Breaking News

ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಹತ್ಯೆ ಕೇಸ್ – ಉತ್ತರಾಖಂಡ್‌ನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌

Spread the love

ಉಡುಪಿ: ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.

ಬಿಹಾರ ಮೂಲದ ಸೂರಜ್ (31) ಬಂಧಿತ ಆರೋಪಿ. ಉತ್ತರಾಖಂಡ್‌ನ ನೈನಿತಾಲ್ ಜಿಲ್ಲೆಯ ಹಲ್ದ್ವಾನಿ ಬಳಿ ವಿಶೇಷ ಕಾರ್ಯಾಚರಣೆ ನಡೆಸಿ, ತಲೆಮರೆಸಿಕೊಂಡಿದ್ದ ಸೂರಜ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಶೂಟೌಟ್ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

ಸೂರಜ್‌ ವಿರುದ್ಧ ಈ ಪ್ರಕರಣದಲ್ಲಿ ಒಳಸಂಚು ರೂಪಿಸಿ, ಹಣಕಾಸು ಪೂರೈಕೆ ಮಾಡಿದ್ದ ಆರೋಪ ಇದೆ. ಈಗಾಗಲೇ ಬಂಧಿತರಾಗಿರುವ ಇರ್ಷಾದ್, ಚಿರಾಗ್, ಸದಾನಂದ ಹಾಗೂ ಕಿಶೋರ್ ಜೊತೆ ಸೂರಜ್ ಕೈಜೋಡಿಸಿದ್ದ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆಯುತ್ತಿದೆ.


Spread the love

About Laxminews 24x7

Check Also

ನಾಗೇಂದ್ರ ರಾಜೀನಾಮೆ ಬಗ್ಗೆ ನೋಟಿಸ್‌ ‌ಕೊಟ್ಟು ವಿಪಕ್ಷ ಚರ್ಚೆ ಮಾಡಲಿ: ಡಿಕೆಶಿ

Spread the loveಬೆಂಗಳೂರು: ವಿಧಾನ ಪರಿಷತ್ ಕಲಾಪ 5ನೇ ದಿನವೂ ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಕಲಾಪ ಬಲಿಯಾಯ್ತು. ವಿಪಕ್ಷಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ