Breaking News

ಮುಂಬೈನಿಂದ ಬಂದು ಮಣಿಪಾಲ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿಗೆ ಕೊರೊನಾ

Spread the love

ಉಡುಪಿ: ಮುಂಬೈನಿಂದ ಬಂದು ಮಣಿಪಾಲ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರೋದು ಇಂದು ದೃಢಪಟ್ಟಿದೆ.

ಸಾವನ್ನಪ್ಪಿದ 54 ವರ್ಷದ ಸೋಂಕಿತ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ನಿವಾಸಿಯಾಗಿದ್ದು, ಮೇ 13ರಂದು ಹೃದಯಾಘಾತವಾಗಿತ್ತು. ಆರಂಭದಲ್ಲಿ ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ನೋವು ಉಲ್ಬಣಗೊಂಡು ಮಣಿಪಾಲ ಕೆಎಂಸಿಗೆ ಶಿಫ್ಟ್ ಮಾಡಲಾಗಿತ್ತು. ಮೇ 13ರ ರಾತ್ರಿಯೇ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದರು. ಮೇ 14ರ ಬೆಳಗ್ಗೆ ವ್ಯಕ್ತಿ ನಿಧನರಾಗಿದ್ದರು.

ವ್ಯಕ್ತಿ ಮುಂಬೈನಿಂದ ಬಂದ ಹಿನ್ನೆಲೆಯಲ್ಲಿ ವೈದ್ಯರು ಕೊರೊನಾ ಸೋಂಕಿನ ಶಂಕೆಯಿಂದ ಗಂಟಲಿನ ದ್ರವ ಮಾದರಿಯನ್ನು ಪಡೆದು ಪರೀಕ್ಷೆಗೆ ಕಳುಹಿಸಿದ್ದರು. ಇಂದು ವರದಿ ಬಂದಿದ್ದು, ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಸದ್ಯ ವ್ಯಕ್ತಿಗೆ ಚಿಕಿತ್ಸೆ ನೀಡಿದ ಕೆಎಂಸಿಯ ಕೆಲ ವೈದ್ಯರು ಮತ್ತು ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಮಣಿಪಾಲ ಕೆಎಂಸಿ ವೈದ್ಯಕೀಯ ಅಧೀಕ್ಷಕರು ಮಾಹಿತಿ ನೀಡಿದ್ದಾರೆ.

https://youtu.be/yjgTcLX3tDc


Spread the love

About Laxminews 24x7

Check Also

ಬಾಲಕಿಗೆ ಪ್ರೀತಿಸುವಂತೆ ಕಿರುಕುಳ : ಮೆಸ್ಕಾಂ ಸಿಬ್ಬಂದಿ ಪೊಲೀಸರ ವಶಕ್ಕೆ

Spread the loveಪುತ್ತೂರು(ಡಿಸೆಂಬರ್​. 22): ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಸವಣೂರು ಸಮೀಪದ‌ ನಿವಾಸಿಯಾಗಿರುವ ಪಿಯುಸಿ ಓದುತ್ತಿರುವ ಬಾಲಕಿಗೆ ಸಾಮಾಜಿಕ ಜಾಲತಾಣದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ