Home / ಜಿಲ್ಲೆ / ಬಳ್ಳಾರಿ:ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿ……..

ಬಳ್ಳಾರಿ:ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿ……..

Spread the love

ಬಳ್ಳಾರಿ: ಕೊರೊನಾ ವೈರಸ್ ರಾಜ್ಯದಲ್ಲಿ ಅಟ್ಟಹಾಸ ಮುಂದುವರೆಸಿದ್ದು, ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.

ಈ ಕುರಿತು ಬಳ್ಳಾರಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು, ಚಿಕ್ಕಬಳ್ಳಾಪುರ ಜಿಲ್ಲೆ ಗೌರಿ ಬಿದನೂರಿನಲ್ಲಿ ನಿನ್ನೆ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಈಗ ಅವರ ಕುರಿತ ಲ್ಯಾಬ್ ವರದಿ ಬಂದಿದ್ದು, ಕೊರೂನಾ ಸೋಂಕಿನಿಂದಲೇ ಮಹಿಳೆ ಮೃತಪಟ್ಟಿರುವುದು ದೃಢಪಟ್ಟಿದೆ ಎಂದಿದ್ದಾರೆ.

ಈ ಹಿಂದೆ ಕಲಬುರಗಿಯಲ್ಲಿ ವ್ಯಕ್ತಿಯೊಬ್ಬರು ಈ ಸೋಂಕಿಗೆ ಬಲಿಯಾಅಗಿದ್ದರು. ಇದೀಗ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾಗೆ ಮೃತ ಪಟ್ಟವರ ಸಂಖ್ಯೆ ಎರಡಕ್ಕೇರಿದೆ. ರಾಜ್ಯದಲ್ಲಿ 1.42 ಲಕ್ಷ ಜನರನ್ನು ಸ್ಕ್ರೀನಿಂಗ್ ಗೆ ಒಳಪಡಿಸಲಾಗಿದೆ. 52 ಜನರಲ್ಲಿ ಕೊರೊನ ಸೋಂಕು ಪತ್ತೆಯಾಗಿದ್ದು, 2242 ಜನರಲ್ಲಿ ನೆಗೆಟೀವ್ ಬಂದಿದೆ. 216 ಜನರನ್ನು ಐಸೋಲೇಷನ್ ನಲ್ಲಿ ಇಡಲಾಗಿದೆ ಎಂದು ಹೇಳಿದರು


Spread the love

About Laxminews 24x7

Check Also

ಹೋಟೆಲ್ ರೂಮಿನಲ್ಲಿ ಇಬ್ಬರು ಪುರುಷರೊಂದಿಗೆ ವಿವಾಹಿತ ಮಹಿಳೆಯ ಚೆಲ್ಲಾಟ

Spread the love ಇತ್ತೀಚಿನ ದಿನಗಳಲ್ಲಿ ವಿವಾಹಿತ ಪುರುಷರು ಮತ್ತು ಮಹಿಳೆಯರ ಅಕ್ರಮ ಸಂಬಂಧದ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಇಂತಹದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ