Breaking News

ಮುಂಬರುವ ಗ್ರಾ.ಪಂ,ಜಿ.ಪಂ,ತಾ.ಪಂ ಚುನಾವಣೆ ಬಿಜೆಪಿ ತಯಾರಿ – ಮತಕ್ಷೇತ್ರವಾರು ಸಂಘಟನಾತ್ಮಕ ಸಭೆ

Spread the love

ಸಭೆಯನ್ನು ಉದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ ಬರುವ ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ,ತಾಲೂಕು ಪಂಚಾಯಿತಿ ಚುನಾವಣೆಗೆ ಸಜ್ಜಾಗಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಬಲಗೊಳಿಸಲು ಮುಖಂಡರಿಗೆ,ಕಾರ್ಯಕರ್ತರಿಗೆ ಕರೆ ನೀಡಿದರು ನಂತರ ಮಾತನಾಡಿದ ಅವರು ಪ್ರತಿ ಹಳ್ಳಿ ಹಳ್ಳಿಗೂ ತೆರಳಿ ವಿಬಿ-ಜಿ ರಾಮ್ ಜಿ ಜಾಗೃತಿ ಸಭೆ,ಎಸ್.ಐ.ಆರ್ ಕುರಿತು ಸಭೆಗಳನ್ನು ಆಯೋಜಿಸಲಾಗುವುದು ಎಂದು ಹೇಳಿದರು.


ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಮಾತನಾಡಿ ಬೆಳಗಾವಿ ಜಿಲ್ಲೆ ರಾಜ್ಯ ರಾಜಕಾರಣದಲ್ಲಿ ತನ್ನದೇ ಆದ ಪ್ರಭಾವ ಹೊಂದಿದ್ದು, ಈ ಬಾರಿ ನಮ್ಮ ಜಿಲ್ಲೆಯಲ್ಲಿ ಅತಿ ಹೆಚ್ಚು ಮತಕ್ಷೇತ್ರದಲ್ಲಿ ಕಮಲ ಅರಳಿಸಲು ಪಣ ತೊಡೋಣ ಎಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿಜಿ ರವರ ಜನಪರ ಯೋಜನೆಗಳನ್ನು ಮನೆ ಮನೆಗೂ ತಲುಪಿಸಿ ಪಕ್ಷ ಸಂಘಟನೆ ಬಲಪಡಿಸೋಣ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ವಿಭಾಗ ಸಹ ಪ್ರಭಾರಿಗಳಾದ ಬಸವರಾಜ ಯಂಕಂಚಿ, ಶಾಸಕ ವಿಠ್ಠಲ ಹಲಗೇಕರ,ಮಾಜಿ ಶಾಸಕರಾದ ಸಂಜಯ್ ಪಾಟೀಲ್,ಡಾ.ವಿಶ್ವನಾಥ ಪಾಟೀಲ, ಅರವಿಂದ್ ಪಾಟೀಲ, ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ ದೇಶಪಾಂಡೆ, ಮಲ್ಲಿಕಾರ್ಜುನ ಮಾದಮ್ಮನವರ,ಧನಶ್ರೀ ದೇಸಾಯಿ ಹಾಗೂ ಪ್ರಮುಖರು, ಪದಾಧಿಕಾರಿಗಳು


Spread the love

About Laxminews 24x7

Check Also

ಮಹಾವೀರ ನಗರದಲ್ಲಿ ಶಾಸಕ ಆಸೀಫ್ ಸೇಠ್ ಜನತಾ ದರ್ಬಾರ್: ಸಾರ್ವಜನಿಕರ ಅಹವಾಲು ಆಲಿಕೆ

Spread the loveಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಆಸೀಫ್ ಸೇಠ್ ಅವರು ಮಹಾವೀರ ನಗರದಲ್ಲಿ ನಡೆಸಿದ ‘ಜನತಾ ದರ್ಬಾರ್’ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ