Home / ಜಿಲ್ಲೆ / ದಕ್ಷಿಣ ಕನ್ನಡದಲ್ಲಿ ಕಿಲ್ಲರ್ ಕೊರೊನಾಗೆ 5ನೇ ಬಲಿ……..

ದಕ್ಷಿಣ ಕನ್ನಡದಲ್ಲಿ ಕಿಲ್ಲರ್ ಕೊರೊನಾಗೆ 5ನೇ ಬಲಿ……..

Spread the love

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ವೈರಸ್‍ಗೆ ಇಂದು 80 ವರ್ಷದ ವೃದ್ಧೆಯೊಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರು ಸಂಖ್ಯೆ 5ಕ್ಕೆ ಏರಿದೆ.

ಮಂಗಳೂರಿನ ಶಕ್ತಿನಗರ ಮೂಲದ 80 ವರ್ಷದ ರೋಗಿ-507 ಕೊರೊನಾಗೆ ಬಲಿಯಾಗಿದ್ದಾರೆ. ಮಂಗಳೂರು ಕೊವೀಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆ ಅಧಿಕ ರಕ್ತದೊತ್ತಡ, ಪಾರ್ಶ್ವವಾಯು ರೋಗದಿಂದ ಬಳಲುತ್ತಿದ್ದರು. ಫಸ್ಟ್ ನ್ಯೂರೋ ಆಸ್ಪತ್ರೆಯಿಂದ ವೃದ್ಧೆಗೆ ಸೋಂಕು ತಗುಲಿತ್ತು.

ಬುಧವಾರ ಮಂಗಳೂರಿನ ಬೋಳೂರು ನಿವಾಸಿ 58 ವರ್ಷದ ಮಹಿಳೆ ಕೊರೊನಾಗೆ ಬಲಿಯಾಗಿದ್ದರು. ಮೆದುಳು ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆ, ಎಪ್ರಿಲ್ 30ರಂದು ಮಹಿಳೆಗೆ ಕೊರೊನಾ ದೃಢಪಟ್ಟಿತ್ತು. ಮಹಿಳೆಗೆ ಫಸ್ಟ್ ನ್ಯೂರೋ ಆಸ್ಪತ್ರೆಯ ಸ್ವೀಪರ್ ಸಂಪರ್ಕದಿಂದ ಸೋಂಕು ಹರಡಿತ್ತು. ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಮೆದುಳಿನ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮಂಗಳೂರಿನ ಕೋವಿಡ್ ಆಸ್ಪತ್ರೆಯ ಮೃತಟ್ಟಿದ್ದರು. ಈ ಹಿಂದೆ ಬಂಟ್ವಾಳದ ಇಬ್ಬರು, ಬೋಳೂರಿನ ಓರ್ವ ಸೋಂಕಿತ ಬಲಿಯಾಗಿದ್ದರು.

ಹಾಗೆಯೇ ಇಂದು ಆಂಧ್ರ ಪ್ರದೇಶದಿಂದ ಬಂದಿದ್ದ 60 ವರ್ಷದ ವೃದ್ಧ ಕೊರೊನಾ ವೈರಸ್‍ನಿಂದ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ರೋಗಿ-796 ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮೃತ ವೃದ್ಧನಿಂದ ಪತ್ನಿ ಮತ್ತು ಖಾಸಗಿ ಆಸ್ಪತ್ರೆಯ ವಾರ್ಡ್ ಬಾಯ್‍ಗೆ ಸೋಂಕು ತಗುಲಿತ್ತು.

ಮೃತ ವೃದ್ಧ ಅನಂತಪುರ ಜಿಲ್ಲೆಯ ನಿವಾಸಿ ಎಂದು ತಿಳಿದುಬಂದಿದೆ. ಅನಾರೋಗ್ಯದ ಕಾರಣ ಆಂಧ್ರ ಪ್ರದೇಶದಲ್ಲೇ ಚಿಕಿತ್ಸೆ ಪಡೆದಿದ್ದರು. ನಂತರ ಚಿಕಿತ್ಸೆಗೆ ಎಂದು ಬೆಂಗಳೂರಿಗೆ ಅನಂತಪುರ ಜಿಲ್ಲೆಯಿಂದ ಬಂದಿದ್ದರು. ಈ ವೇಳೆ ವೃದ್ಧ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿದ್ದಾರೆ. ಆಗ ವೃದ್ಧ ಲೋ ಬಿಪಿ, ಶುಗರ್, ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು.

ತಕ್ಷಣ ವೃದ್ಧನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಅಲ್ಲಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ವೇಳೆ ವರದಿಯಲ್ಲಿ ಪಾಸಿಟಿವ್ ಬಂದಿದೆ. ನಂತರ ವೃದ್ಧನನ್ನು ಕೋವಿಡ್ ವಾರ್ಡಿನಲ್ಲಿ ಇರಿಸಿ ಮೂರು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.


Spread the love

About Laxminews 24x7

Check Also

*ಶ್ರೀ ಜಡಿಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

Spread the loveಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ