ಬಾಗಲಕೋಟೆ: ಇಂದಿನ ಡಿಜಿಟಲ್ ಯುಗದಲ್ಲಿ ಉದ್ಯೋಗ ಹಾಗೂ ಸ್ವಯಂ ಉದ್ಯೋಗದ ಅವಕಾಶಗಳನ್ನು ವಿಸ್ತರಿಸಿಕೊಳ್ಳಲು ವೆಬ್ ತಂತ್ರಜ್ಞಾನ ಮತ್ತು ಪ್ರಾಯೋಗಿಕ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ ಎಂದು ಇಂಪೋಕ್ಷೇತ್ರ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಸಂಸ್ಥಾಪಕ ವಿಜಯಮಹಾಂತೇಶ ಬಂಗಾರಗುಂಡ ಹೇಳಿದರು.
ನಗರದ ಬಸವೇಶ್ವರ ಕಲಾ ಮಹಾವಿದ್ಯಾಲಯದ ಕಂಪ್ಯೂಟರ್ ಅಪ್ಲಿಕೇಶನ್ ವಿಭಾಗದಿಂದ ಆಯೋಜಿಸಿರುವ ನಾಲ್ಕು ದಿನಗಳ ‘ವೆಬ್ ಕ್ರಾಫ್ಟ್’ ಕಾರ್ಯಾಗಾರವನ್ನು ಸಸಿಗೆ ನೀರೆರೆಯುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಅವಕಾಶಗಳನ್ನು ವಿಸ್ತರಿಸಿಕೊಳ್ಳಲು ವೆಬ್ ಡೆವಲಪ್ಮೆಂಟ್, ಡಿಜಿಟಲ್ ವಿನ್ಯಾಸ ಮತ್ತು ತಾಂತ್ರಿಕ ಕೌಶಲ್ಯಗಳು ಪ್ರಮುಖ ಪಾತ್ರವಹಿಸುತ್ತವೆ. ಸಮಸ್ಯೆಗಳೇ ಚಟುವಟಿಕೆಗಳ ಉಗಮಕ್ಕೆ ಕಾರಣ, ಜ್ಞಾನವಿದ್ದರೂ ಉಪಯೋಗಿಸಿಕೊಳ್ಳದಿದ್ದರೆ ಅದು ವ್ಯರ್ಥವಾಗುತ್ತದೆ. ಅಧ್ಯಯನ ವಿಭಾಗ ಯಾವುದಿದ್ದರೂ ಕಲಿಯುವ ಆಸಕ್ತಿ ಇದ್ದರೆ ಏನು ಬೇಕಿದ್ದರೂ ಸಾಧಿಸಬಹುದು. ತರಗತಿಯಲ್ಲಿ ಕಲಿತ ವಿಷಯಗಳನ್ನು ಪ್ರಾಯೋಗಿಕವಾಗಿ ಅಳವಡಿಸಿಕೊಂಡಾಗ ಸಾಮರ್ಥ್ಯ ಮತ್ತಷ್ಟು ವೃದ್ಧಿಯಾಗುತ್ತದೆ ಎಂದರು.
ಪ್ರಾಚಾರ್ಯರಾದ ಎಸ್. ಆರ್. ಮೂಗನೂರಮಠ ಮಾತನಾಡಿ ಕಲೆ ಎನ್ನುವುದು ಎಲ್ಲರಲ್ಲೂ ಇರುತ್ತದೆ. ಅದಕ್ಕೆ ಇನ್ನೂ ಸ್ವಲ್ಪ ಒತ್ತು ನೀಡಬೇಕು ಅಂದಾಗ ಮಾತ್ರ ಯಶಸ್ಸು ಕಾಣಬಹುದು. ಈಗಿನ ದಿನಗಳಲ್ಲಿ ವೆಬ್ಸೈಟ್ ಉದ್ಯೋಗ ಕ್ಷೇತ್ರದಲ್ಲಿ ಮಹತ್ತರ ಪಾತ್ರವಹಿಸುತ್ತಿದ್ದು ಅದನ್ನು ಕಲಿಯುವುದರಿಂದ ಅವಕಾಶಗಳ ಹಾದಿ ತೆರೆದುಕೊಳ್ಳುತ್ತವೆ. ನಮ್ಮಲ್ಲಿರುವಂತಹ ಕಲೆಯಯನ್ನು ಕಲಾತ್ಮಕವಾಗಿ ತೋರಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಂಪ್ಯೂಟರ್ ವಿಭಾಗದ ಮುಖ್ಯಸ್ಥರಾದ ನಟರಾಜ ಇಂಗಳಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಾಂಸ್ಕೃತಿಕ ಚಟುವಟಿಕೆಗಳ ವಿಭಾಗದ ಸಂಯೋಜಕರಾದ ಡಾ.ಕೆ.ವಿ ಮಠ, ಲ್ಯಾಬ್ ಇನಸ್ಟ್ರ್ ಕ್ಟರ್ ಎಂ.ಐ. ಕಂಬಿ ಸೇರಿದಂತೆ ವಿವಿಧ ವಿಭಾಗಗಳ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Laxmi News 24×7