ಬೆಂಗಳೂರು: ಕೊರೊನಾ ವಾರಿಯರ್ಸ್ ಕೋವಿಡ್-19 ಸೋಂಕಿನಿಂದ ಮೃತಪಟ್ಟರೆ 30 ಲಕ್ಷ ಪರಿಹಾರ ನೀಡುವುದಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
ಇಡೀ ದೇಶವನ್ನೇ ಮಹಾಮಾರಿಯಾಗಿ ಕಾಡುತ್ತಿರುವ ಕೊರೊನಾ ಸೋಂಕಿನ ವಿರುದ್ಧ ಆಸ್ಪತ್ರೆ ಸಿಬ್ಬಂದಿ, ಪೊಲೀಸರು, ಆಶಾ ಕಾರ್ಯಕರ್ತೆರು ಸೇರಿಂದಂತೆ ಜೀವ ಹಂಗು ತೊರೆದು ಹೋರಾಡುತ್ತಿದ್ದಾರೆ. ಹೀಗಾಗಿ ಒಂದು ವೇಳೆ ಕೊರೊನಾ ವಾರಿಯರ್ಸ್ ಸೇವೆ ಸಲ್ಲಿಸುವಾಗ ಸೋಂಕಿಗೆ ಗುರಿಯಾಗಿ ಸಾವನ್ನಪ್ಪಿದ್ದರೆ, ಅವರಿಗೆ 30 ಲಕ್ಷ ಪರಿಹಾರ ನೀಡುವುದಕ್ಕೆ ಸಿಎಂ ಯಡಿಯೂರಪ್ಪ ಅನುಮೋದನೆ ನೀಡಿದ್ದಾರೆ.
ಕೊರೊನಾ ನಿಯಂತ್ರಣಕ್ಕಾಗಿ ಹಗಲಿರುಳು ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತರು, ಅಂಗನವಾಡಿ ಸಹಾಯಕರು, ಪೌರ ಕಾರ್ಮಿಕರು ಹಾಗೂ ಪೊಲೀಸ್ ಸಿಬ್ಬಂದಿ ಕೋವಿಡ್-19 ಸೋಂಕಿಗೆ ಒಳಪಟ್ಟು ಮೃತಪಟ್ಟರೆ 30 ಲಕ್ಷ ರೂಪಾಯಿಗಳ ಪರಿಹಾರಕ್ಕೆ ಸಿಎಂ ಯಡಿಯೂರಪ್ಪ ಇಂದು ಅನುಮೋದನೆ ನೀಡಿದ್ದಾರೆ.