ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಭಾರತದಲ್ಲಿ ಕಳೆದ 24 ಗಂಟೆಯಲ್ಲಿ ಬರೋಬ್ಬರಿ 6,977 ಹೊಸ ಕೊರೋನಾ ಪ್ರಕರಣ ದಾಖಲಾಗಿದೆ. ಈ ಮೂಲಕ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದೇಶದಲ್ಲಿ 1,38,845 ಕ್ಕೆ ಏರಿಕೆಯಾಗಿದೆ.
ವಿಶ್ವದಲ್ಲಿ 54 ಲಕ್ಷ ಜನರಲ್ಲಿ ಕೊರೋನಾ ವೈರಸ್ ಇದೆ. ಈ ಪೈಕಿ 3.46 ಲಕ್ಷ ಜನರು ಕೊರೋನಾ ವೈರಸ್ಗೆ ಮೃತಪಟ್ಟಿದ್ದಾರೆ. ಈ ಪೈಕಿ ಭಾರತದಲ್ಲಿ ಕೊರೋನಾ ಪೀಡಿತರ ಸಂಖ್ಯೆ 1.38 ಲಕ್ಷ ಇದೆ. ಕಳೆದ 24 ಗಂಟೆಯಲ್ಲಿ 154 ಜನರು ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 4,021ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 3,280 ಜನರು ವೈರಸ್ನಿಂದ ಚೇತರಿಕೆ ಕಂಡಿದ್ದಾರೆ. ಭಾರತದಲ್ಲಿ ಈವರೆಗೆ 57 ಸಾವಿರ ಜನರು ವೈರಸ್ನಿಂದ ಮುಕ್ತಿ ಕಂಡಿದ್ದಾರೆ