Breaking News

ದಾವಣಗೆರೆಯಲ್ಲಿ ಕೊರೊನಾಗೆ ಮೊದಲ ಬಲಿ………….

Spread the love

ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾಗೆ ಮೊದಲ ಬಲಿಯಾಗಿದ್ದು 69 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧ(ರೋಗಿ ಸಂಖ್ಯೆ 556) ರಾತ್ರಿ ಸಾವನ್ನಪ್ಪಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾಗೆ ಮೃತಪಟ್ಟವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ.

ಜಾಲಿನಗರದ ನಿವಾಸಿಯಾಗಿದ್ದ ವ್ಯಕ್ತಿ ಮೂರು ದಿನಗಳ ಹಿಂದೆ ಉಸಿರಾಟದ ಸಮಸ್ಯೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು, ಈ ವ್ಯಕ್ತಿಗೆ ಕೊರೊನಾ ಹೇಗೆ ಬಂದಿದೆ ಎನ್ನುವುದು ತಿಳಿದಿಲ್ಲ. ವೃದ್ಧನ ಟ್ರಾವೆಲ್ ಹಿಸ್ಟರಿಯನ್ನು ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ. ಈ ವ್ಯಕ್ತಿಯಿಂದ 1 ವರ್ಷದ ಮಗು ಸೇರಿದಂತೆ 5 ಮಂದಿಗೆ ಕೊರೊನಾ ಹರಡಿದೆ.

ವೃದ್ಧನ ಮೂರು ಮಂದಿ ಸೊಸೆಯಂದಿರು, ಓರ್ವ ಪುತ್ರ ಸೇರಿ ಒಂದು ವರ್ಷದ ಮೊಮ್ಮಗನಿಗೂ ಕೂಡ ಸೋಂಕು ತಗುಲಿದ್ದು ಎಲ್ಲರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ನಡುವೆ ಜಿಲ್ಲೆಯಲ್ಲಿ ಸೋಂಕು ಪೀಡಿತರ ಸಂಪರ್ಕ ಹೊಂದಿದ್ದ ಸುಮಾರು 82 ಮಂದಿಯನ್ನು ಪರೀಕ್ಷೆ ಗೆ ಒಳಪಡಿಸಲಾಗಿದೆ. ಶನಿವಾರ ಅವರ ವರದಿ ಕೂಡ ಬಿಡುಗಡೆಯಾಗುವ ಸಾಧ್ಯತೆಯಿದೆ.

ಇಲ್ಲಿಯವರೆಗೆ ದಾವಣಗೆರೆಯಲ್ಲಿ 10 ಮಂದಿಗೆ ಕೊರೊನಾ ಬಂದಿದ್ದು, ಇಬ್ಬರು ಬಿಡುಗಡೆಯಾಗಿದ್ದಾರೆ. 8 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


Spread the love

About Laxminews 24x7

Check Also

ಶಿರಾಡಿ ಘಾಟ್ ರಸ್ತೆಯ ದುರಸ್ತಿ ಕಾಮಗಾರಿಯನ್ನು ಪರಿಶೀಲಿಸಿದ ಸತೀಶ್ ಜಾರಕಿಹೊಳಿ

Spread the loveಬೆಂಗಳೂರು ಮತ್ತು ಮಂಗಳೂರು ನಗರಗಳ ನಡುವಿನ ಪ್ರಮುಖ ಸಂಪರ್ಕ ಹೆದ್ದಾರಿಯಲ್ಲಿ ಬರುವ ಶಿರಾಡಿ ಘಾಟ್ ರಸ್ತೆಯ ದುರಸ್ತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ