Breaking News

ಗದಗದಲ್ಲಿ ಮೂರುವರೆ ವರ್ಷದ ಕಂದಮ್ಮನಿಗೆ ಕೊರೊನಾ ಸೋಂಕಿರುವ ಶಂಕೆ…….,

Spread the love

ಗದಗ: ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ತಗುಲಿರುವ ಶಂಕಿತ ಪ್ರಕರಣ ವರಿದಿಯಾಗಿದ್ದು, ಲಂಡನ್‍ನಿಂದ ಗದಗಕ್ಕೆ ಬಂದ ಮೂರುವರೆ ವರ್ಷದ ಮಗುವಿಗೆ ಸೋಂಕು ತಟ್ಟಿರುವ ಶಂಕೆ ವ್ಯಕ್ತವಾಗಿದೆ.

ಲಂಡನ್‍ನಿಂದ ಜಿಲ್ಲೆಗೆ ಬಂದಿದ್ದ ಕುಟುಂಬಕ್ಕೆ ಕೊರೊನಾ ಸೋಂಕಿರುವ ಶಂಕೆ ವ್ಯಕ್ತವಾಗಿದೆ. ಸೋಂಕು ಶಂಕಿತ ವ್ಯಕ್ತಿಗಳನ್ನ ಗದಗ ಜಿಮ್ಸ್ ಆಸ್ಪತ್ರೆಯ ಐಸೊಲೇಷನ್ ವಾರ್ಡಿಗೆ ದಾಖಲಿಸಿ, ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಗದಗ ಮೂಲದ ಕುಟುಂಬ ಲಂಡನ್‍ನಲ್ಲಿ ನೆಲೆಸಿತ್ತು. ಆದರೆ ತಂದೆ, ತಾಯಿ ಮಗುವಿನೊಂದಿಗೆ ಮಾರ್ಚ್ 9ರಂದು ಲಂಡನ್‍ನಿಂದ ಗದಗಕ್ಕೆ ಬಂದಿದ್ದರು. ಅದರಲ್ಲೀಗ ಮೂರುವರೆ ವರ್ಷದ ಮಗುವಿನಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದು, ಮಗುವಿನ ಮೇಲೆ ಆರೋಗ್ಯ ಇಲಾಖೆ ನಿಗಾ ವಹಿಸಿದೆ.

ಲಂಡನ್‍ನಿಂದ ಬಂದ ಮಗುವಿನಲ್ಲಿ ವೈರಸ್ ಲಕ್ಷಣಗಳು ಕಂಡುಬಂದಿದ್ದರಿಂದ ತಂದೆ, ತಾಯಿಯ ಮೇಲೂ ನಿಗಾ ವಹಿಸಲಾಗಿದೆ. ತಂದೆ, ತಾಯಿ ಹಾಗೂ ಮಗುವಿನ ರಕ್ತ ಹಾಗೂ ಗಂಟಲು ದ್ರವದ ಮಾದರಿಯನ್ನು ಬೆಂಗಳೂರು ಪ್ರಯೋಗಾಲಯಕ್ಕೆ ಪರೀಕ್ಷಿಸಲು ಕಳುಹಿಸಲಾಗಿದೆ. ಮೂವರನ್ನು ಐಸೊಲೇಷನ್ ವಾರ್ಡಿನಲ್ಲಿ ಇರಿಸಿ, ವೈದ್ಯರ ತಂಡ ತಪಾಸಣೆ ನಡೆಸುತ್ತಿದೆ. ಅವರ ಮೇಲೆ ಆರೋಗ್ಯ ಇಲಾಖೆ ಸೂಚನೆಯಂತೆ 15 ದಿನಗಳ ಕಾಲ ನಿಗಾ ವಹಿಸಲಾಗುತ್ತದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ