Breaking News

ಕೊರೋನಾ ಪೀಡಿತ ರಾಷ್ಟ್ರಗಳ ಪೈಕಿ ವಿಶ್ವದಲ್ಲಿ 10ನೇ ಸ್ಥಾನಕ್ಕೇರಿದ ಭಾರತ..!

Spread the love

ನವದೆಹಲಿ/ಮುಂಬೈ, ಮೇ 24-ಭಾರತದಲ್ಲಿ ವಿನಾಶಕಾರಿ ಕೊರೊನಾ ವೈರಸ್ ಮತ್ತಷ್ಟು ತೀವ್ರ ಸ್ವರೂಪದಲ್ಲಿ ಸೋಟಗೊಂಡಿದೆ. ಸಾಂಕ್ರಾಮಿಕ ರೋಗದ ಪಾಸಿಟಿವ್ ಪ್ರಕರಣ ಆಘಾತಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದೆ.

ಅಲ್ಲದೇ ವಿಶ್ವದಲ್ಲೇ ಅತಿ ಹೆಚ್ಚು ಸೋಂಕು ಮತ್ತು ಸಾವುಗಳು ಸಂಭವಿಸಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ 10ನೇ ಸ್ಥಾನಕ್ಕೇರಿರುವುದು ಚಿಂತಾಜನಕ ಸಂಗತಿ.

ನಿನ್ನೆ ಒಂದೇ ದಿನ ಅಂದರೆ 24 ತಾಸುಗಳ ಅವಯಲ್ಲಿ 6,767 (ನಿನ್ನೆ 6,654, ಮೊನ್ನೆ 6,088 ಕೇಸ್) ಜನರಿಗೆ ಸೋಂಕು ದೃಢಪಟ್ಟಿದ್ದು. ಇದು ಸಾಂಕ್ರಾಮಿಕ ರೋಗ ಉಲ್ಬಣದಲ್ಲಿ ಭಾರೀ ಜಿಗಿತವಾಗಿದ್ದು, ಹೊಸ ದಾಖಲೆಯಾಗಿದೆ. ಇದೇ ಅವಯಲ್ಲಿ ಒಟ್ಟು 147 ಮಂದಿ ಸಾವಿಗೀಡಾಗಿದ್ದು, ಒಟ್ಟಾರೆ ಮೃತ ಸಂಖ್ಯೆ 3,867ಕ್ಕೇರಿದೆ

ಕಿಲ್ಲರ್ ವೈರಸ್ ಆರ್ಭಟ ಲಾಕ್‍ಡೌನ್ ಸಡಿಲಿಕೆ ನಂತರ ದಿನೇ ದಿನೇ ವ್ಯಾಪಕವಾಗುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ. ಭಾರತದಲ್ಲಿ. ಸೋಂಕು ಪೀಡಿತರ ಸಂಖ್ಯೆ 1.32 ಲಕ್ಷಕ್ಕೇರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇದು ಸರಾಸರಿ 5500 ಪಾಸಿಟಿವ್ ಕೇಸ್ ದಾಖಲಾದ ಸತತ ಎಂಟನೆ ದಿನ. ಅಲ್ಲದೆ, ಕಳೆದ ಮೂರು ದಿನಗಳಿಂದಲೂ ನಿರಂತರವಾಗಿ 6,000ಕ್ಕೂ ಅಕ ಸೋಂಕು ಪ್ರಕರಣಗಳು ದಾಖಲಾಗಿದೆ

ಮೇ 1ರಿಂದಲೂ ಅತಿ ಹೆಚ್ಚು ಸೋಂಕು ಪ್ರಕರಣಗಳು ದೇಶದ ವಿವಿಧ ರಾಜ್ಯಗಳಲ್ಲಿ ವರದಿಯಾಗುತ್ತಲೇ ಇದ್ದು, ದಿನೇ ದಿನೇ ಆಘಾತಕಾರಿ ಮಟ್ಟದಲ್ಲಿ ಉಲ್ಬಣಗೊಳ್ಳುತ್ತಿದೆ. .

ನಿನ್ನೆ ಬೆಳಗ್ಗೆ 8 ಗಂಟೆಯಿಂದ 24 ಗಂಟೆಗಳ ಅವಯಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ 147 ಮಂದಿಯನ್ನು ಕಿಲ್ಲರ್ ಕೊರೊನಾ ಬಲಿ ತೆಗೆದುಕೊಂಡಿದೆ. ಮಹಾರಾಷ್ಟ್ರದಲ್ಲಿ 60, ಗುಜರಾತ್‍ನಲ್ಲಿ 27, ದೆಹಲಿ 23, ಮಧ್ಯಪ್ರದೇಶ 9, ಪಂಜಾಬ್ 7, ತಮಿಳುನಾಡು 5, ಪಶ್ಚಿಮಬಂಗಾಳ ಮತ್ತು ತೆಲಂಗಾಣ 4, ಉತ್ತರ ಪ್ರದೇಶ 3, ಹಾಗೂ ಆಂದ್ರಪ್ರದೇಶ ಮತ್ತು ಜಮ್ಮು-ಕಾಶ್ಮೀರ ರಾಜ್ಯದಲ್ಲಿ ಒಂದು ಸಾವು ಪ್ರಕರಣ ವರದಿಯಾಗಿದೆ.

ನಿನ್ನೆ ಮಧ್ಯರಾತ್ರಿವರೆಗೆ ಲಭಿಸಿದ ಮಾಹಿತಿ ಪ್ರಕಾರ ದೇಶದಲ್ಲಿ ಡೆಡ್ಲಿ ಕೋವಿಡ್-19 ವೈರಸ್‍ಗೆ ಬಲಿಯಾದವರ ಸಂಖ್ಯೆ 3,867ಕ್ಕೇರಿದ್ದು, ಸಾಂಕ್ರಾಮಿಕ ರೋಗಿಗಳ ಸಂಖ್ಯೆ 1,31,868 ತಲುಪಿದೆ. ಇಂದು ಮಧ್ಯರಾತ್ರಿಯೊಳಗೆ ಸೋಂಕಿತರ ಪ್ರಮಾಣ 1.36 ಲಕ್ಷ ದಾಟುವ ಆತಂಕವೂ ಇದೆ.

ಲಾಕ್‍ಡೌನ್ ಸಡಿಲ ನಂತರ ದೇಶದ ವಿವಿಧ ರಾಜ್ಯಗಳಲ್ಲಿ ಕೊರೊನಾ ಮಹಾಸೋಟವಾಗಿದ್ದು, ಸಾವು-ಸೋಂಕು ವ್ಯಾಪಕವಾಗಿ ಉಲ್ಬಣಗೊಂಡಿದೆ. ಒಂದೆಡೆ ಚೇತರಿಕೆ ಪ್ರಮಾಣದಲ್ಲಿ ಶೇ.41.28ರಷ್ಟಿದ್ದು, ನಿನ್ನೆಗೆ ಹೋಲಿಸಿದಲ್ಲಿ ಇದು ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ.

ಈವರೆಗೆ ಸಂಭವಿಸಿರುವ 3,867 ಸಾವು ಪ್ರಕರಣಗಳಲ್ಲಿ, ಮಹಾರಾಷ್ಟ್ರ ಎಂದಿನಂತೆ ಪ್ರಥಮ ಸ್ಥಾನದಲ್ಲಿಯೇ ಮುಂದುವರಿದಿದೆ. ಆ ರಾಜ್ಯದಲ್ಲಿ ಒಟ್ಟು 1,577 ಸಾವುಗಳು ಸಂಭವಿಸಿದ್ದು, 47,190 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.

ಎರಡನೇ ಸ್ಥಾನದಲ್ಲಿರುವ ಗುಜರಾತ್‍ನಲ್ಲಿ 829 ಸಾವುಗಳು ಸಂಭವಿಸಿವೆ. ನಂತರದ ಸ್ಥಾನಗಳಲ್ಲಿ ಮಧ್ಯಪ್ರದೇಶ (281), ಪಶ್ಚಿಮ ಬಂಗಾಳ (269), ದೆಹಲಿ (231). ರಾಜಸ್ತಾನ (160), ಉತ್ತರ ಪ್ರದೇಶ (155), ತಮಿಳುನಾಡು (103), ಆಂಧ್ರಪ್ರದೇಶ (56), ತೆಲಂಗಾಣ (49), ಕರ್ನಾಟಕ(42), ಹಾಗೂ ಪಂಜಾಬ್ (36) ರಾಜ್ಯಗಳಿವೆ.

ಜಮ್ಮು-ಕಾಶ್ಮೀರ 21, ಹರಿಯಾಣ 16, ಬಿಹಾರ 11, ಒಡಿಶಾ ಏಳು, ಕೇರಳ, ಜಾರ್ಖಂಡ್ ಮತ್ತು ಅಸ್ಸಾಂ ತಲಾ ನಾಲ್ಕು, ಚಂಡಿಗಢ, ಮತ್ತು ಹಿಮಾಚಲ ಪ್ರದೇಶ ತಲಾ ಮೂರು, ಉತ್ತರಾಖಂಡ ಎರಡು ಹಾಗೂ ಪುದುಚೇರಿ, ಮತ್ತು ಮೇಘಾಲಯ ರಾಜ್ಯಗಳಲ್ಲಿ ತಲಾ ಒಂದೊಂದು ಸಾವುಗಳು ವರದಿಯಾಗಿವೆ.

ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ ಸಹ ಹೆಚ್ಚಾಗುತ್ತಿದ್ದು, 73,560ರಷ್ಟಿದೆ. ಈ ಮಧ್ಯೆ, ಈವರೆಗೆ 54,440(ಚೇತರಿಕೆ ಪ್ರಮಾಣ ಶೇ.41.28) ಮಂದಿ ಗುಣಮುಖರಾಗಿದ್ದಾರೆ.

ದೇಶದಲ್ಲಿ ವೈರಾಣು ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯಲ್ಲಿ ವೃದ್ದಿ ಕಂಡುಬಂದಿರುವುದು ಸಮಾಧಾನಕರ ಸಂಗತಿಯಾದರೂ, ಮತ್ತೊಂದಡೆ ಸೋಂಕು ಮತ್ತು ಸಾವು ಹೆಚ್ಚಾಗುತ್ತಿರುವುದು ಕಳವಳಕಾರಿಯಾಗಿದೆ.

ಇಂದು ಬೆಳಗ್ಗೆಯೂ ಕೆಲವು ರಾಜ್ಯಗಳಲ್ಲಿ ಸಾವು ಪ್ರಕರಣಗಳು ವರದಿಯಾಗಿದೆ. ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ, ರಾಜಸ್ತಾನ, ಪಶ್ಚಿಮ ಬಂಗಾಳ, ದೆಹಲಿ, ಕರ್ನಾಟಕ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಪಂಜಾಬ್, ಓಡಿಶಾ ಮತ್ತಿತರ ರಾಜ್ಯಗಳಲ್ಲಿ ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ಹೆಮ್ಮಾರಿ ನಿಗ್ರಹಕ್ಕಾಗಿ ಕೆಲವು ನಿರ್ಬಂಧಗಳ ಸಡಿಲಿಕೆಯೊಂದಿಗೆ ನಾಲ್ಕನೇ ಹಂತದ ಲಾಕ್‍ಡೌನ್ ಜಾರಿಯಲ್ಲಿದ್ದು, ಇದರ ಬೆನ್ನಲ್ಲೇ ಆತಂಕಕಾರಿ ವಾತಾವರಣವೂ ನಿರ್ಮಾಣವಾಗಿದೆ. ಜೂನ್‍ನಲ್ಲಿ ದೇಶಾದ್ಯಂತ ಕೊರೊನಾ ವೈರಸ್ ಸೋಂಕು ಮತ್ತು ಸಾವು ಪ್ರಕರಣಗಳು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.


Spread the love

About Laxminews 24x7

Check Also

‘ಅಂಬರೀಶ್ ಆಶೀರ್ವಾದದಿಂದ ಮಗನ ಸಿನಿಮಾ ಬಿಡುಗಡೆ’: ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ ಸುಮಲತಾ

Spread the love ಮಂಡ್ಯ: ಇಂದು ಕನ್ನಡಿಗರ ಮೆಚ್ಚಿನ ನಟ ಅಂಬರೀಶ್ ಅವರ 5ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ, ಮಂಡ್ಯದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ