ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವಾರಿಯರ್ಸ್‌ಗೆ ವೈರಸ್ ಹಬ್ಬಿದೆ. ರಾಜ್ಯದ 6 ಮಂದಿ ಪೊಲೀಸರಿಗೆ ಕೊರೊನಾ ಬಂದಿದ್ದು, ಭಾರೀ ಆತಂಕ ಹೆಚ್ಚಿಸಿದೆ. ಈ ಮಧ್ಯೆ ರಾಜ್ಯದಲ್ಲಿ ಕೊರೊನಾ ಸೋಂಕಿನ ಸಂಖ್ಯೆ 2 ಸಾವಿರ ದಾಟಿದ್ದು, 2089ಕ್ಕೆ ಏರಿದೆ.
ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳಿಗೆ ಹೆಗಲು ಕೊಟ್ಟ ಕೊರೊನಾ ವಾರಿಯರ್ಸ್ ಪೊಲೀಸರಿಗೆ ಸೋಂಕು ಹಬ್ಬಿದೆ. ತಾವು ಇದ್ದಲ್ಲಿಯೇ ಕೊರೊನಾ ಸೋಂಕು ಇವರನ್ನು ಆವರಿಸಿದೆ. ಹಗಲಿರುಳು ದುಡಿಯುವ, ಜನರ ಮಧ್ಯೆ ಇರುವ ವಾರಿಯರ್ಸ್‌ಗೆ ಸೋಂಕು ಹಬ್ಬಿದ್ದು ಆತಂಕಕ್ಕೆ ಕಾರಣವಾಗಿದೆ. ಉಡುಪಿಯಲ್ಲಿ ಮೂವರು, ಬೆಂಗಳೂರು, ದಕ್ಷಿಣ ಕನ್ನಡ, ಹಾಸನ, ತಲಾ ಒಬ್ಬರು ಪೊಲೀಸರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ.
