Breaking News

ಮೇ 10ರಂದು ಬೆಂಗಳೂರು ಜನತೆಯ ಪರವಾಗಿ ಪ್ರಧಾನಿ ಮೋದಿಗೆ ಅಭಿನಂದನೆ: ಆರ್.ಅಶೋಕ್

Spread the love

ಬೆಂಗಳೂರು: ಮೇ 10ರಂದು ಆಗಮಿಸುತ್ತಿರುವ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ  ಅವರಿಗೆ ಬೆಂಗಳೂರು ಜನತೆಯ ಪರವಾಗಿ ಅಭಿನಂದನೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಬಿಜೆಪಿ  ಕಾರ್ಯಾಲಯದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿ ಅಧಿಕಾರಕ್ಕೆ ಬರುತ್ತಿದೆ. ಮೋದಿ ಅವರ ಸಾಧನೆಗೆ ವಿಶ್ವವೇ ಕೊಂಡಾಡುತ್ತಿದೆ. 75 ವರ್ಷಗಳ ನಂತರ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸಾಧನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿಯವರಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದರು.

ಬೆಳಗ್ಗೆ 9 ಗಂಟೆಗೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿ, ಅರ್ಧಗಂಟೆ ಕಾಲ ಎಲ್ಲರನ್ನೂ ಉದ್ದೇಶಿಸಿ ಮಾತನಾಡಲಿದ್ದಾರೆ. ನಾಗರಿಕರಿಗೆ ಮುಕ್ತ ಆಹ್ವಾನ ಇದೆ. ಅಭಿನಂದನಾ ಸಮಾರಂಭವನ್ನು ಸಂಭ್ರಮದಿಂದ ಆಚರಿಸಬೇಕು. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗುವುದು. ಎಲ್ಲರೂ ಸೇರಿ ಯಶಸ್ವಿಗೊಳಿಸೋಣ ಎಂದು ಮನವಿ ಮಾಡಿದರು. ತುಮಕೂರಿನಲ್ಲಿ ಇದೇ 9ರಂದು ಆಯೋಜಿಸಿರುವ ಯಡಿಯೂರಪ್ಪನವರ ಅಭಿಮಾನೋತ್ಸವಕ್ಕೆ ಸಹ ಸಾಕಷ್ಟು ಜನರು ಬರಲಿದ್ದಾರೆ ಎಂದು ವಿವರಿಸಿದರು.

ಇನ್ನು ಎಲ್ಲಾ ಉಪ ಚುನಾವಣೆಗಳಲ್ಲಿ ಆಡಳಿತ ಪಕ್ಷವೇ ಗೆಲುವು ಸಾಧಿಸಿದೆ. ಬಿಜೆಪಿ ಇದ್ದಾಗ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಗೆದ್ದಿರುವುದು ದೊಡ್ಡ ವಿಚಾರ ಅಲ್ಲ. ಇದಕ್ಕಿಂತ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ದೊಡ್ಡದು ಎಂದರು.

ರಾಜ್ಯದಲ್ಲಿ ಒಂದಲ್ಲ ಒಂದು ಉಪ ಚುನಾವಣೆಗಳು ನಡೆಯುತ್ತಲೇ ಇರುತ್ತವೆ. ಈ ಗೆಲುವುಗಳು ಯಾವುದಕ್ಕೂ ಮಾನದಂಡ ಅಲ್ಲ. ಒಮ್ಮೆ ಬಿಜೆಪಿ ಆಡಳಿತವಿದ್ದಾಗ 16ಕ್ಕೆ 15ರಲ್ಲಿ ಬಿಜೆಪಿ ಗೆದ್ದಿತ್ತು. ಆದರೆ ನಂತರ ಬಿಜೆಪಿ ಅಧಿಕಾರ ಕಳೆದುಕೊಂಡಿತು. ಜನರ ತೀರ್ಮಾನಕ್ಕೆ ಬದ್ಧರಾಗಬೇಕು ಎಂದು ಹೇಳಿದರು.


Spread the love

About Laxminews 24x7

Check Also

ವ್ಯೂ ಪಾಯಿಂಟ್‌ ನಲ್ಲಿ ಸಿಡಿಲು ಬಡಿದು ನಾಲ್ವರು ವಿದ್ಯಾರ್ಥಿಗಳ ಸಾವು

Spread the loveತಿರುವನಂತಪುರಂ: ವ್ಯೂ ಪಾಯಿಂಟ್ ನಲ್ಲಿ ಸಿಡಿಲು ಬಡಿದು ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಕೇರಳದ ಮಲಪ್ಪುರಂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ