Breaking News

ಕೊರೊನಾ ತಡೆಯಲು ಜನತೆಗೆ ಮೋದಿಯ ಸಪ್ತ ಸೂತ್ರ……..

Spread the love

ನವದೆಹಲಿ: ದೇಶಾದ್ಯಂತ ಪ್ರಧಾನಿ ನರೇಂದ್ರ ಮೋದಿ ಮತ್ತೆ ಮೂರು ವಾರಗಳ ಲಾಕ್‍ಡೌನ್ ಸಮಯವನ್ನು ವಿಸ್ತರಣೆ ಮಾಡಿ ಅಧಿಕೃತವಾಗಿ ಘೋಷಿಸಿದ್ದಾರೆ. ಈ ವೇಳೆ ಕೊರೊನಾ ವಿರುದ್ಧ ಮೋದಿ ಸಪ್ತ ಸೂತ್ರಗಳನ್ನು ಸೂಚಿಸಿದ್ದಾರೆ.

ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಕೊರೊನಾ ನಿಯಂತ್ರಿಸಲು ಲಾಕ್‍ಡೌನ್ ಅನಿವಾರ್ಯವಾಗಿದೆ. ಲಾಕ್‍ಡೌನ್ ಪಾಲನೆಯಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಹೀಗಾಗಿ ಮತ್ತಷ್ಟು ನಿಯಂತ್ರಿಸಲು ಮೇ 3ರವರೆಗೆ ಲಾಕ್‍ಡೌನ್ ವಿಸ್ತರಿಸುತ್ತಿದ್ದೇನೆ. ನಾವು ಕೊರೊನಾ ವಿರುದ್ಧ ಹೇಗೆ ಹೋರಾಟ ನಡೆಸಬೇಕು. ಜನರ ಕಷ್ಟಗಳನ್ನು ಹೇಗೆ ಕಡಿಮೆ ಮಾಡಬಹುದು ಎಂಬುದರ ಬಗ್ಗೆ ರಾಜ್ಯಗಳ ಜೊತೆ ಚರ್ಚೆ ಮಾಡಿದ್ದೇವೆ. ಎಲ್ಲ ರಾಜ್ಯಗಳು ಲಾಕ್‍ಡೌನ್ ವಿಸ್ತರಿಸಲು ಸಲಹೆ ನೀಡಿವೆ. ಕೆಲ ರಾಜ್ಯಗಳು ಈಗಾಗಲೇ ವಿಸ್ತರಣೆ ಮಾಡಿವೆ ಎಂದು ತಿಳಿಸಿದರು.

ಮೋದಿಯ ಏಳು ಸೂತ್ರಗಳು:
1. ಮನೆಯಲ್ಲಿರುವ ವೃದ್ಧರ ಬಗ್ಗೆ ಕಾಳಜಿ ವಹಿಸಿ.
2 ರೋಗ ಇದ್ದವರಿಗೆ ಜಾಗೃತಿ ವಹಿಸಿ, ಅವರನ್ನು ಕೊರೊನಾದಿಂದ ರಕ್ಷಿಸಿ.
3. ಸಾಮಾಜಿಕ ಅಂತರ ಮತ್ತು ಲಾಕ್‍ಡೌನ್ ನಿಮಯ ಪಾಲಿಸಿ, ಕಡ್ಡಾಯವಾಗಿ ಎಲ್ಲರೂ ಮಾಸ್ಕ್ ಬಳಸಿ.
4. ರೋಗನಿರೋಧಕ ಶಕ್ತಿಯನ್ನ ಹೆಚ್ಚಿಸಿಕೊಳ್ಳಿ.
5. ಆರೋಗ್ಯ ಸೇತು ಆಪ್ ಡೌನ್‍ಲೌಡ್ ಮಾಡಿಕೊಂಡು ಇತರಿಗೆ ಪ್ರೇರೇಪಿಸಿ.
6. ಬಡ ಕುಟುಂಬಗಳಿಗ ನೆರವು ನೀಡಿ
7. ಕೆಲಸದಿಂದ ಯಾರನ್ನು ತೆಗೆಯಬೇಡಿ

ಈ ರೀತಿ ಮೋದಿ ಕೊರೊನಾ ವಿರುದ್ಧ ಏಳು ಸೂತ್ರಗಳನ್ನು ಸೂಚಿಸಿದ್ದಾರೆ. ಅಲ್ಲದೇ ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಜನರನ್ನ ಗೌರವಿಸಬೇಕು ಎಂದು ಕೂಡ ಸೂಚಿಸಿದ್ದಾರೆ.

ಈ ಹಿಂದೆ ಪಾಲಿಸಿದಂತೆ ಮುಂದೆಯೂ ನಿಯಮ ಪಾಲಿಸಬೇಕು. ಹೊಸ ಪ್ರದೇಶದಲ್ಲಿ ಸೋಂಕು ಹರಡದಂತೆ ನೋಡಿಕೊಳ್ಳಬೇಕಿದೆ. ಒಂದು ಸಾವು ನಮ್ಮ ಚಿಂತೆಯನ್ನ ಹೆಚ್ಚಿಸುತ್ತದೆ. ಮೊದಲಿಗಿಂತ ಹೆಚ್ಚು ನಿಯಮಗಳು ಹಾಟ್‍ಸ್ಪಾಟ್‍ಗಳಲ್ಲಿ ಹೆಚ್ಚಲಿದೆ. ಹೊಸ ಹಾಟ್‍ಸ್ಪಾಟ್‍ಗಳನ್ನು ಗುರುತಿಸಲಾಗುತ್ತದೆ. ದೇಶಾದ್ಯಂತ ಒಂದು ವಾರ ಡಬ್ಬಲ್ ಲಾಕ್‍ಡೌನ್ ಇರಲಿದೆ ಎಂದರು.

ಏ.20ರವರೆಗೆ ಎಲ್ಲಾ ಜಿಲ್ಲೆ ಹಾಗೂ ರಾಜ್ಯಗಳಲ್ಲಿ ಕಠಿಣ ನಿಯಮಗಳು ಜಾರಿಯಾಗಲಿದೆ. ಕೊರೊನಾ ಸಂಖ್ಯೆ ಕಡಿಮೆಯಾದರೆ ಏ.20ರ ಬಳಿಕ ಷರತ್ತುಗಳನ್ನು ಒಳಗೊಂಡು ಕೆಲವು ವಿನಾಯಿತಿ ಸಿಗಲಿದೆ ಎಂದು ಹೇಳಿದ

ನವದೆಹಲಿ: ದೇಶಾದ್ಯಂತ ಪ್ರಧಾನಿ ನರೇಂದ್ರ ಮೋದಿ ಮತ್ತೆ ಮೂರು ವಾರಗಳ ಲಾಕ್‍ಡೌನ್ ಸಮಯವನ್ನು ವಿಸ್ತರಣೆ ಮಾಡಿ ಅಧಿಕೃತವಾಗಿ ಘೋಷಿಸಿದ್ದಾರೆ. ಈ ವೇಳೆ ಕೊರೊನಾ ವಿರುದ್ಧ ಮೋದಿ ಸಪ್ತ ಸೂತ್ರಗಳನ್ನು ಸೂಚಿಸಿದ್ದಾರೆ.

ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಕೊರೊನಾ ನಿಯಂತ್ರಿಸಲು ಲಾಕ್‍ಡೌನ್ ಅನಿವಾರ್ಯವಾಗಿದೆ. ಲಾಕ್‍ಡೌನ್ ಪಾಲನೆಯಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಹೀಗಾಗಿ ಮತ್ತಷ್ಟು ನಿಯಂತ್ರಿಸಲು ಮೇ 3ರವರೆಗೆ ಲಾಕ್‍ಡೌನ್ ವಿಸ್ತರಿಸುತ್ತಿದ್ದೇನೆ. ನಾವು ಕೊರೊನಾ ವಿರುದ್ಧ ಹೇಗೆ ಹೋರಾಟ ನಡೆಸಬೇಕು. ಜನರ ಕಷ್ಟಗಳನ್ನು ಹೇಗೆ ಕಡಿಮೆ ಮಾಡಬಹುದು ಎಂಬುದರ ಬಗ್ಗೆ ರಾಜ್ಯಗಳ ಜೊತೆ ಚರ್ಚೆ ಮಾಡಿದ್ದೇವೆ. ಎಲ್ಲ ರಾಜ್ಯಗಳು ಲಾಕ್‍ಡೌನ್ ವಿಸ್ತರಿಸಲು ಸಲಹೆ ನೀಡಿವೆ. ಕೆಲ ರಾಜ್ಯಗಳು ಈಗಾಗಲೇ ವಿಸ್ತರಣೆ ಮಾಡಿವೆ ಎಂದು ತಿಳಿಸಿದರು.

ಮೋದಿಯ ಏಳು ಸೂತ್ರಗಳು:
1. ಮನೆಯಲ್ಲಿರುವ ವೃದ್ಧರ ಬಗ್ಗೆ ಕಾಳಜಿ ವಹಿಸಿ.
2 ರೋಗ ಇದ್ದವರಿಗೆ ಜಾಗೃತಿ ವಹಿಸಿ, ಅವರನ್ನು ಕೊರೊನಾದಿಂದ ರಕ್ಷಿಸಿ.
3. ಸಾಮಾಜಿಕ ಅಂತರ ಮತ್ತು ಲಾಕ್‍ಡೌನ್ ನಿಮಯ ಪಾಲಿಸಿ, ಕಡ್ಡಾಯವಾಗಿ ಎಲ್ಲರೂ ಮಾಸ್ಕ್ ಬಳಸಿ.
4. ರೋಗನಿರೋಧಕ ಶಕ್ತಿಯನ್ನ ಹೆಚ್ಚಿಸಿಕೊಳ್ಳಿ.
5. ಆರೋಗ್ಯ ಸೇತು ಆಪ್ ಡೌನ್‍ಲೌಡ್ ಮಾಡಿಕೊಂಡು ಇತರಿಗೆ ಪ್ರೇರೇಪಿಸಿ.
6. ಬಡ ಕುಟುಂಬಗಳಿಗ ನೆರವು ನೀಡಿ
7. ಕೆಲಸದಿಂದ ಯಾರನ್ನು ತೆಗೆಯಬೇಡಿ

ಈ ರೀತಿ ಮೋದಿ ಕೊರೊನಾ ವಿರುದ್ಧ ಏಳು ಸೂತ್ರಗಳನ್ನು ಸೂಚಿಸಿದ್ದಾರೆ. ಅಲ್ಲದೇ ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಜನರನ್ನ ಗೌರವಿಸಬೇಕು ಎಂದು ಕೂಡ ಸೂಚಿಸಿದ್ದಾರೆ.

ಈ ಹಿಂದೆ ಪಾಲಿಸಿದಂತೆ ಮುಂದೆಯೂ ನಿಯಮ ಪಾಲಿಸಬೇಕು. ಹೊಸ ಪ್ರದೇಶದಲ್ಲಿ ಸೋಂಕು ಹರಡದಂತೆ ನೋಡಿಕೊಳ್ಳಬೇಕಿದೆ. ಒಂದು ಸಾವು ನಮ್ಮ ಚಿಂತೆಯನ್ನ ಹೆಚ್ಚಿಸುತ್ತದೆ. ಮೊದಲಿಗಿಂತ ಹೆಚ್ಚು ನಿಯಮಗಳು ಹಾಟ್‍ಸ್ಪಾಟ್‍ಗಳಲ್ಲಿ ಹೆಚ್ಚಲಿದೆ. ಹೊಸ ಹಾಟ್‍ಸ್ಪಾಟ್‍ಗಳನ್ನು ಗುರುತಿಸಲಾಗುತ್ತದೆ. ದೇಶಾದ್ಯಂತ ಒಂದು ವಾರ ಡಬ್ಬಲ್ ಲಾಕ್‍ಡೌನ್ ಇರಲಿದೆ ಎಂದರು.

ಏ.20ರವರೆಗೆ ಎಲ್ಲಾ ಜಿಲ್ಲೆ ಹಾಗೂ ರಾಜ್ಯಗಳಲ್ಲಿ ಕಠಿಣ ನಿಯಮಗಳು ಜಾರಿಯಾಗಲಿದೆ. ಕೊರೊನಾ ಸಂಖ್ಯೆ ಕಡಿಮೆಯಾದರೆ ಏ.20ರ ಬಳಿಕ ಷರತ್ತುಗಳನ್ನು ಒಳಗೊಂಡು ಕೆಲವು ವಿನಾಯಿತಿ ಸಿಗಲಿದೆ ಎಂದು ಹೇಳಿದರು.

ಆರಂಭದಲ್ಲಿ ಲಾಕ್‍ಡೌನ್‍ಗೆ ಜನ ನೀಡಿದ ಸಹಕಾರವನ್ನು ಪ್ರಸ್ತಾಪಿಸಿ, ಕೊರೊನಾ ವಿರುದ್ಧ ಭಾರತ ಹೋರಾಟ ಶಕ್ತಿಯುತವಾಗಿ ಮುಂದುವರಿದಿದೆ. ಜನರ ತ್ಯಾಗದಿಂದ ದೊಡ್ಡ ಅನಾಹುತಗಳು ತಪ್ಪಿ ನಿಯಂತ್ರಣದಲ್ಲಿದೆ. ಕೆಲವರಿಗೆ ಆಹಾರದ ಸಮಸ್ಯೆಯಾಗಿದೆ, ಓಡಾಟದ ತೊಂದರೆಯಾಗಿದೆ. ನಿಮಗೆ ಕಷ್ಟವಾದ್ರೂ ಅದನ್ನು ಸಹಿಸಿಕೊಂಡಿದ್ದೀರಿ. ದೇಶದ ಸಿಪಾಯಿ ಹಾಗೇ ಕರ್ತವ್ಯ ನಿಭಾಯಿಸುತ್ತಿದ್ದೀರಿ ನಿಮಗೆ ಧನ್ಯವಾದಗಳು ಎಂದು ಹೇಳಿದರು.

ಸಂವಿಧಾನದ ಪ್ರಸ್ತಾವನೆಯಲ್ಲಿ ‘ವೀ ದಿ ಪೀಪಲ್ ಆಫ್ ಇಂಡಿಯಾ’ ಎಂದು ಬರೆಯಲಾಗಿದೆ. ಇದು ಇದೇ ಎಂದು ನಾನು ಭಾವಿಸಿದ್ದೇನೆ. ನಮ್ಮ ಸಾಮೂಹಿಕ ಹೋರಾಟವೇ ಅಂಬೇಡ್ಕರ್ ಅವರಿಗೆ ದೇಶದ ಜನರು ನೀಡುವ ನಮನ ಎಂದರು.

ದೇಶದಲ್ಲಿ ಹಲವು ಹಬ್ಬ ಹರಿದಿನಗಳಿಗೆ. ಸಾಕಷ್ಟು ಧಾರ್ಮಿಕ ಉತ್ಸವಗಳು ನಡೆಯುತ್ತಿದ್ದವು. ಅನೇಕ ರಾಜ್ಯದಲ್ಲಿ ಹೊಸ ವರ್ಷ ಆರಂಭವಾಗಬೇಕಿದೆ. ಇದರ ನಡುವೆ ಜನರು ನಿಯಮಗಳನ್ನು ಪಾಲನೆ ಮಾಡುತ್ತಿದ್ದಾರೆ. ಸರಳವಾಗಿ ಹಬ್ಬಗಳನ್ನು ಆಚರಿಸುತ್ತಿದ್ದಾರೆ. ಇದು ಶ್ಲಾಘನೀಯ ಮತ್ತು ಪ್ರಶಂಸನೀಯ ಕೊರೊನಾ ಪರಿಣಾಮ ಬಗ್ಗೆ ಎಲ್ಲರಿಗೂ ಗೊತ್ತಿದೆ ಎಂದು ಮೋದಿ ಹೇಳಿದರು.

Spread the love

About Laxminews 24x7

Check Also

ಸೈಫ್​ ಅಲಿ ಖಾನ್ ಮೇಲಿನ ದಾಳಿ ಆಘಾತ ತಂದಿದೆ: ನಟಿ ಶಿಲ್ಪಾ ಶೆಟ್ಟಿ

Spread the loveರಾಯಚೂರು: ಬಾಲಿವುಡ್ ನಟ ಸೈಫ್​ ಅಲಿ ಖಾನ್ ಮೇಲೆ ನಡೆದಿರುವ ದಾಳಿ ಆಘಾತ ಮೂಡಿಸಿದೆ ಎಂದು ಬಾಲಿವುಡ್‌ ನಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ