Breaking News

ಕಾಲೇಜು ಯುವತಿ ಮೇಲೆ ಅತ್ಯಾಚಾರ ಆರೋಪ

Spread the love

ಬೆಂಗಳೂರು: ನಗರದ ಮಡಿವಾಳ  ಪ್ರದೇಶದಲ್ಲಿ ಕಾಲೇಜು ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ.

ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯಾಗಿರೋ ಯುವತಿ, ಓದಿನ ಜೊತೆಗೆ ಮೋಮೋಸ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಮೋಮೋಸ್ ಅಂಗಡಿ ಮಾಲೀಕರಾದ ಅತುಲ್, ಗೋಷ್ ಎಂಬವರು ಮೇ 11ರಂದು ಯುವತಿಯನ್ನು ಪಾರ್ಟಿಗೆ ಆಹ್ವಾನ ಮಾಡಿದ್ದರು. ಈ ವೇಳೆ ಮೋಮೋಸ್ ಅಂಗಡಿಯನ್ನು ಮಾರಾಟ ಮಾಡಲು ಮುಂದಾಗಿರೋ ವಿಚಾರ ತಿಳಿಸಿ ಹೈನಾಸ್ ಎಂಬ ಮಧ್ಯವರ್ತಿಯನ್ನು ಕರೆದಿದ್ದಾರೆ. ಅಂಗಡಿ ಮಾರಾಟದ ವಿಚಾರ ಚರ್ಚೆ ಮಾಡಿ ನಾಲ್ಕು ಜನ ಪಾರ್ಟಿ ಮಾಡಿದ್ದಾರೆ.

ಪಾರ್ಟಿ ಬಳಿಕ ಗೋಷ್ ಮತ್ತು ಅತುಲ್ ಊಟ ತರಲು ಹೋಗಿದ್ದ ವೇಳೆ, ಹೈನಾಸ್ ಎಂಬ ಮತ್ತೊಬ್ಬ ವ್ಯಕ್ತಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಆದರೆ ಪೊಲೀಸರು, ಆರೋಪಿಯನ್ನು ಬಂಧಿಸದೇ ಯುವತಿ ಮೇಲೆಯೇ ಅನುಮಾನಪಡುತ್ತಿದ್ದಾರೆ ಎಂದು ಸಂತ್ರಸ್ತ ಯುವತಿ ಪೊಲೀಸರ ಮೇಲೆ ಆರೋಪ ಮಾಡಿದ್ದಾಳೆ. ಘಟನೆ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ಪ್ಯಾಕ್‌ ಮಾಡದ ಖಾದ್ಯ ತೈಲ ಮಾರಾಟಕ್ಕೆ ನಿಷೇಧ – ನಿಯಮ ಉಲ್ಲಂಘಿಸಿದ್ರೆ 7 ವರ್ಷ ಜೈಲು

Spread the loveಮುಂಬೈ: ಮಹಾರಾಷ್ಟ್ರದಲ್ಲಿ ಸಡಿಲ (ಪ್ಯಾಕ್ ಮಾಡದ) ಖಾದ್ಯ ತೈಲ ಮಾರಾಟ ಮಾಡುವುದನ್ನು ರಾಜ್ಯ ಆಹಾರ ಮತ್ತು ಔಷಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ