ ಡೋಸ್‌ ಪಡೆದುಕೊಂಡವರಿಗೆ ನೀಲಿ ಬಣ್ಣದ ಬಾರ್ಡರ್‌ ಬರುತ್ತಿದ್ದರೆ, 2 ಡೋಸ್‌ ಪಡೆದುಕೊಂಡವರಿಗೆ ಡಬ್ಬಲ್‌ ಬಾರ್ಡರ್‌ ಬರುತ್ತಿತ್ತು.


Spread the love

About Laxminews 24x7

Check Also

ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ

Spread the loveಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ