Breaking News

ಕಾಂಗ್ರೆಸ್‌ ಸರ್ಕಾರಕ್ಕೆ ಹುಚ್ಚು ಹಿಡಿದಿದೆ: ವಿಜಯೇಂದ್ರ ಕಿಡಿ

Spread the love

ಬೆಂಗಳೂರು: ಶಾಲೆಗಳಲ್ಲಿ ಹಿಜಬ್ ಧರಿಸಲು ಅಧಿಕೃತ ಮಾಡಿದ್ದು ಸರಿಯಲ್ಲ. ಕಾಂಗ್ರೆಸ್ (Congress) ಸರ್ಕಾರಕ್ಕೆ ಹುಚ್ಚು ಹಿಡಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ  ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ವಸ್ತ್ರಸಂಹಿತೆ ಕುರಿತು ರಾಜ್ಯ ಸರ್ಕಾರದ ಆದೇಶ ವಿಚಾರವಾಗಿ ಬೆಂಗಳೂರಿನಲ್ಲಿ ಅವರು ಮಾತನಾಡಿದರು. ಈ ವೇಳೆ, ಸರ್ಕಾರದ ಪಾಪದ ಕೊಡ ತುಂಬಿದೆ. ಇವರ ಯೋಗ್ಯತೆಗೆ ಆಡಳಿತ ನಡೆಸಲು ಸಾಧ್ಯವಾಗದೇ, ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಾ ಬರುತ್ತಿದ್ದಾರೆ.

ರಾಜ್ಯದಲ್ಲಿ ಮಾಡಬೇಕಾದ ಸಾಕಷ್ಟು ಕೆಲಸಗಳಿವೆ. ಸರ್ಕಾರದ ನಿರ್ಧಾರಕ್ಕೆ ಮುಂದಿನ ದಿನಗಳಲ್ಲಿ ರಾಜ್ಯದ ಜನ ಉತ್ತರ ಕೊಡುತ್ತಾರೆ. ಹಿಜಾಬ್ ವಿಚಾರ ಇನ್ನೂ ಕೋರ್ಟ್‍ನಲ್ಲಿದೆ. ಅಲ್ಪಸಂಖ್ಯಾತರನ್ನು ಓಲೈಸಲು ಕಾಂಗ್ರೆಸ್ ಯಾವ ಮಟ್ಟಕ್ಕೂ ಹೇಸುವುದಿಲ್ಲ ಎಂದು ತೋರಿಸಿದ್ದಾರೆ. ಹಿಂದೂಗಳಿಗೆ ಕಾಂಗ್ರೆಸ್ ಸರ್ಕಾರ ನಿರಂತರ ಅಪಮಾನ ಮಾಡುತ್ತಿದೆ. ರಾಜ್ಯದಲ್ಲಿ ಪ್ರಚೋದನೆ ಮಾಡುವ, ಪರಸ್ಪರ ಎತ್ತಿ ಕಟ್ಟುವ ಷಡ್ಯಂತ್ರ ಕಾಂಗ್ರೆಸ್ ಸರ್ಕಾರದ ನಿರ್ಧಾರಗಳಲ್ಲಿ ಇದೆ ಎಂದು ಆರೋಪಿಸಿದ್ದಾರೆ.

ಉಪಚುನಾವಣೆ ಗೆದ್ದ ಅಮಲಿನಲ್ಲಿ ಈ ರೀತಿ ತೀರ್ಮಾನ ತೆಗೆದುಕೊಳ್ಳುತ್ತಿರಬಹುದು. ಸರ್ಕಾರ ಅಭಿವೃದ್ಧಿ ಮರೆತು ಹಿಂದೂಗಳಿಗೆ ಅಪಮಾನ ಮಾಡಿಕೊಂಡು ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ಮಾಡಿಕೊಂಡು ಬರುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಮಹಾನಗರ ಪಾಲಿಕೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ದೂರು

Spread the loveಬೆಳಗಾವಿ: ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ನಿರ್ಣಯ ಕೈಗೊಳ್ಳಲು ಹಿಂದೇಟು ಹಾಕಿರುವ ಬೆಳಗಾವಿ ಮಹಾನಗರ ಪಾಲಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ