Breaking News

ಭದ್ರಾವತಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

Spread the love

‎ಶಿವಮೊಗ್ಗ: ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಭದ್ರಾವತಿಯ  ಅನ್ವರ್ ಕಾಲೋನಿಯಲ್ಲಿ ನಡೆದಿದೆ.

‎ನಗರದ ಹಳದಮ್ಮ ಬೀದಿ ನಿವಾಸಿ ವಿಶ್ವನಾಥ್ ಅಲಿಯಾಸ್ ಮುದ್ದೆ (35) ಹಲ್ಲೆಗೊಳಗಾದ ಯುವಕ. ಅಂಗಡಿಗೆ ಟೀ ಕುಡಿಯಲು ಹೋಗಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ, ಸ್ಥಳದಿಂದ ಪರಾರಿಯಾಗಿದ್ದಾರೆ.

‎ಮಾರಕಾಸ್ತ್ರಗಳಿಂದ ಏಕಾಏಕಿ ದಾಳಿ ಮಾಡಿದ ಪರಿಣಾಮ ಎರಡು ಕೈಗಳು ತುಂಡಾಗುವ ಹಂತಕ್ಕೆ ತಲುಪಿವೆ. ಗಂಭೀರವಾಗಿ ಗಾಯಗೊಂಡಿದ್ದ ಆತನಿಗೆ ಭದ್ರಾವತಿಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love

About Laxminews 24x7

Check Also

ಕುಡಿಯುವ ನೀರಿಗಾಗಿ 224 ಕೋಟಿ ಅನುದಾನ ಬಿಡುಗಡೆ – ಈಶ್ವರ್ ಖಂಡ್ರೆ

Spread the loveಬೆಂಗಳೂರು: ಕುಡಿಯುವ ನೀರಿಗಾಗಿ 224 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ