ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನಮ್ಮ ಸಂಕಲ್ಪ. ಇಂದು ಕ್ಷೇತ್ರದ ಹಿರೇಕುಂಬಿ ಗ್ರಾಮದ ಪರಮ ಪವಿತ್ರ ಶ್ರೀ ಅಮೋಘಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಭಕ್ತಾದಿಗಳ ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ CMIDP ಯೋಜನೆಯಡಿ ಸುಮಾರು 49.00 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಸಮುದಾಯ ಭವನಕ್ಕೆ ಶಾಸ್ತ್ರೋಕ್ತವಾಗಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು.
ಗ್ರಾಮೀಣ ಭಾಗದ ದೇವಸ್ಥಾನಗಳು ಕೇವಲ ಭಕ್ತಿಯ ಕೇಂದ್ರಗಳಲ್ಲ, ಅವು ಸಾಮಾಜಿಕ ಚಟುವಟಿಕೆಗಳ ತಾಣಗಳೂ ಹೌದು. ಈ ಸಮುದಾಯ ಭವನವು ಮುಂದಿನ ದಿನಗಳಲ್ಲಿ ಗ್ರಾಮದ ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳಿಗೆ ಸುಸಜ್ಜಿತ ವೇದಿಕೆಯಾಗಲಿದೆ. ಗುಣಮಟ್ಟದ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಪರಮ ಪೂಜ್ಯರು ,ಸ್ಥಳೀಯ ಮುಖಂಡರು ಹಾಗೂ ಅಪಾರ ಸಂಖ್ಯೆಯ ಸದ್ಭಕ್ತರು ಉಪಸ್ಥಿತರಿದ್ದರು.
Laxmi News 24×7