Breaking News
Home / ಜಿಲ್ಲೆ / ಚಿಕ್ಕ ಮಂಗಳೂರು / ಕೊರೊನಾ ಭೀತಿ ನಡುವೆ ಆಸ್ತಿಗಾಗಿ ಕಿತ್ತಾಟ ನಡೆದಿದ್ದು, ಕೊಲೆ………….

ಕೊರೊನಾ ಭೀತಿ ನಡುವೆ ಆಸ್ತಿಗಾಗಿ ಕಿತ್ತಾಟ ನಡೆದಿದ್ದು, ಕೊಲೆ………….

Spread the love

ಚಿಕ್ಕಮಗಳೂರು: ಕೊರೊನಾ ಭೀತಿ ನಡುವೆ ಆಸ್ತಿಗಾಗಿ ಕಿತ್ತಾಟ ನಡೆದಿದ್ದು, ಕೊಲೆಯಲ್ಲಿ ಅಂತ್ಯವಾದ ಘಟನೆ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.

ಮೂಡಿಗೆರೆ ತಾಲೂಕಿನ ಚೇಗು ಗ್ರಾಮದ ನಿವಾಸಿ ಮಂಜಯ್ಯ (58) ಮೃತ ದುರ್ದೈವಿ. ಲಕ್ಷ್ಮಣ ಕೊಲೆಗೈದ ಆರೋಪಿ. ಸೋಮವಾರ ರಾತ್ರಿ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ತೋಟದ ವಿಚಾರವಾಗಿ ಮಂಜಯ್ಯ ಹಾಗೂ ಲಕ್ಷ್ಮಣ ಸಹೋದರರ ನಡುವೆ ಕಳೆದ ಕೆಲವು ದಿನಗಳಿಂದ ಜಗಳ ನಡೆದಿತ್ತು. ಈ ವಿಚಾರವಾಗಿ ಸೋಮವಾರವೂ ಸಹೋದರರು ಪರಸ್ಪರ ಗಲಾಟೆ ಮಾಡಿಕೊಂಡಿದ್ದರು. ಈ ವೇಳೆ ಕೋಪಗೊಂಡ ಲಕ್ಷ್ಮಣ ನಾಡ ಬಂದೂಕಿನಿಂದ ಅಣ್ಣನ ಮೇಲೆ ಪೈರಿಂಗ್ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡ ಮಂಜಯ್ಯ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಸಾಮೂಹಿಕ ರಾಜೀನಾಮೆಗೆ ಮುಂದಾದ ಬಿಜೆಪಿ ಯುವ ಮೋರ್ಚಾ ಘಟಕ ಸದಸ್ಯರು

Spread the loveಚಿಕ್ಕಮಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ಹತ್ಯೆಯಾಗಿದ್ದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಬಿಜೆಪಿ ಯುವ ಮೋರ್ಚಾ ಪಕ್ಷದ ವಿರುದ್ಧವೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ