Breaking News
Home / ಜಿಲ್ಲೆ / ಕಲಬುರ್ಗಿ / ಕೊರೊನಾ ಸೋಂಕಿನಿಂದ ಕಲ್ಯಾಣ ಕರ್ನಾಟಕದ ಸುಪ್ರಸಿದ್ಧ ಶ್ರೀ ಶರಣಬವೇಶ್ವರ ಜಾತ್ರೆಯನ್ನು ರದ್ದುಗೊಳಿಸಲಾಗಿದೆ.

ಕೊರೊನಾ ಸೋಂಕಿನಿಂದ ಕಲ್ಯಾಣ ಕರ್ನಾಟಕದ ಸುಪ್ರಸಿದ್ಧ ಶ್ರೀ ಶರಣಬವೇಶ್ವರ ಜಾತ್ರೆಯನ್ನು ರದ್ದುಗೊಳಿಸಲಾಗಿದೆ.

Spread the love

ಕಲಬುರಗಿ: ಕೊರೊನಾ ಸೋಂಕಿನಿಂದ 76 ವರ್ಷದ ವೃದ್ಧ ಮೃತಪಟ್ಟ ಹಿನ್ನೆಲೆಯಲ್ಲಿ ಶುಕ್ರವಾರ ನಡೆಯಬೇಕಿದ್ದ ಕಲ್ಯಾಣ ಕರ್ನಾಟಕದ ಸುಪ್ರಸಿದ್ಧ ಶ್ರೀ ಶರಣಬವೇಶ್ವರ ಜಾತ್ರೆಯನ್ನು ರದ್ದುಗೊಳಿಸಲಾಗಿದೆ.

ಕೆಮ್ಮು, ಜ್ವರ ಇದ್ದರೆ ಶ್ರೀ ಶರಣಬಸವೇಶ್ವರ ಜಾತ್ರೆಗೆ ಬರಬೇಡಿ ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ.ಶರತ್ ಈ ಮೊದಲು ಹೇಳಿದ್ದರು. ಆದರೆ ವೃದ್ಧ ಮೃತಪಟ್ಟಿದ್ದು ಕೊರೊನಾ ವೈರಸ್‍ನಿಂದಲೇ ಎಂದು ಲ್ಯಾಬ್ ರಿಪೋರ್ಟ್ ಬರುತ್ತಿದ್ದಂತೆ ಜಿಲ್ಲೆಯಲ್ಲಿ ಹೈಲರ್ಟ್ ಗೆ ಜಿಲ್ಲಾಡಳಿತ ಮುಂದಾಗಿದೆ. ಈ ನಿಟ್ಟಿನಲ್ಲಿ ಜಾತ್ರೆಯ ಆಯೋಜಕರು ಕೂಡ ಜಾತ್ರೆಯನ್ನು ರದ್ದುಗೊಳಿಸಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಕೊರೊನಾಗೆ ಕರ್ನಾಟಕದಲ್ಲಿ ಮೊದಲ ಬಲಿ

ಶರಣಬಸವೇಶ್ವರ ಜಾತ್ರೆ ಶುಕ್ರವಾರದಿಂದ ಪ್ರಾರಂಭವಾಗಿ 13 ದಿನಗಳ ಕಾಲ ನಡೆಯುತ್ತಿತ್ತು. ಈ ವೇಳೆ ಕನಿಷ್ಠ 4 ಲಕ್ಷಕ್ಕೂ ಹೆಚ್ಚು ಭಕ್ತರು ಇಲ್ಲಿಗೆ ಆಗಮಿಸಿ ಶರಣನ ದರ್ಶನ ಪಡೆಯುತ್ತಿದ್ದರು. ಹೀಗಾಗಿ ಅಷ್ಟು ಜನರ ಆರೋಗ್ಯದ ಜವಾಬ್ದಾರಿಯನ್ನು ಜಿಲ್ಲಾಡಳಿತ ಹೊತ್ತುಕೊಂಡಿತ್ತು. ಆದರೆ ವೃದ್ಧ ಮೃತಪಟ್ಟಿದ್ದು ಕೊರೊನಾ ಸೋಂಕಿನಿಂದಲೇ ಎಂಬ ವರದಿ ಸಿಗುತ್ತಿದ್ದಂತೆ ಜಾತ್ರೆಯ ಆಯೋಜಕರು ಅಲರ್ಟ್ ಆಗಿದ್ದಾರೆ. ಈ ಮೂಲಕ ಜಾತ್ರೆಯನ್ನು ರದ್ದುಗೊಳಿಸಿ ಪ್ರಕಟಣೆ ಹೊರಡಿಸಿದ್ದಾರೆ.

ಇದಕ್ಕೂ ಮುನ್ನ ಸುದ್ದಿಗೋಷ್ಠಿ ನಡೆಸಿದ್ದ ಡಿಸಿ ಬಿ.ಶರತ್ ಅವರು, ಕೆಮ್ಮು, ಜ್ವರ, ಶೀತದಿಂದ ಬಳಲುತ್ತಿರುವ ಭಕ್ತರು ಜಾತ್ರೆಗೆ ಬರಬೇಡಿ. ಯಾರಿಗಾದರೂ ಸೋಂಕು ಇದ್ದಲಿ ಅದು ಬೇರೆಯವರಿಗೆ ಹರಡದಿರಲ್ಲಿ ಎಂಬ ಕಾರಣಕ್ಕೆ ಈ ಕ್ರಮ ಜರುಗಿಸಿರುವುದ್ದಾಗಿ ಹೇಳಿದ್ದರು. ಅಷ್ಟೇ ಅಲ್ಲದೆ ಕಲ್ಯಾಣ ಕರ್ನಾಟಕದ ಸುಪ್ರಸಿದ್ಧ ಜಾತ್ರೆಗಳಲ್ಲಿ ಕಲಬುರಗಿಯ ಶ್ರೀ ಶರಣಬಸವೇಶ್ವರ ಜಾತ್ರೆ ಪ್ರತಿ ವರ್ಷ ಅದ್ಧೂರಿಯಾಗಿ ನಡೆಯುತ್ತಿದೆ. ಈ ಜಾತ್ರೆಗೆ 1 ಲಕ್ಷಕ್ಕೂ ಹೆಚ್ಚು ಭಕ್ತರು ತೇರು ಏಳೆಯಲು ಆಗಮಿಸುತ್ತಾರೆ. ಆದರೆ ಹೀಗೆ ಆಗಮಿಸುವ ಭಕ್ತರಿಗೆ ಇದೀಗ ಚೀನಾದ ಮಹಾಮಾರಿ ಕೊರೊನಾ ಕರಿನೆರಳು ಆವರಿಸಿದೆ. ಹೀಗಾಗಿ ಜಾತ್ರೆಗೆ ಬರುವ ಭಕ್ತರು ಒಂದಿಷ್ಟು ಮುಂಜಾಗೃತೆ ವಹಿಸಿಕೊಳ್ಳಲು ಆರೋಗ್ಯ ಇಲಾಖೆ ಸೂಚಿಸಿತ್ತು.


Spread the love

About Laxminews 24x7

Check Also

ಎಷ್ಟು ದೊಡ್ಡ ರಾಜ್ಯ ಕಟ್ಟಿದ್ರಿ ಅನ್ನೋದು ಮುಖ್ಯ ಅಲ್ಲ, ಯಾವ ಥರ ರಾಜನಾಗಿ ಬಾಳಿದ್ರಿ ಅನ್ನೋದು ಮುಖ್ಯ: ಕಿಚ್ಚ

Spread the love ಸ್ಯಾಂಡಲ್‌ವುಡ್‌ನಲ್ಲಿ ಸದ್ಯ ಕಾಂಟ್ರವರ್ಸಿಗಳೇ ಮೇಳೈಸುತ್ತಿವೆ. ಚಂದನ್‌ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರ ವಿಚ್ಛೇದನ ಸುದ್ದಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ