Home / ಜಿಲ್ಲೆ / ಮಠದಲ್ಲಿ ಯಾರಿಗೂ ಕೊರೊನಾ ಪಾಸಿಟಿವ್ ಲಕ್ಷಣಗಳು ಇಲ್ಲ: ಸಿದ್ದಲಿಂಗ ಶ್ರೀ

ಮಠದಲ್ಲಿ ಯಾರಿಗೂ ಕೊರೊನಾ ಪಾಸಿಟಿವ್ ಲಕ್ಷಣಗಳು ಇಲ್ಲ: ಸಿದ್ದಲಿಂಗ ಶ್ರೀ

Spread the love

ತುಮಕೂರು: ಸಿದ್ದಗಂಗಾ ಮಠದಲ್ಲಿ ಯಾರಿಗೂ ಕೊರೊನಾ ಪಾಸಿಟಿವ್ ಲಕ್ಷಣಗಳು ಇಲ್ಲ ಎಂದು ಸಿದ್ದಲಿಂಗ ಶ್ರೀಗಳು ಸ್ಪಷ್ಟನೆ ನೀಡಿದ್ದಾರೆ.

ಮಠದಲ್ಲಿ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್ ಇದೆ ಎಂದು ವದಂತಿ ಹಬ್ಬಿತ್ತು. ಈ ಹಿನ್ನೆಲೆಯಲ್ಲಿ ಖುದ್ದು ಸ್ಪಷ್ಟನೆ ನೀಡಿದ ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳು, ಆಂಧ್ರದಿಂದ ಬಂದ ವಿದ್ಯಾರ್ಥಿಯೊಬ್ಬನಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂಬುದಾಗಿ ಪ್ರಚಾರವಾಗಿತ್ತು. ಆ ವಿದ್ಯಾರ್ಥಿಯನ್ನ ಜಿಲ್ಲಾಡಳಿತ ಪರೀಕ್ಷೆ ನಡೆಸಿತು. ಆತನ ಪರೀಕ್ಷೆಯಲ್ಲಿ ಎಲ್ಲಾ ವರದಿಗಳು ನೆಗೆಟಿವ್ ಬಂದಿದೆ ಎಂದು ತಿಳಿಸಿದ್ದಾರ

ಜೊತೆಗೆ ಆತನ ಬಿಲ್ಡಿಂಗ್‍ನಲ್ಲಿದ್ದ 120 ವಿದ್ಯಾರ್ಥಿಗಳಿಗೂ ಪರೀಕ್ಷೆ ನಡೆಸಲಾಗಿದೆ. ಆದರೆ ಯಾರಿಗೂ ಕೂಡ ಪಾಸಿಟಿವ್ ಲಕ್ಷಣಗಳು ಇಲ್ಲ. ಹೀಗಾಗಿ ಈ ಬಗ್ಗೆ ಯಾರು ಕೂಡ ಆತಂಕ ಪಡುವ ಅಥವಾ ಪ್ಯಾನಿಕ್ ಆಗುವ ಅವಶ್ಯಕತೆ ಇಲ್ಲ ಎಂದು ಶ್ರೀಗಳು ಸ್ಪಷ್ಟನೆ ನೀಡಿದ್ದಾರೆ.


Spread the love

About Laxminews 24x7

Check Also

*ಶ್ರೀ ಜಡಿಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

Spread the loveಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ