Breaking News

ಕೊರೊನಾಗೆ ಮೃತರಾದವರ ಅಂತ್ಯಸಂಸ್ಕಾರಕ್ಕೆ ಅಡ್ಡಿ ಮಾಡಿದ್ರೆ 3 ವರ್ಷ ಜೈಲು

Spread the love

ಚೆನ್ನೈ: ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರಕ್ಕೆ ಅಡ್ಡಿಪಡಿಸಿದರೆ ತಮಿಳುನಾಡಿನಲ್ಲಿ 3 ವರ್ಷ ಜೈಲು ಶಿಕ್ಷೆಯಾಗಲಿದೆ.

ಕೋವಿಡ್-19 ಸೋಂಕಿನಿಂದ ಮೃತಪಟ್ಟ ರೋಗಿಗಳ ಅಂತ್ಯಸಂಸ್ಕಾರ ಅಥವಾ ಹೂಳಲು ಜನ ವಿರೋಧ ವ್ಯಕ್ತಿಪಡಿಸಿದರೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲು ತಮಿಳುನಾಡು ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ.

ಮಾರಣಾಂತಿಕ ಕೋವಿಡ್-19 ಮೃತಪಟ್ಟ ವ್ಯಕ್ತಿಗಳ ಅಂತ್ಯಸಂಸ್ಕಾರಕ್ಕೆ ಅಡ್ಡಿಪಡಿಸುವುದು ಕ್ರಿಮಿನಲ್ ಅಪರಾಧ ಎಂದು ಸುಗ್ರೀವಾಜ್ಞೆಯಲ್ಲಿ ಉಲ್ಲೇಖಿಸಲಾಗಿದೆ.

ತಮಿಳುನಾಡು ಸಾರ್ವಜನಿಕ ಕಾಯ್ದೆ 1939ರ ಸೆಕ್ಷನ್ 74ರ ಪ್ರಕಾರ ಅಡ್ಡಿಪಡಿಸಿದರೆ ಕನಿಷ್ಟ 1 ವರ್ಷ ಜೈಲು ಅಥವಾ ಗರಿಷ್ಟ 3 ವರ್ಷ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಇದನ್ನೂ ಓದಿ: ಕೊರೊನಾದಿಂದ ಮೃತಪಟ್ಟ ವೃದ್ಧೆಯ ಶವ ಸಂಸ್ಕಾರಕ್ಕೆ ಬಿಜೆಪಿ ಶಾಸಕನಿಂದ ತಡೆ

ಕೆಲ ದಿನಗಳ ಹಿಂದೆ ಚೆನ್ನೈನಲ್ಲಿ ಕೊರೊನಾ ಸೋಂಕಿಗೆ ಇಬ್ಬರು ವೈದ್ಯರು ಬಲಿಯಾಗಿದ್ದರು. ಈ ವೈದ್ಯರ ಅಂತ್ಯಸಂಸ್ಕಾರಕ್ಕೆ ಜನ ಅಡ್ಡಿ ಪಡಿಸಿದ್ದರು. ಅಷ್ಟೇ ಅಲ್ಲದೇ ಅಲ್ಲಿದ್ದ ಆರೋಗ್ಯ ಕಾರ್ಯಕರ್ತರ ಮೇಲೂ ಹಲ್ಲೆ ನಡೆಸಿದ್ದರು. ಕೊನೆಗೆ ಪೊಲೀಸರ ಸಹಕಾರದಿಂದ ಬೇರೆ ಪ್ರದೇಶದಲ್ಲಿ ಅಂತ್ಯಸಂಸ್ಕಾರ ನಡೆಸಲಾಗಿತ್ತು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ