Breaking News

ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ: ಚರಂತಿಮಠ ಗೆಲುವಿಗೆ ಪೂರಕ ವಾತಾವರಣ

Spread the love

ಬಾಗಲಕೋಟೆ: ನಗರದ ಶಿವಾನಂದ ಜೀನದಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಶುಕ್ರವಾರ ಅಮೀನಗಡ ಹಾಗೂ ಶಿರಗುಪ್ಪಿ ಭಾಗಗಳ ಕಾಂಗ್ರೆಸ್ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.
ಸಂಸದ ಜಗದೀಶ್ ಶೆಟ್ಟರ್ ಮಾತನಾಡಿ, ಬಾಗಲಕೋಟ ಮತಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿ ಅಭ್ಯರ್ಥಿ ಡಾ. ವೀರಣ್ಣ ಚರಂತಿಮಠ ಅವರು ಅಪಾರ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು. ರಸ್ತೆ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿರುವುದರ ಜೊತೆಗೆ ಮುಳುಗಡೆ ಸಂತ್ರಸ್ತರಿಗೆ ಸಹಾಯ ಮಾಡಿರುವುದು ಗಮನಾರ್ಹವಾಗಿದೆ ಎಂದು ವಿವರಿಸಿದರು.
ಜನಸಾಮಾನ್ಯರ ದನಿಯಾಗಿ ಜನಪರ ಆಡಳಿತ ನಡೆಸುತ್ತಿರುವ ಚರಂತಿಮಠ ಅವರ ಕಾರ್ಯಶೈಲಿಯನ್ನು ಮೆಚ್ಚಿ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರುತ್ತಿದ್ದಾರೆ. ಇದರಿಂದ ಬಿಜೆಪಿ ಪಕ್ಷ ಇನ್ನಷ್ಟು ಬಲಿಷ್ಠವಾಗುತ್ತಿದೆ. ಕ್ಷೇತ್ರದಲ್ಲಿ ಚರಂತಿಮಠ ಅವರ ಗೆಲುವಿಗೆ ಪೂರಕವಾದ ವಾತಾವರಣ ನಿರ್ಮಾಣವಾಗಿದ್ದು, ಎಲ್ಲರೂ ಅವರ ಗೆಲುವಿಗಾಗಿ ಶ್ರಮಿಸೋಣ ಎಂದು ಕರೆ ನೀಡಿದರು.
ಮಾಜಿ ಸಚಿವ ಬಿ. ಶ್ರೀರಾಮುಲು ಅವರ ನೇತೃತ್ವದಲ್ಲಿ ನಡೆದ ಈ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ವೀರಣ್ಣ ಚರಂತಿಮಠ, ಜಿಲ್ಲಾ ಅಧ್ಯಕ್ಷ ಶಾಂತಗೌಡ ಪಾಟೀಲ, ಶರಣು ತಳ್ಳಿಕೇರಿ, ರಾಜು ನಾಯ್ಕರ್, ಗ್ರಾಮೀಣ ಅಧ್ಯಕ್ಷ ಸುರೇಶ ಕೋಣ್ಣೂರ, ವಿಜಯಕುಮಾರ, ಕೊಣ್ಣೂರ, ಬಾಬು ಛಬ್ಬಿ, ಸಂತೋಷ ತುಂಗಳ, ಸುಜಾತಾ ತತ್ರಾಣಿ, ಬಸವರಾಜ ಬೇವೂರ, ಪುಂಡಲೀಕ್ ರಕ್ಕಸಗಿ, ರವಿ ತುಂಬಗಿ, ಗಣೇಶ ಗುಡ್ಡದ, ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪಕ್ಹಕ್ಕೆ ಸೇರ್ಪಡೆಗೋಂಡವರು, ಶಿವಚಾರ ಸಮಾಜದ ಅಧ್ಯಕ್ಷ ಬಿ. ಎಸ್. ನೀಡಗುಂದಿ, ರಮೇಶ ಬಸರಕೋಡ, ಮಾಗುಂಡಪ್ಫ ಮುದ್ದೆಬಿಹಾಳ, ಚಂದಶೇಖರ ಬಳಬಟ್ಟಿ, ಶೇಖಪ್ಪ ಅಣಗಿ, ರೂಪಾ ನಿಡಗುಂದಿ, ಶಂಕ್ರಮ್ಮ ನೀಡಗುಂದಿ, ದಾಕ್ಷಾಯಣಿ ಹೋಂಬಳ್ಳಿ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಬಿಜಿಪಿ ಸೇರ್ಪಡೆಗೊಂಡರು.


Spread the love

About Laxminews 24x7

Check Also

ಬಸವೇಶ್ವರ ಪ.ಪೂ ವಾಣಿಜ್ಯ ಮಹಾವಿದ್ಯಾಲಯದ ಫಲಿತಾಂಶ : ಶೇ.88.10%

Spread the loveಬಾಗಲಕೋಟೆ: 2025-26ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿಯ ಫಲಿತಾಂಶ ಪ್ರಕಟವಾಗಿದ್ದು, ಮಹಾವಿದ್ಯಾಲಯದ ಕುಮಾರ ಮಂಥನ ಮಹಾವೀರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ