ಧಾರವಾಡ: ಇಡೀ ವಿಶ್ವದ ಜನಜೀವನವನ್ನು ಅಲ್ಲೋಲ ಕಲ್ಲೋಲ ಮಾಡಿರುವ ಮಹಾಮಾರಿ ಕೊರೊನಾ ಭಯಕ್ಕೆ ಧಾರವಾಡದ ಹಾಸ್ಟೆಲ್ ವಿದ್ಯಾರ್ಥಿಗಳು ಜಾಗ ಖಾಲಿ ಮಾಡಿದ್ದಾರೆ.
ಧಾರವಾಡ ನಗರದ ಸಪ್ತಾಪೂರದಲ್ಲಿ ಬಹುತೇಕ ಕೋಚಿಂಗ್ ಕ್ಲಾಸ್‍ಗಳಿವೆ. ಆದರೆ ಆ ಕ್ಲಾಸ್‍ಗಳೆಲ್ಲವೂ ಈಗ ಬಂದ್ ಮಾಡಲಾಗಿದ್ದು, ಸದ್ಯ ಕೋಚಿಂಗ್‍ಗೆ ಬಂದ ವಿದ್ಯಾರ್ಥಿಗಳು ತಮ್ಮ ತಮ್ಮ ಊರಿಗೆ ವಾಪಸ್ ಹೋಗುತ್ತಿದ್ದಾರೆ. ಕೊರೊನಾ ಸೋಂಕು ಬರಬಹುದು ಎಂಬ ಭಯದಿಂದ ಎಲ್ಲಾ ಕೋಚಿಂಗ್ ಕ್ಲಾಸಿನ ಮಾಲಿಕರು ವಿದ್ಯಾರ್ಥಿಗಳಿಗೆ ತಮ್ಮ ಊರಿಗೆ ವಾಪಸ್ ಹೋಗಲು ಹೇಳಿದ್ದಾರೆ.
ಎರಡೇ ದಿನಗಳಲ್ಲಿ ಸಪ್ತಾಪೂರ ಬಡಾವಣೆಯಿಂದ ಬರೋಬ್ಬರಿ 15 ಸಾವಿರ ವಿದ್ಯಾರ್ಥಿಗಳು ಕಾಲ್ಕಿತ್ತಿದ್ದಾರೆ. ಅಲ್ಲದೇ ಇನ್ನೂ ಕೆಲವು ವಿದ್ಯಾರ್ಥಿಗಳು ಇಂದು ಹಾಗೂ ನಾಳೆ ಜಾಗ ಖಾಲಿ ಮಾಡಲಿದ್ದಾರೆ. ಈ ವಿದ್ಯಾರ್ಥಿಗಳು ತಮ್ಮ ಊರಿಗೆ ವಾಪಸ್ ಆಗಿದ್ದಕ್ಕೆ ಹೋಟೆಲ್‍ಗಳಿಗೆ ತುಂಬಲಾಗದ ನಷ್ಟವಾಗಿದೆ. ಯಾಕಂದರೆ ಬೆಳಗ್ಗೆಯಿಂದ ಸಂಜೆಯವರೆಗೆ ಹೋಟೆಲ್‍ಗಳಲ್ಲಿ ವಿದ್ಯಾರ್ಥಿಗಳು ಬಂದು ಊಟ, ತಿಂಡಿ ಮಾಡುತ್ತಿದ್ದರು. ಆದರೆ ಈಗ ವಿದ್ಯಾರ್ಥಿಗಳೇ ಇಲ್ಲದೆ ಇರುವುದರಿಂದ ಹೋಟೆಲ್ ವ್ಯಾಪಾರ ಸ್ಥಬ್ಧವಾಗಿದೆ.