Breaking News

ಮಹಾರಾಷ್ಟ್ರದಲ್ಲಿ ಕೊರೊನಾಗೆ ಮೂರನೇ ವ್ಯಕ್ತಿ ಬಲಿಯಾಗಿದ್ದು, ಕೊರೊನಾ ದೇಶದಲ್ಲಿ ಈವರೆಗೂ 8 ಜನರನ್ನು ಬಲಿಪಡೆದುಕೊಂಡಿದೆ

Spread the love

ವಿಶ್ವಾದ್ಯಂತ ಹೆಚ್ಚುತ್ತಿರುವ ಮಾರಣಾಂತಿಕ ಕೊರೊನಾ ವೈರಸ್‍ಗೆ ದೇಶದಲ್ಲಿ ಮತ್ತೊಂದು ಬಲಿಯಾಗಿದೆ. ಮುಂಬೈನಲ್ಲಿ ಕೊರೊನಾ ಸೋಂಕಿಗೆ ವಿದೇಶಿ ಪ್ರವಾಸಿಗ ಸಾವನ್ನಪ್ಪಿದ್ದು, ಈವರೆಗೆ ದೇಶದಲ್ಲಿ ಒಟ್ಟು 8 ಜನರು ಮೃತಪಟ್ಟಿದ್ದಾರೆ.

ಮುಂಬೈನಲ್ಲಿ 68 ವರ್ಷದ ಫಿಲಿಪೈನ್ಸ್ ಪ್ರಜೆ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ. ಮುಂಬೈನ ಕಸ್ತೂರಬಾ ಆಸ್ಪತ್ರೆಯಿಂದ ಪ್ರೈವೇಟ್ ಆಸ್ಪತ್ರೆಗೆ ವ್ಯಕ್ತಿಯನ್ನು ಸ್ಥಳಾಂತರಿಸಲಾಗಿತ್ತು. ಅವರು ಮೂತ್ರಪಿಂಡ ವೈಫಲ್ಯ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ.

ಈ ಮೂಲಕ ಮಹಾರಾಷ್ಟ್ರದಲ್ಲಿ ಕೊರೊನಾಗೆ ಮೂರನೇ ವ್ಯಕ್ತಿ ಬಲಿಯಾಗಿದ್ದು, ಕೊರೊನಾ ದೇಶದಲ್ಲಿ ಈವರೆಗೂ 8 ಜನರನ್ನು ಬಲಿಪಡೆದುಕೊಂಡಿದೆ


Spread the love

About Laxminews 24x7

Check Also

HC ಮಹದೇವಪ್ಪ ಸೇರಿದಂತೆ ಕಾಂಗ್ರೆಸ್ ನಾಯಕರ ನಿವಾಸಗಳಿಗೆ ಭೇಟಿ ನೀಡಿದ ಜಾರಕಿಹೊಳಿ

Spread the love ಮೈಸೂರು: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ನಗರದಲ್ಲಿ ಮಂಗಳವಾರ ಸಚಿವ ಎಚ್.ಸಿ. ಮಹದೇವಪ್ಪ ಸೇರಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ