Breaking News

ಬಳ್ಳಾರಿ ಚಲೋ ಪ್ರೇರಣೆಯಿಂದಲೇ ಕಾಂಗ್ರೆಸ್ ಪಾದಯಾತ್ರೆ: ವಿಜಯೇಂದ್ರ

Spread the love

ಚಿತ್ರದುರ್ಗ: ಬಿಜೆಪಿ ನಡೆಸಿದ `ಬಳ್ಳಾರಿ ಚಲೋ’ ಪಾದಯಾತ್ರೆಯ ಪ್ರೇರಣೆಯಿಂದಲೇ ಇಂದು ಕಾಂಗ್ರೆಸ್  ಪಕ್ಷ ಪಾದಯಾತ್ರೆ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ  ವ್ಯಂಗ್ಯವಾಡಿದರು.

ಚಿತ್ರದುರ್ಗದ ಜಯದೇವ ಕ್ರೀಡಾಂಗಣದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಪ್ರತಿಷ್ಠಾಪಿಸಿರುವ `ಹಿಂದೂ ಮಹಾಗಣಪತಿ’ಯ ದರ್ಶನ ಪಡೆದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಕೆಪಿಸಿಸಿ ಅಧ್ಯಕ್ಷರು ನನ್ನದೇ ಕ್ಷೇತ್ರದಲ್ಲಿ ಪಾದಯಾತ್ರೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಹೋರಾಟದ ಕಿಚ್ಚು ಹಚ್ಚಿಸಿದ ಕೀರ್ತಿ ಶಿಕಾರಿಪುರಕ್ಕೆ ಸಲ್ಲುತ್ತದೆ. ಕೆಪಿಸಿಸಿ ಅಧ್ಯಕ್ಷರಿಗೆ ಒಳ್ಳೆಯದಾಗಲಿ ಎಂದು ನಾನು ಹಾರೈಸುತ್ತೇನೆ ಎಂದು ಹೇಳಿದರು.

ಹರಿಪ್ರಸಾದ್‌ಗೆ ವಿಜಯೇಂದ್ರ ತಿರುಗೇಟು:
ತಮ್ಮ ರಾಜಕೀಯ ಅನುಭವದ ಕುರಿತು ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಮಾಡಿರುವ ಟೀಕೆಗೆ ತಿರುಗೇಟು ನೀಡಿದ ವಿಜಯೇಂದ್ರ, ನಾನು ಎಲ್‌ಕೆಜಿ ವಿದ್ಯಾರ್ಥಿ ಇರಬಹುದು, ಮೊದಲ ಸಲ ಶಾಸಕನಾಗಿರಬಹುದು. ಆದರೆ ಹರಿಪ್ರಸಾದ್ ಅವರು ಪಿಹೆಚ್‌ಡಿ ಮಾಡಿದ್ದರೂ ಇದುವರೆಗೂ ನೇರ ಚುನಾವಣೆಯಲ್ಲಿ ಗೆದ್ದಿಲ್ಲ ಎಂದು ತಿವಿದರು.

ಬ್ಯಾನರ್ ಹರಿದು ಹಾಕುವ ಕೀಳು ರಾಜಕಾರಣದ ಅಗತ್ಯ ನಮಗಿಲ್ಲ:
ಕೆಲವರು ಬ್ಯಾನರ್ ಹರಿದು ಹಾಕಿಸಿಕೊಂಡೇ ಪ್ರಚಾರ ಪಡೆಯುತ್ತಿದ್ದಾರೆ. ಅಂತಹ 420 ರಾಜಕಾರಣ ನಮಗೆ ಬೇಕಾಗಿಲ್ಲ ಎಂದು ಕಟುವಾಗಿ ಟೀಕಿಸಿದರು.

ಆರ್‌ಟಿಜಿಎಸ್ ಮೂಲಕ ಹಣ ಪಡೆದಿರುವ ಕುರಿತ ಹರಿಪ್ರಸಾದ್ ಅವರ ಆರೋಪಕ್ಕೆ ಆಕ್ರೋಶ ವ್ಯಕ್ತಪಡಿಸಿದ ವಿಜಯೇಂದ್ರ, ಹರಿಪ್ರಸಾದ್ ಅವರು ತಮ್ಮ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು. ಈ ಎಲ್ಲ ಆರೋಪಗಳು ನ್ಯಾಯಾಲಯದಲ್ಲಿ ಇತ್ಯರ್ಥವಾಗಿವೆ. ನಾನು ನಿರಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದೆ ಎಂದು ಸ್ಪಷ್ಟಪಡಿಸಿದರು.

ಹರಿಪ್ರಸಾದ್ ಅವರು ಹತಾಶರಾಗಿ ಮಾತನಾಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ಕಾರ್ಯಕ್ರಮಗಳಿಗೂ ಅವರನ್ನು ಕರೆಯುತ್ತಿಲ್ಲ. ಹೀಗಾಗಿ ಪಾದಯಾತ್ರೆ ಮಾಡಿ ಅನುಕಂಪ ಗಿಟ್ಟಿಸಿಕೊಳ್ಳಲು ಅವರು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ಮಠಾಧೀಶರ ಕುರಿತ ಸರ್ಕಾರದ ಹೇಳಿಕೆಗೆ ಆಕ್ಷೇಪ:
ಮಠಾಧೀಶರು ಸರ್ಕಾರದ ಯೋಜನೆಗಳ ರಾಯಭಾರಿಗಳಾಗಬೇಕು ಎಂಬ ಹೇಳಿಕೆಗೆ ವಿಜಯೇಂದ್ರ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಬರಗಾಲವಿದ್ದರೂ ರೈತರಿಗೆ ಸೂಕ್ತ ಪರಿಹಾರ ನೀಡದ ಕಾರಣಕ್ಕೆ ಇಂದು ಜನರು ಸರ್ಕಾರಕ್ಕೆ ಥೂ, ಛೀ ಎಂದು ಧಿಕ್ಕಾರ ಕೂಗುತ್ತಿದ್ದಾರೆ. ಮಠಾಧೀಶರು ನನ್ನ ಸೇವೆ ಮಾಡಬೇಕೆಂದು ಹೇಳುತ್ತಿದ್ದಾರೆ. ಆದರೆ ಎಲ್ಲವನ್ನೂ ಕಾಲವೇ ನಿರ್ಧರಿಸುತ್ತದೆ ಎಂದು ಕಿಡಿಕಾರಿದರು.


Spread the love

About Laxminews 24x7

Check Also

ದೇಸೂರು ಶಾಲೆಗೆ 5 ಎಕರೆ ಜಮೀನು ಕೊಡಿಸಲು ಪ್ರಯತ್ನ: ಲಕ್ಷ್ಮೀ ಹೆಬ್ಬಾಳಕರ್

Spread the loveಬೆಳಗಾವಿ: ದೇಸೂರು ಗ್ರಾಮದ ಸರ್ಕಾರಿ ಆದರ್ಶ ಪೂರ್ವ ಪ್ರಾಥಮಿಕ ಮರಾಠಿ ಶಾಲೆಯ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಶಾಸಕಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ