Breaking News

ಪ್ರತಿ ನಿತ್ಯ ದೇಶದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಮಂದಿಯಲ್ಲಿ ಕೊರೊನಾ

Spread the love

ನವದೆಹಲಿ: ಪ್ರತಿ ನಿತ್ಯ ದೇಶದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಕೊರೊನಾ ಗಣನೀಯ ಏರಿಕೆಯ ನಡುವೆ ಒಳ್ಳೆ ಸುದ್ದಿಯೊಂದು ಮುನ್ನೆಲೆಗೆ ಬಂದಿದೆ. ಭಾರತದಲ್ಲಿ ಕೊರೊನಾದಿಂದ ಗುಣಮುಖವಾಗುತ್ತಿರುವ ಪ್ರಮಾಣ ಶೇ.51 ಏರಿಕೆಯಾಗಿದೆ.

ಕೇಂದ್ರ ಆರೋಗ್ಯ ಇಲಾಖೆ ತನ್ನ ವೆಬ್‍ಸೈಟಿನಲ್ಲಿ ಪ್ರಕಟಿಸಿರುವ ಮಾಹಿತಿ ಪ್ರಕಾರ ಭಾರತದಲ್ಲಿ 3,32,424 ಮಂದಿಯಲ್ಲಿ ಈವರೆಗೂ ಸೋಂಕು ಕಂಡು ಬಂದಿದೆ. ಈ ಪೈಕಿ 1,69,797 ಮಂದಿ ಚೇತರಿಸಿಕೊಂಡು ಗುಣಮುಖವಾಗಿದ್ದಾರೆ. ಸದ್ಯ 1,53,106 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಸರ್ಕಾರದ ಈ ಅಂಕಿಅಂಶಗಳ ಪ್ರಕಾರ ದೇಶದಲ್ಲಿ ಸಕ್ರಿಯ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳು ಹೆಚ್ಚಿದ್ದು, ಈ ಪ್ರಮಾಣ ಶೇ. 51 ಆಗಿದೆ. ಗುಣಮುಖವಾಗುವವರ ಸಂಖ್ಯೆ ಹಂತ ಹಂತವಾಗಿ ಏರಿಕೆ ಕಾಣುತ್ತಿದ್ದು ಭಾರತದ ಮಟ್ಟಿಗೆ ಉತ್ತಮ ಬೆಳವಣಿಗೆಯಾಗಿದೆ.


Spread the love

About Laxminews 24x7

Check Also

ಪ್ರಧಾನಿ ಕುರ್ಚಿ ಬಳಿ ಕೈ ಮಹಿಳಾ ಸದಸ್ಯರ ಪ್ರತಿಭಟನೆಯ ವಿಡಿಯೋ ಬಿಡುಗಡೆ – ಕಿರಣ್‌ ರಿಜಿಜು ಆಕ್ರೋಶ

Spread the love ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್‌ ಮಹಿಳಾ ಸದಸ್ಯರು ಪ್ರತಿಭಟನೆ ನಡೆಸಿದ್ದ ವಿಡಿಯೋವನ್ನು ಸಂಸದೀಯ ವ್ಯವಹಾರಗಳ ಖಾತೆಯ ಸಚಿವ ಕಿರಣ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ