Breaking News
Home / ಜಿಲ್ಲೆ / ದೇಶದಲ್ಲಿ 1,118 ಕ್ಕೂ ಹೆಚ್ಚು ಹೊಸ ಕೊರೋನಾ ಪ್ರಕರಣ ದಾಖಲಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 12,000ದ ಗಡಿ ಸಮೀಪಿಸಿದೆ

ದೇಶದಲ್ಲಿ 1,118 ಕ್ಕೂ ಹೆಚ್ಚು ಹೊಸ ಕೊರೋನಾ ಪ್ರಕರಣ ದಾಖಲಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 12,000ದ ಗಡಿ ಸಮೀಪಿಸಿದೆ

Spread the love

ಬೆಂಗಳೂರು : ದೇಶಾದ್ಯಂತ ಎರಡನೇ ಅವಧಿ ಲಾಕ್ ಡೌನ್ ಜಾರಿಗೆ ಬಂದಿದ್ದರೂ ಕೂಡ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಈ ವರೆಗೆ ದೇಶದಲ್ಲಿ 1,118 ಕ್ಕೂ ಹೆಚ್ಚು ಹೊಸ ಕೊರೋನಾ ಪ್ರಕರಣ ದಾಖಲಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 12,000ದ ಗಡಿ ಸಮೀಪಿಸಿದೆ.

ಭಾರತದಲ್ಲಿ ಈವರೆಗೆ 11,933 ಪ್ರಕರಣ ದಾಖಲಾಗಿದೆ. ಈ ಪೈಕಿ 10,197 ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 1,343 ಜನರು ಗುಣಮುಖರಾಗಿದ್ದಾರೆ. 24 ಗಂಟೆಯಲ್ಲಿ ಒಟ್ಟು 40 ಸಾವು ಸಂಭವಿಸಿದೆ. ಈ ಪೈಕಿ ಮಹಾರಾಷ್ಟ್ರ 18, ಉತ್ತರ ಪ್ರದೇಶ 6, ಗುಜರಾತ್ 4 ​, ಮಧ್ಯಪ್ರದೇಶ 3, ದೆಹಲಿ ಹಾಗೂ ಕರ್ನಾಟಕದಲ್ಲಿ ತಲಾ 3, ತೆಲಂಗಾಣ, ತಮಿಳುನಾಡು, ಪಂಜಾಬ್​ ಹಾಗೂ ಮೇಘಾಲಯದಲ್ಲಿ ತಲಾ ಒಂದು ಸಾವು ಸಂಭವಿಸಿದೆ.

ಕೊರೋನಾದಿಂದಾಗಿ ಈವರೆಗೆ ಒಟ್ಟು 392 ಸಾವು ಸಂಭವಿಸಿದೆ. ಮಹಾರಾಷ್ಟ್ರ ಒಂದರಲ್ಲೇ 178 ಜನರು ಮೃತಪಟ್ಟಿದ್ದಾರೆ. ಉಳಿದಂತೆ ಮಧ್ಯಪ್ರದೇಶ 53, ದೆಹಲಿ ಮತ್ತು ಗುಜರಾತ್​ನಲ್ಲಿ ತಲಾ 30, ತೆಲಂಗಾಣದಲ್ಲಿ 18, ಪಂಜಾಬ್​ 13, ತಮಿಳುನಾಡು 12, ಉತ್ತರ ಪ್ರದೆಶ ಹಾಗೂ ಕರ್ನಾಟಕ ತಲಾ 13 ಜನರು ಸಾವನ್ನಪ್ಪಿದ್ದಾರೆ.


Spread the love

About Laxminews 24x7

Check Also

ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Spread the love ಬೆನಕಟ್ಟಿ: ಗ್ರಾಮಕ್ಕೆ ಆಗಮಿಸಿದ ಮಾಜಿ ಕೇಂದ್ರ ಸಚಿವ ದಿ. ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ