Breaking News

ಅಡುಗೆ ಅನಿಲ ಕೊರತೆ – ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಕೆಶಿ

Spread the love

ಬೆಂಗಳೂರು: ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಆಗ್ರಹಿಸಿದ್ದಾರೆ.

ಬೆಂಗಳೂರಲ್ಲಿ ಮಾತನಾಡಿದ ಅವರು, ಅಡುಗೆ ಅನಿಲ ಸಿಲಿಂಡರ್ ಕೊರತೆಯಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಈ ವಿಚಾರವಾಗಿ ಬಿಜೆಪಿಯ ಯಾವುದೇ ಸಂಸದರು ಬಾಯಿ ಬಿಡುತ್ತಿಲ್ಲ. ಹಳ್ಳಿಜನರು, ರೈತರು ಹಾಗೂ ಹೊಟೇಲ್‌ಗಳಿಗೆ ಸೌದೆ ಒಲೆ ಬಳಸಲು, ಕಟ್ಟಿಗೆ ಬಳಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದಿದ್ದಾರೆ.

ಈ ಇಂಧನ ಬೆಲೆ ಏರಿಕೆಯಿಂದ ಜನ ಪರದಾಡುತ್ತಿದ್ದಾರೆ. ಇದರಲ್ಲಿ ರಾಜ್ಯ ಸರ್ಕಾರ ಏನೂ ಮಾಡಲು ಆಗುವುದಿಲ್ಲ. ಕೇಂದ್ರ ಸರ್ಕಾರ ಇದಕ್ಕೆ ಹೊಣೆ. ಕೇಂದ್ರ ಸರ್ಕಾರ ವಿದೇಶಾಂಗ ನೀತಿ ಬಗ್ಗೆ ಸ್ಪಷ್ಟವಾಗಿ ಮಾತನಾಡುತ್ತಿಲ್ಲ. ಈ ವಿಚಾರದಲ್ಲಿ ಕೇಂದ್ರದ ಧೋರಣೆ ಖಂಡನೀಯ. ನಾಗರಿಕರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ನೋಡಿಕೊಳ್ಳಬೇಕು. ಮುಂದೆ ಪರಿಸ್ಥಿತಿ ಹೇಗಿರುತ್ತದೆಯೋ ಹೇಗೋ ಈಗಾಗಲೇ ಗ್ಯಾಸ್ ಚಾಲಿತ ಆಟೋ ಬಂದ್ ಆಗಿದ್ದು, ಸಮಸ್ಯೆ ಹೆಚ್ಚುತ್ತಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ