ಬಳ್ಳಾರಿ: ರಾಜ್ಯ ಬಿಜೆಪಿಯ ಪಾದಯಾತ್ರೆಗೆ ಪ್ರತಿಯಾಗಿ ಜನಾಂದೋಲನ ಆಕ್ರೋಶ ಯಾತ್ರೆ ನಡೆಸಲು ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದ್ದು, ಈ ಮೂಲಕ ಬಳ್ಳಾರಿಯಲ್ಲಿ ಮತ್ತೊಂದು ಹೈವೋಲ್ಟೇಜ್ ರಾಜಕೀಯ ಯಾತ್ರೆಗೆ ವೇದಿಕೆ ಸಿದ್ಧಗೊಂಡಿದೆ.
ಬಿಜೆಪಿಯ ಬಳ್ಳಾರಿ ಚಲೋ ಪಾದಯಾತ್ರೆಗೆ ತಕ್ಕ ತಿರುಗೇಟು ನೀಡಲು ಕಾಂಗ್ರೆಸ್ ನಾಯಕರು ಪ್ರತಿತಂತ್ರ ರೂಪಿಸಿದ್ದಾರೆ. ಬಿಜೆಪಿ ನಾಯಕರ ಆರೋಪಗಳಿಗೆ ನೇರವಾಗಿ ಜನರ ಮುಂದೆಯೇ ಉತ್ತರ ನೀಡಲು ನಿರ್ಧರಿಸಿರುವ ಕಾಂಗ್ರೆಸ್, ಬಿಜೆಪಿ ಪಾದಯಾತ್ರೆ ಸಾಗಿದ ಮಾರ್ಗದಲ್ಲೇ ‘ಜನಾಂದೋಲನ ಆಕ್ರೋಶ ಯಾತ್ರೆ’ಯನ್ನು ಸಂಘಟಿಸಲು ಮುಂದಾಗಿದೆ.
ಈ ಯಾತ್ರೆಗೆ ಅಂತಿಮ ರೂಪ ನೀಡುವ ಸಂಬಂಧ ಸ್ಥಳೀಯ ಕಾಂಗ್ರೆಸ್ ನಾಯಕರು ಪಕ್ಷದ ಹೈಕಮಾಂಡ್ ಜತೆ ಚರ್ಚೆ ನಡೆಸಲಿದ್ದಾರೆ. ಬಿಜೆಪಿ ಪಾದಯಾತ್ರೆ ಬಳ್ಳಾರಿ ತಲುಪುವ ಮುನ್ನವೇ ಈ ಕೌಂಟರ್ ಯಾತ್ರೆಯನ್ನು ಕಾರ್ಯರೂಪಕ್ಕೆ ತರಲು ಯೋಜನೆ ರೂಪಿಸಲಾಗಿದೆ.
Laxmi News 24×7