ಬೆಳಗಾವಿ: ಕನ್ನಡ ಸಾಹಿತ್ಯ ಪರಿಷತ್ ಮತ್ತು ಕನ್ನಡ ಸಾಂಸ್ಕೃತಿಕ ಭವನದ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದೊಂದಿಗೆ ‘ನಕ್ಕು ಹಗುರಾಗಿರಿ’ ಹಾಸ್ಯ ಕಾರ್ಯಕ್ರಮ ಜು.18ರಂದು ಸಂಜೆ 4 ಗಂಟೆಗೆ ನೆಹರು ನಗರದ ಕನ್ನಡ ಭವನದಲ್ಲಿ ಏರ್ಪಡಿಸಲಾಗಿದೆ.
ಕಸಾಪ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ ಅಧ್ಯಕ್ಷತೆ ವಹಿಸಲಿದ್ದಾರೆ. ಕಲಾವಿದ ಜಿ.ಎಸ್.ಸೋನಾರ ಅತಿಥಿಯಾಗಿ ಆಗಮಿಸಲಿದ್ದಾರೆ. ಸಂಚಾಲಕ ಗುಂಡೇನಟ್ಟಿ ಮಧುಕರ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ.
ಪಾರ್ವತಿ ತುಪ್ಪದ ರಚಿಸಿರುವ ಲೀಲಾಮೃತ ಪುಸ್ತಕ ಬಿಡುಗಡೆ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
Laxmi News 24×7