Breaking News

ಲಾರಿ-ಬೈಕ್ ನಡುವೆ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

Spread the love

ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಬ್ಬೂರು ಪಟ್ಟಣದ ಬೆಲ್ಲದ-ಬಾಗೇವಾಡಿ ರಸ್ತೆಯಲ್ಲಿ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸವಾನ್ನಪ್ಪಿದ್ದಾನೆ.

ಕಬ್ಬೂರು ಪಟ್ಟಣದ ಹಿರೇಕುರಬರ ತೋಟದ ನಿವಾಸಿ ಪ್ರವೀಣ ರಾಮಪ್ಪ ಹಿರೇಕುರಬರ (35) ಸಾವನ್ನಪ್ಪಿದ ಬೈಕ್ ಸವಾರ.

ಮೃತ ಪ್ರವೀಣ ಅವರು ಪಟ್ಟಣದಿಂದ ಮನೆಗೆ  ಸಾಮಗ್ರಿಗಳನ್ನು ಖರೀದಿಸಿ ತಮ್ಮ ಬೈಕ್‌ನಲ್ಲಿ ತೋಟದ ಮನೆಗೆ ಹಿಂತಿರುಗುತ್ತಿದ್ದರು. ಅಪಘಾತ ಸಂಭವಿಸಿ ಸಾವನ್ನಪ್ಪಿದ್ದಾನೆ.‌

ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ