Breaking News

ಮಂಡೋಳಿ-ಖಾದರವಾಡಿ ಗ್ರಾಮಗಳಿಗೆ ₹2.50 ಕೋಟಿ ವೆಚ್ಚದಲ್ಲಿ ಸಂಪರ್ಕ ರಸ್ತೆ ನಿರ್ಮಾಣ

Spread the love

ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮಂಡೋಳಿ ಗ್ರಾಮದಲ್ಲಿ ಸುಮಾರು 2.50 ಕೋಟಿ ರೂ. ವೆಚ್ಚದಲ್ಲಿ ಮಂಡೋಳಿ ಮತ್ತು ಖಾದರವಾಡಿ ಗ್ರಾಮಗಳನ್ನು ಸಂಪರ್ಕಿಸುವ ಪ್ರಮುಖ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು.

ಸ್ಥಳೀಯ ಜನಪ್ರತಿನಿಧಿಗಳು, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಹಾಗೂ ಗ್ರಾಮಸ್ಥರು ಭೂಮಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.

ಈ ರಸ್ತೆ ನಿರ್ಮಾಣದಿಂದ ಮಂಡೋಳಿ ಮತ್ತು ಖಾದರವಾಡಿ ಗ್ರಾಮಗಳ ನಡುವಿನ ಸಂಪರ್ಕ ಮತ್ತಷ್ಟು ಸುಗಮವಾಗಲಿದ್ದು, ಎರಡೂ ಗ್ರಾಮಗಳ ಜನರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ. ಗ್ರಾಮೀಣ ಪ್ರದೇಶಗಳ ರಸ್ತೆ ಅಭಿವೃದ್ಧಿಯಿಂದ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗುವುದಲ್ಲದೆ, ಕೃಷಿ ಉತ್ಪನ್ನಗಳ ಸಾಗಾಟಕ್ಕೂ ನೆರವಾಗಲಿದೆ. ಇದರಿಂದ ಸ್ಥಳೀಯ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ದೊರೆಯಲಿದೆ ಎಂದು ಮೃಣಾಲ್ ಹೆಬ್ಬಾಳಕರ್ ಹೇಳಿದರು.

ಈ ಸಂದರ್ಭದಲ್ಲಿ ಆಯಾ ಗ್ರಾಮಗಳ ಹಿರಿಯರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಾಳು ದೇಸೂರಕರ್, ಮನೋಹರ ಬೆಳಗಾಂವ್ಕರ್ ಸೇರಿದಂತೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪಾರ್ಕ್ ಜಾಗವನ್ನೇ ಸೈಟ್‌ ಮಾಡಿ ಖಾಸಗಿಯವರಿಗೆ ಖಾತೆ ಮಾಡಿದ್ದ ಪಿಡಿಒ ಸಸ್ಪೆಂಡ್‌!

Spread the loveಚಿಕ್ಕಬಳ್ಳಾಪುರ: ಪಾರ್ಕ್ ಹಾಗೂ ನಾಗರಿಕ ಸೌಲಭ್ಯಗಳಿಗಾಗಿ ಮೀಸಲಿಟ್ಟಿದ್ದ ಜಾಗದಲ್ಲಿ ಅಕ್ರಮವಾಗಿ ನಿವೇಶನಗಳನ್ನ  ಸೃಷ್ಟಿಸಿ, ಖಾಸಗಿ ವ್ಯಕ್ತಿಗಳ ಹೆಸರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ