Breaking News
Home / new delhi / ಕೋವಿಡ್‌ ಲಸಿಕೆ ಪಡೆದವರಿಗೆ ಆನ್‌ಲೈನ್‌ ಮೂಲಕವೇ ನೀಡಲಾಗುತ್ತಿರುವ ಪ್ರಮಾಣ ಪತ್ರದಲ್ಲಿ ಯಾವುದೇ ತಪ್ಪಾಗಿದ್ದರೆ ಅದನ್ನು ಸರಿಪಡಿಸಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ.

ಕೋವಿಡ್‌ ಲಸಿಕೆ ಪಡೆದವರಿಗೆ ಆನ್‌ಲೈನ್‌ ಮೂಲಕವೇ ನೀಡಲಾಗುತ್ತಿರುವ ಪ್ರಮಾಣ ಪತ್ರದಲ್ಲಿ ಯಾವುದೇ ತಪ್ಪಾಗಿದ್ದರೆ ಅದನ್ನು ಸರಿಪಡಿಸಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ.

Spread the love

ನವದೆಹಲಿ: ಕೋವಿಡ್‌ ಲಸಿಕೆ ಪಡೆದವರಿಗೆ ಆನ್‌ಲೈನ್‌ ಮೂಲಕವೇ ನೀಡಲಾಗುತ್ತಿರುವ ಪ್ರಮಾಣ ಪತ್ರದಲ್ಲಿ ಯಾವುದೇ ತಪ್ಪಾಗಿದ್ದರೆ ಅದನ್ನು ಸರಿಪಡಿಸಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ. ಈ ಕುರಿತು ಆರೋಗ್ಯ ಸೇತು ಆಯಪ್‌ನ ಅಧಿಕೃತ ಟ್ವೀಟರ್‌ ಖಾತೆಯಿಂದ ಮಾಹಿತಿ ನೀಡಲಾಗಿದೆ.

ಈ ಅವಕಾಶದ ಅನ್ವಯ ಪ್ರಮಾಣಪತ್ರದಲ್ಲಿ ಹೆಸರು, ಜನ್ಮವರ್ಷ, ಲಿಂಗದಲ್ಲಿ ಆಗಿರುವ ಯಾವುದೇ ತಪ್ಪು ಮಾಹಿತಿಯನ್ನು ಸ್ವತಃ, ಲಸಿಕೆ ಪಡೆದವರು ಬದಲಾವಣೆ ಮಾಡಿಕೊಳ್ಳಬಹುದು. ಮುಂದಿನ ದಿನಗಳಲ್ಲಿ ವಿದೇಶ ಪ್ರಯಾಣ ಸೇರಿದಂತೆ ನಾನಾ ವಿಷಯಗಳಿಗೆ ಕೋವಿಡ್‌ ಪ್ರಮಾಣ ಪತ್ರ ಕಡ್ಡಾಯವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ದೋಷ ತಿದ್ದುಪಡಿಗೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಬಳಕೆದಾರರು ಕೋವಿನ್‌ ವೆಬ್‌ಸೈಟ್‌ಗೆ ಲಾಗಿನ್‌ ಆಗುವ ಮೂಲಕ ಈ ಬದಲಾವಣೆ ಮಾಡಿಕೊಳ್ಳಬಹುದು.
ಕೋವಿಡ್‌ ಲಸಿಕೆ ಪಡೆದುಕೊಂಡವರಿಗೆ ತಮ್ಮ ಸ್ಟೇಟಸ್‌ ಅಪ್‌ಡೇಟ್‌ ಮಾಡುವ ಅವಕಾಶವನ್ನು ಕೆಲ ದಿನಗಳ ಹಿಂದೆ ಸರ್ಕಾರ ಕಲ್ಪಿಸಿತ್ತು. ಅದರನ್ವಯ ಮೊದಲ ಡೋಸ್‌ ಪಡೆದುಕೊಂಡವರಿಗೆ ನೀಲಿ ಬಣ್ಣದ ಬಾರ್ಡರ್‌ ಬರುತ್ತಿದ್ದರೆ, 2 ಡೋಸ್‌ ಪಡೆದುಕೊಂಡವರಿಗೆ ಡಬ್ಬಲ್‌ ಬಾರ್ಡರ್‌ ಬರುತ್ತಿತ್ತು.


Spread the love

About Laxminews 24x7

Check Also

ಮತದಾರರನ್ನು ಆಕರ್ಷಿಸಲು ಚುನಾವಣಾ ಆಯೋಗದ ವಿಭಿನ್ನ ಪ್ರಯತ್ನ

Spread the love ಬೆಂಗಳೂರು, ಏಪ್ರಿಲ್. 20: ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧವಾಗುವುದಕ್ಕಿಂತ ಹೆಚ್ಚಾಗಿ ನಮ್ಮ ಚುನಾವಣಾ ಆಯೋಗ ಹಲವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ