Breaking News
Home / ಜಿಲ್ಲೆ / ಕೊರೋನಾ ವಿರುದ್ಧವಾಗಿ ಜಿಲ್ಲಾಮಟ್ಟದ ಅಧಿಕಾರಿಗಳು ಉತ್ತಮ ಸಹಕಾರ ನೀಡುತ್ತಿದ್ದಾರೆ: ಸಿಇಓ

ಕೊರೋನಾ ವಿರುದ್ಧವಾಗಿ ಜಿಲ್ಲಾಮಟ್ಟದ ಅಧಿಕಾರಿಗಳು ಉತ್ತಮ ಸಹಕಾರ ನೀಡುತ್ತಿದ್ದಾರೆ: ಸಿಇಓ

Spread the love

ಮಂಡ್ಯ.ಏ.22 (ಕರ್ನಾಟಕ ವಾರ್ತೆ):- ಎಲ್ಲಾ ಇಲಾಖೆಯ ಅಧಿಕಾರಿಗಳು, ಸಂಘ-ಸಂಸ್ಥೆಗಳು, ದಾನಿಗಳು ಕೊರೋನಾ ವಿರುದ್ಧವಾಗಿ ಉತ್ತಮ ಸಹಕಾರ ನೀಡುತ್ತಿದ್ದಾರೆ. ಎಂದು ಜಿಲ್ಲಾ ಮುಖ್ಯಕಾರ್ಯನಿರ್ವಾಹಣಾಧಿಕಾರಿಯಾದ ಕೆ.ಯಾಲಕ್ಕಿಗೌಡ ಅವರು ಹೇಳಿದರು.
ನಗರದ ಜಿಲ್ಲಾಪಂಚಾಯಿತಿಯ ಸಭಾಂಗಣದಲ್ಲಿ ಜಿಲ್ಲಾಪಂಚಾಯಿತಿಯ ಅಧ್ಯಕ್ಷರಾದ ನಾಗರತ್ನಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಗ್ರಾಮಪಂಚಾಯಿತಿಯ ಮಟ್ಟದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಮಾಡುತ್ತಿದ್ದು ಗ್ರಾಮಪಂಚಾಯಿತಿಯ ಅಧ್ಯಕ್ಷತೆಯಲ್ಲಿ ಗ್ರಾಮಪಡೆ ಎನ್ನುವ ಹೆಸರಿನಿಂದ ಮಾಡುತ್ತಿದ್ದಾರೆ. ಪಿಡಿಓ, ಕಾರ್ಯದರ್ಶಿ,ಸದಸ್ಯರು,ಅಂಗನವಾಡಿ ಕಾರ್ಯಕರ್ತೆಯರು, ಆಶಾಕಾರ್ಯಕರ್ತೆಯರು, ಪೊಲೀಸರು,ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳು, ಭಾಗಿಯಾಗಿದ್ದು ಮಾಸ್ಕ್ ಮತ್ತು ಸ್ಯಾನಿಟೈಜರ್ ನೀಡುವ ಮೂಲಕ ಅರಿವು ಮೂಡಿಸುತ್ತಿದ್ದಾರೆ ಎಂದರು.
ಇದೇ ವೇಳೆ ಜಿಲ್ಲೆಯ ವಿವಿಧ ಇಲಾಖೆಯ ಮಾಹಿತಿಯನ್ನು ಜಿಲ್ಲಾ ಪಂಚಾಯಿತಿಯ ಅಧ್ಯಕ್ಷರಾದ ನಾಗರತ್ನಸ್ವಾಮಿ ಅವರು ಅಧಿಕಾರಿಗಳಿಂದ ಪಡೆದರು.
12 ಜನ ಕೊರೋನಾ ಸೋಂಕಿತರಲ್ಲಿ ಯಾವುದೇ ಜ್ವರ, ನೆಗಡಿ, ಕೆಮ್ಮು, ಇರುವುದಿಲ್ಲ ಅದರಲ್ಲಿ 5 ಜನರು 14 ದಿನಗಳನ್ನು ಪೂರ್ಣಗೊಳಿಸಿದ್ದಾರೆ. ಅವರನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಈ ಪರೀಕ್ಷೆಯಲ್ಲಿ ನೆಗೆಟಿವ್ ಬಂದರೆ ಜಿಲ್ಲಾಸ್ಪತ್ರೆಯಿಂದ ಬೇರೆ ಕಡೆ ಕ್ವಾರಂಟೈನ್‍ನಲ್ಲಿ ಇಟ್ಟು 14 ದಿನಗಳ ನಂತರ ಅವರನ್ನು ಮನೆಗೆ ಕಳುಹಿಸಿಕೊಡಲಾಗುತ್ತದೆ. ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ ಜ್ವರ ಇರುವವರಿಗೆ ಮತ್ತು ಇಲ್ಲದವರಿಗಾಗಿ ಎರಡು ರೀತಿಯ ಕೊಠಡಿಗಳನ್ನು ತೆರೆದಿದ್ದು ಜ್ವರ ಇಲ್ಲದಿರುವ ಕೊಠಡಿಯಲ್ಲಿ ಗರ್ಭಿಣಿಯರು ಮತ್ತು ಡಯಾಲಿಸಸ್ ಮಾಡಿಸುವವರನ್ನು ತಪಾಶಣೆಗೆ ಒಳಪಡಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಮಂಚೇಗೌಡ ಅವರು ತಿಳಿಸಿದರು.
ಜಿಲ್ಲೆಯಲ್ಲಿ ಎರಡು ತಿಂಗಳ ರೇಷನನ್ನು ಈಗಾಗಲೇ ಒಟ್ಟಿಗೆ ನೀಡಿದು,್ದ ಜನಸಂಖ್ಯೆ ಆಧಾರದ ಮೇಲೆ ಪಡಿತರ ಚೀಟಿ ವಿತರಣೆಯಾಗಿದೆ. ಇತರ ಜಿಲ್ಲೆಗಳಿಂದ ಬಂದಿರುವವರಿಗೆ ಮತ್ತು ಅರ್ಜಿಸಲ್ಲಿಸಿರುವವರಿಗು ಸಹ ರೇಷನ್ ನೀಡಲಾಗಿದೆ. ಏಪ್ರಿಲ್ ತಿಂಗಳಲ್ಲಿ ಸರ್ಕಾರ ನೀಡಿರುವ ಅಕ್ಕಿ ಮತ್ತು ಗೋಧಿಯನ್ನು ವಿತರಿಸಲಾಗಿದ್ದು ಕೇಂದ್ರ ಸರ್ಕಾರ ನೀಡಿರುವುದನ್ನು ಮೇ ತಿಂಗಳಲ್ಲಿ ವಿತರಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿಯ ಅಧ್ಯಕ್ಷರಾದ ನಾಗರತ್ನಸ್ವಾಮಿ ಅವರು ಪಡಿತರ ಕಿಟ್ ಬಗ್ಗೆ ಕೇಳಿದ ಪ್ರಶ್ನೆಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮುದ ಅವರು ಮಾಹಿತಿ ನೀಡಿದರು.
ಹೀಗೆ ಸಮಾಜ ಕಲ್ಯಾಣ ಇಲಾಖೆ, ಕಾರ್ಮಿಕರ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪಶುವೈದ್ಯ ಇಲಾಖೆ, ಹಾಗೂ ಅಬಕಾರಿ ಇಲಾಖೆ, ಇನ್ನಿತರ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆ ಮಾಹಿತಿಯನ್ನು ಜಿಲ್ಲಾಪಂಚಾಯಿತಿಯ ಅಧ್ಯಕ್ಷರಾದ ನಾಗರತ್ನಸ್ವಾಮಿ ಅವರಿಗೆ ತಿಳಿಸಿದರು
ಸಭೆಯಲ್ಲಿ ಜಿಲ್ಲಾ ಮುಖ್ಯಕಾರ್ಯನಿರ್ವಾಹಣಾಧಿಕಾರಿಗಳಾದ ಕೆ.ಯಾಲಕ್ಕಿಗೌಡ, ಜಿಲ್ಲಾಪಂಚಾಯಿತಿಯ ಉಪಾಧ್ಯಕ್ಷೆ ಪಿ.ಕೆ ಗಾಯತ್ರಿ ಹಾಗೂ ಜಿಲ್ಲೆಯ ಅಧಿಕಾರವರ್ಗದವರು ಉಪಸ್ಥಿತರಿದ್ದರು


Spread the love

About Laxminews 24x7

Check Also

ನಾಡಗೀತೆ ಕಡ್ಡಾಯ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Spread the loveಬೆಂಗಳೂರು: ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿ ನಾಡಗೀತೆ ಹಾಡುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ