Breaking News

ರಸಗೊಬ್ಬರ ಕೊರತೆ ಆಗದಂತೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

Spread the love

ಬೆಳಗಾವಿ:ಮುಂಗಾರು ಹಂಗಾಮಿನ ಪೂರ್ವದಲ್ಲಿಯೇ ಅಲ್ಲಲ್ಲಿ ಉತ್ತಮ ಮಳೆ ಸುರಿಯುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿ ರಸಗೊಬ್ಬರ ಬೇಡಿಕೆ ಹೆಚ್ಚಿದ್ದು ಕೊರತೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ರಸಗೊಬ್ಬರ ಕುರಿತು ದೂರುಗಳು ಬಂದಾಗ ವೀಚಕ್ಷಣಾ ತಂಡ ತ್ವರಿತವಾಗಿ ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಮುಂಗಾರು ಹಂಗಾಮಿಗೆ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಸಮರ್ಪಕ ಪೂರೈಕೆ ಹಾಗೂ ಭೂ ತಾಯಿ ರಕ್ಷಣೆ ಕಣ್ಗಾವಲು ಸಮಿತಿ ಸಭೆಯಲ್ಲಿ ಮಾತನಾಡಿ, ಜಿಲ್ಲಾ ವೀಚಕ್ಷಣಾ ತಂಡಗಳು ಅತೀ ಜಾಗೃತವಾಗಿ ಕಾರ್ಯ ನಿರ್ವಹಿಸಬೇಕು. ಈ ವಿಷಯದಲ್ಲಿ ನಿರ್ಲಕ್ಷೃಸುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ವಹಿಸಲಾಗುವುದು ಎಂದರು.
ಕಳೆದ ವರ್ಷಜಿಲ್ಲೆಯಲ್ಲಿ ರಸಗೊಬ್ಬರ ಬಳಕೆಯಲ್ಲಿ ಕಡಿಮೆ ಆಗಿದ್ದು, ಈ ಬಾರಿಯು ಅಧಿಕಾರಿಗಳು, ರಸಗೊಬ್ಬರ ಪೂರೈಕೆದಾರರು ಸಮನ್ವಯ ಸಾಧಿಸಿ ರೈತರಲ್ಲಿ ರಸಗೊಬ್ಬರ ಬಳಕ್ಯೆನ್ನು ಕಡಿಮೆ ಮಾಡಲು ಜಾಗೃತಿ ಮೂಡಿಸಬೇಕು.ರಸಗೊಬ್ಬರ ಮಾರಾಟದಲ್ಲಿ ಕೃತಕ ಅಭಾವ, ಕಾಳಸಂತೆಯಲ್ಲಿ ಮಾರಾಟ ಮಾಡಬಾರದು.  ನಿಗದಿತ ದರಕ್ಕಿಂತ ಹೆಚ್ಚಿನದರಕ್ಕೆ ಮಾರಾಟ ಮಾಡಿದರ ಕುರಿತು ದೂರು ಬಂದರೆ ತಕ್ಷಣ ಕ್ರಮ ಕೈಗೊಳ್ಳಬೇಕು.
ಜಿಲ್ಲೆಯ ರೈತರಿಗೆ ರಸಗೊಬ್ಬರ ದಾಸ್ತಾನು ಕುರಿತು ರೈತರಿಗೆ ಸರಿಯಾದ ಮಾಹಿತಿ ಒದಗಿಸಬೇಕು. ರೈತರಲ್ಲಿನ ಅತಂಕ ದೂರ ಮಾಡಬೇಕು.ಜಿಲ್ಲೆಗೆ ಬೇಕಾದಂತಹ ರಸಗೊಬ್ಬರ ತರಬೇಕು. ರಸಗೊಬ್ಬರ ಅಂಗಡಿಗಳ ದಾಸ್ತಾನಿನ ವಿವರ ಲಭ್ಯವಿದ್ದು, ರಸಗೊಬ್ಬರ ಪೂರೈಕೆಗೆ ಸಂಬಂಧಿಸಿದಂತೆ ಪೂರೈಕೆದಾರರು ಆವಕ ಜಾವಕ ಮಾಹಿತಿಯನ್ನು  ಪ್ರತಿದಿನ ಕಡ್ಡಾಯವಾಗಿ ನಮೂದಿಸಬೇಕು  ಎಂದು ಸೂಚಿಸಿದರು.
ಜಿಪಂ ಸಿಇಒ ರಾಹುಲ ಶಿಂಧೆ ಮಾತನಾಡಿ, ರೈತರು ಜಮೀನಿನಲ್ಲಿ ಯಾವ ಬೆಳೆ ಬೆಳೆಯಬೇಕು ಎನ್ನುವುದನ್ನು ರಸಗೊಬ್ಬರ ಅಂಗಡಿಗಳಿಗೆ ಭೇಟಿ ನೀಡುವಂತಹ ಸಂದರ್ಭದಲ್ಲಿ  ಪೂರೈಕೆದಾರರು ರೈತರಿಗೆ ಉತ್ತಮ ಮಾರ್ಗದರ್ಶನ ನೀಡಬೇಕು. ಜಿಲ್ಲೆಯಲ್ಲಿ ರಸಗೊಬ್ಬರದ ಕೊರತೆ ಇರುವುದಿಲ್ಲ. ರಸಗೊಬ್ಬರ, ಬಿತ್ತನೆ ಬೀಜಗಳ ಕೃತಕ ಅಭಾವ ಅಥವಾ ಹೆಚ್ಚಿನ ದರಕ್ಕೆ ಮಾರಾಟ ಮಾಡುವವರ ವಿರುದ್ಧ ಕ್ರಮ ಆಗಬೇಕು.ಸಾವಯವ ಕೃಷಿಗೆ ಒತ್ತು ನೀಡಲು ಇದು ಉತ್ತಮ ಸಮಯವಾಗಿದ್ದು ಕೃಷಿ ಇಲಾಖೆ ಹಾಗೂ ರಸಗೊಬ್ಬರ, ಬಿತ್ತನೆ ಬೀಜ ಪೂರೈಕೆದಾರರು ರೈತರಲ್ಲಿ ಅರಿವು ಮೂಡಿಸಬೇಕು ಎಂದರು.
ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ  ಮಹಾಂತೇಶ ಮುರಗೋಡ,  ಉಪನಿರ್ದೇಶಕ ಸಲೀಂ ಸಂಗಟರಸ್ ಇತರರಿದ್ದರು.,

Spread the love

About Laxminews 24x7

Check Also

​ಬೆಳಗಾವಿಯಲ್ಲಿ ಸಚಿವ ಸ್ಥಾನಕ್ಕಾಗಿ ಶುರುವಾಯ್ತು ‘ಕೈ’ ಕಸರತ್ತು: ಕುಂದಾನಗರಿಯಲ್ಲಿ ಸಚಿವ ಸಂಪುಟದ ಸರ್ಕಸ್!

Spread the love​ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ಪುನಾರಚನೆಯದ್ದೇ ಸದ್ದು. ಅದರಲ್ಲೂ ಕುಂದಾನಗರಿ ಬೆಳಗಾವಿ ಜಿಲ್ಲೆಗೆ ಮತ್ತೊಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ