Breaking News

ರೈಲ್ವೆ ಪರೀಕ್ಷೆ ಕನ್ನಡದಲ್ಲೂ ನಡೆಸಿ – ಕೇಂದ್ರಕ್ಕೆ ನಿಖಿಲ್ ಕುಮಾರಸ್ವಾಮಿ ಪತ್ರ

Spread the love

ಬೆಂಗಳೂರು: ರೈಲ್ವೆ ಇಲಾಖೆಯ ಪರೀಕ್ಷೆಗಳನ್ನು  ಕನ್ನಡದಲ್ಲೂ ನಡೆಸುವಂತೆ ಒತ್ತಾಯಿಸಿ ಜೆಡಿಎಸ್‌  ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ. ಈ ಪತ್ರವನ್ನು ತಮ್ಮ ಎಕ್ಸ್ ಖಾತೆಯಲ್ಲೂ ಹಂಚಿಕೊಂಡಿದ್ದಾರೆ.

ನೈರುತ್ಯ ರೈಲ್ವೆ ಇಲಾಖೆಯಲ್ಲಿ ನಡೆಯುವ ಇಲಾಖಾ ಬಡ್ತಿ ಪರೀಕ್ಷೆಗಳನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮಾತ್ರ ನಡೆಸುತ್ತಿರುವುದು ಸರಿಯಲ್ಲ. ನಮ್ಮ ಕನ್ನಡಿಗ ಉದ್ಯೋಗಿಗಳಿಗೆ ಇದರಿಂದ ಅನ್ಯಾಯವಾಗುತ್ತಿದೆ ಎಂದು ನಿಖಿಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವಿಷಯವಾಗಿ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರಿಗೆ ಪತ್ರ ಬರೆದಿದ್ದೇನೆ. ಆಗಸ್ಟ್ 2024ರ ರೈಲ್ವೆ ಮಂಡಳಿಯ ಆದೇಶದಂತೆ ಕನ್ನಡದಲ್ಲೂ ಪರೀಕ್ಷೆ ನಡೆಸುವಂತೆ ಆಗ್ರಹಿಸಿದ್ದೇನೆ. ರೈಲ್ವೆ ಇಲಾಖೆಯ ಮುಂದಿನ ಎಲ್ಲಾ ಪರೀಕ್ಷೆಗಳಲ್ಲೂ ಕನ್ನಡಕ್ಕೆ ಆದ್ಯತೆ ಸಿಗುವಂತೆ ಹಾಗೂ ನಮ್ಮ ರಾಜ್ಯದ ಉದ್ಯೋಗಿಗಳ ಹಿತರಕ್ಷಣೆಗಾಗಿ ನಾನು ಸದಾ ಪ್ರಾಮಾಣಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ