Breaking News
Home / new delhi / ಭಾರತದಲ್ಲಿ ಕ್ಷಣಕ್ಷಣಕ್ಕೂ ಹೆಚ್ಚುತ್ತಿದೆ ಕೊರೋನಾ ಸೋಂಕಿತರ ಸಂಖ್ಯೆ..! ಮಹಾಮಾರಿಗೆ 34 ಮಂದಿ ಬಲಿ..!

ಭಾರತದಲ್ಲಿ ಕ್ಷಣಕ್ಷಣಕ್ಕೂ ಹೆಚ್ಚುತ್ತಿದೆ ಕೊರೋನಾ ಸೋಂಕಿತರ ಸಂಖ್ಯೆ..! ಮಹಾಮಾರಿಗೆ 34 ಮಂದಿ ಬಲಿ..!

Spread the love

ನವದೆಹಲಿ : ಮಹಾಮಾರಿ ಕೊರೋನಾ ವೈರಸ್ ದೇಶದಲ್ಲಿ ಮರಣ ಮೃದಂಗ ಬಾರಿಸುತ್ತಿದ್ದು, ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಏರುತ್ತಲೇ ಇದೆ. ಸೋಮವಾರ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶಲ್ಲಿ ಮತ್ತೆ ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ದೇಶದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ.

ಜತೆಗೆ, ಸೋಂಕು ಸಮುದಾಯಕ್ಕೆ ಹರಡಿಲ್ಲ ಎಂದು ಸ್ಪಷ್ಟನೆ ನೀಡಿದೆ.
ದೇಶದಲ್ಲಿ ಕೊರೊನಾ ಈಗಲೂ ಸ್ಥಳೀಯ ಹರಡುವಿಕೆ ಹಂತದಲ್ಲಿ ಇದೆಯಷ್ಟೆ ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲುವ್ ಅಗರ್‌ವಾಲ್ ತಿಳಿಸಿದ್ದಾರೆ.

ದೇಶಾದ್ಯಂತ 600 ಐಎಎಸ್​​ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಕೊರೋನಾ ವಿರುದ್ಧ ಏನೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಪಡೆಯಲಾಗುತ್ತಿದೆ. ಈ ಮಾಹಿತಿ ಆಧರಿಸಿ ಕೇಂದ್ರ ಸರ್ಕಾರ ಮುಂದಿನ ನಡೆ ಇಡುತ್ತಿದೆ ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್‌ ಅಗರ್ವಾಲ್ ಅವರು, ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಇನ್ನು, ಕೊರೊನಾ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಾಗಿದೆ. ಸೋಂಕು ಹರಡುತ್ತಿರುವ ಬಗ್ಗೆ ಆತಂಕಪಡಬೇಕಾಗಿಲ್ಲ. ಜನ ಅನಗತ್ಯವಾಗಿ ಮನೆಯಿಂದ ಹೊರಬರಬಾರದು. ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿದ 13 ಮಂದಿ ವಿರುದ್ಧ ಜಮ್ಮು ಕಾಶ್ಮೀರದಲ್ಲಿ ದೂರು ದಾಖಲಾಗಿದೆ. ಜಮ್ಮು ಕಾಶ್ಮೀರದ ಬಂಡಿಪೊರ ಜಿಲ್ಲೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ ಎಂದರು ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ.

ದೇಶಾದ್ಯಂತ 600 ಐಎಎಸ್​​ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಕೊರೋನಾ ವಿರುದ್ಧ ಏನೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಪಡೆಯಲಾಗುತ್ತಿದೆ. ಈ ಮಾಹಿತಿ ಆಧರಿಸಿ ಕೇಂದ್ರ ಸರ್ಕಾರ ಮುಂದಿನ ನಡೆ ಇಡುತ್ತಿದೆ ಎಂದು ತಿಳಿಸಿದರು.

ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 83 ಮುಟ್ಟಿದೆ. ಮಹಾರಾಷ್ಟ್ರದಲ್ಲಿ ಈ ಸಂಖ್ಯೆ 200ರ ಗಡಿ ದಾಟಿದೆ. ಅಮೆರಿಕದಲ್ಲಿ ನಿನ್ನೆ ಒಂದೇ ದಿನ 16 ಸಾವಿರ ಪ್ರಕರಣ ದಾಖಲಾಗಿದ್ದು, ಈ ಮೂಲಕ ಕೊರೋನಾ ಪೀಡಿತರ ಸಂಖ್ಯೆ 1.40 ಲಕ್ಷಕ್ಕೆ ಏರಿಕೆ ಆಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿನ್ನೆ 23 ಹೊಸ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 72ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಕೊರೋನಾ ವೈರಸ್ ಸೋಂಕು ತಗುಲಿದವರ ಸಂಖ್ಯೆ 1,071ಕ್ಕೆ ಮುಟ್ಟಿದೆ.

ಈಶಾನ್ಯ ರಾಜ್ಯಗಳಿಗೆ ವೈದ್ಯಕೀಯ ಉಪಕರಣಗಳು ಹಾಗೂ ತುರ್ತು ಸಾಮಗ್ರಿಗಳನ್ನು ಪೂರೈಸಲು ವಿಶೇಷ ವಿಮಾನಗಳನ್ನು ವ್ಯವಸ್ಥೆ ಮಾಡಲು ಈಶಾನ್ಯ ರಾಜ್ಯಗಳ ಅಭಿವೃದ್ಧಿ ಸಚಿವಾಲಯವು ಅನುಮೋದನೆ ನೀಡಿದೆ.
ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ, ಏರಿಕೆ ಪ್ರಮಾಣ ಸ್ಥಿರವಾಗಿದೆ. ಇದಿನ್ನೂ ಆರಂಭಿಕ ಹಂತ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಇದುವರೆಗೆ ಒಟ್ಟಾರೆ ಕೊರೋನಾ ಸೋಂಕಿತರ ಸಂಖ್ಯೆ 1100ರ ಗಡಿ ದಾಟಿದೆ. ವಲಸಿಗರಿಂದ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಎಲ್ಲಾ ರಾಜ್ಯ ಮತ್ತು ಜಿಲ್ಲಾ ಗಡಿಗಳನ್ನು ಮುಚ್ಚುವಂತೆ ಕೇಂದ್ರ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ.

ಈಗಾಗಲೇ ಗಡಿಗಳ ಮೂಲಕ ಸಂಚರಿಸಿರುವ ವಲಸಿಗರನ್ನು 14 ದಿನಗಳ ಕಾಲ ನಿರ್ಬಂಧದಲ್ಲಿಡುವಂತೆ ಸೂಚಿಸಲಾಗಿದೆ.ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 23 ಹೊಸ ಕೇಸುಗಳು ದಾಖಲಾಗಿದ್ದು ಇಲ್ಲಿ ಒಟ್ಟು ಸೋಂಕಿತರ ಸಂಖ್ಯೆ 72ಕ್ಕೇರಿದೆ. ಪಕ್ಕದ ನೊಯ್ಡಾ, ಮಹಾರಾಷ್ಟ್ರ ಮತ್ತು ಬಿಹಾರದಲ್ಲಿ ಹೆಚ್ಚು ಕೊರೋನಾ ಸೋಂಕಿತ
ಪ್ರಕರಣಗಳು ದಾಖಲಾಗಿದೆ.

ಕೊರೊನಾ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತೀ ಅಗತ್ಯ. ಕೇವಲ ಒಬ್ಬ ವ್ಯಕ್ತಿಯ ನಿರ್ಲಕ್ಷ್ಯವೂ ಸೋಂಕು ಹರಡಲು ಕಾರಣವಾಗಬಹುದು. ಈ ಕುರಿತು ಇನ್ನಷ್ಟು ಜಾಗೃತಿ ಮೂಡಿಸುವ ಕೆಲಸವಾಗಬೇಕಿದೆ ಎಂದು ಅವರು ತಿಳಿಸಿದ್ದಾರೆ.
ಈವರೆಗೆ ದೇಶದಲ್ಲಿ 38,442 ಜನರ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

ಈ ಪೈಕಿ 3,501 ಜನರ ಮಾದರಿಗಳನ್ನು ಭಾನುವಾರ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್‌) ಆರ್‌. ಗಂಗಾಖೇಡ್ಕರ್ ತಿಳಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ಖಾಸಗಿ ಪ್ರಯೋಗಾಲಯಗಳಲ್ಲಿ 1,334 ಮಾದರಿಗಳ ಪರೀಕ್ಷೆ ನಡೆಸಲಾಗಿದೆ ಎಂದೂ ಅವರು ಹೇಳಿದ್ದಾರೆ.
ಸೋಮವಾರ ಪುಣೆಯಲ್ಲಿ ಕೊರೋನಾ ವೈರಸ್ ಪೀಡಿತ 52 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮಹಾರಾಷ್ಟ್ರದಲ್ಲಿ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ಇನ್ನು ಮಧ್ಯ ಪ್ರದೇಶದಲ್ಲಿ ಮಾರ್ಚ್ 27ರಂದು ಮೃತಪಟ್ಟಿದ್ದ ಉಜ್ಜೈನ್ ನ ಅಂಬೆರ್ ಕಾಲೋನಿಯ ನಿವಾಸಿಗೆ ಈ ಕೊರೋನಾ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಮಧ್ಯ ಪ್ರದೇಶದಲ್ಲಿ ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದ ಭಾರತದಲ್ಲಿ ಅತೀ ಹೆಚ್ಚು ಮಂದಿ ಸಾವಿಗೀಡಾದ ರಾಜ್ಯಗಳ ಪೈಕಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು, ಗುಜರಾತ್ ಎರಡನೇ ಸ್ಥಾನದಲ್ಲಿದೆ. ಗುಜರಾತ್ ನಲ್ಲಿ ಇಂದು ಸಾವಿನ ಸಂಖ್ಯೆ 6ಕ್ಕೇರಿದೆ. ಈ ಮೂಲಕ ದೇಶದಲ್ಲಿ ಕೊರೋನಾ ಮಾರಿಗೆ ಬಲಿಯಾದವರ ಸಂಖ್ಯೆ ಸೋಮವಾರ 34ಕ್ಕೇರಿದೆ.

ಪಶ್ಚಿಮ ಬಂಗಾಳದಲ್ಲಿ ಬೆಳಗ್ಗೆ ಕೊರೋನಾ ವೈರಸ್ ನಿಂದ ಒಬ್ಬರು ಮೃತಪಟ್ಟಿದ್ದು, ಇದೀಗ ಗುಜರಾತ್, ಮಧ್ಯ ಪ್ರದೇಶ ಹಾಗೂ ಮಹಾರಾಷ್ಟ್ರದಲ್ಲೂ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.
ದೇಶದಲ್ಲಿ ಇದುವರೆಗೆ ಒಟ್ಟಾರೆ ಕೊರೋನಾ ಸೋಂಕಿತರ ಸಂಖ್ಯೆ 1196ರ ಗಡಿ ದಾಟಿದೆ. ವಲಸಿಗರಿಂದ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಎಲ್ಲಾ ರಾಜ್ಯ ಮತ್ತು ಜಿಲ್ಲಾ ಗಡಿಗಳನ್ನು ಮುಚ್ಚುವಂತೆ ಕೇಂದ್ರ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಈಗಾಗಲೇ ಗಡಿಗಳ ಮೂಲಕ ಸಂಚರಿಸಿರುವ ವಲಸಿಗರನ್ನು 14 ದಿನಗಳ ಕಾಲ ನಿರ್ಬಂಧದಲ್ಲಿಡುವಂತೆ ಸೂಚಿಸಲಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 23 ಹೊಸ ಕೇಸುಗಳು ದಾಖಲಾಗಿದ್ದು, ಇಲ್ಲಿ ಒಟ್ಟು ಸೋಂಕಿತರ ಸಂಖ್ಯೆ 72ಕ್ಕೇರಿದೆ. ಪಕ್ಕದ ನೊಯ್ಡಾ, ಮಹಾರಾಷ್ಟ್ರ ಮತ್ತು ಬಿಹಾರದಲ್ಲಿ ಹೆಚ್ಚು ಕೊರೋನಾ ಸೋಂಕಿತ ಪ್ರಕರಣಗಳು ದಾಖಲಾಗಿವೆ.


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ