Breaking News

ಬೆಳಗಾವಿಯಲ್ಲಿ ಒಬ್ಬನಿಂದಲೇ ಮೂವರಿಗೆ ಕೊರೊನಾ ಸೋಂಕು ಹರಡಿದ್ದು, ಇಂದು ಒಟ್ಟು ನಾಲ್ಕು ಪ್ರಕರಣಗಳು ಪತ್ತೆಯಾಗಿವೆ

Spread the love

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇಂದು ಒಂದೇ ದಿನದಲ್ಲಿ 11 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಅವರಲ್ಲಿ ಬೆಳಗಾವಿಯಲ್ಲಿ ಹೆಚ್ಚು ಪ್ರಕರಣ ಪತ್ತೆಯಾಗಿದೆ.

ಬೆಳಗಾವಿಯಲ್ಲಿ ಒಬ್ಬನಿಂದಲೇ ಮೂವರಿಗೆ ಕೊರೊನಾ ಸೋಂಕು ಹರಡಿದ್ದು, ಇಂದು ಒಟ್ಟು ನಾಲ್ಕು ಪ್ರಕರಣಗಳು ಪತ್ತೆಯಾಗಿವೆ. ಬೆಳಗಾವಿ ಜಿಲ್ಲೆಯ ರಾಯಭಾಗದ ಮೂವರಿಗೆ ಮತ್ತು ಹೀರೇಬಾಗೆವಾಡಿಯ ಒಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ವಿಜಯಪುರದಲ್ಲಿ ಮೊದಲ ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಜನತೆಯಲ್ಲಿ ಆತಂಕ ಮನೆ ಮಾಡಿದೆ. ಕಲಬುರಗಿಯ ಸತ್ತ ವೃದ್ಧನಿಂದ ಇಬ್ಬರಿಗೆ, ಮೈಸೂರಿನ ಒಬ್ಬರಲ್ಲಿ ಇನ್ನು ಬೆಂಗಳೂರಿನಲ್ಲಿ ಇಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ.

ಮೈಸೂರಿನಲ್ಲಿ 32 ವರ್ಷದ ಪುರುಷ, ಕಲಬುರಗಿಯಲ್ಲಿ 24 ವರ್ಷದ ಮಹಿಳೆ ಹಾಗೂ ಸೋಂಕಿತ ವ್ಯಕ್ತಿಯ ಸೊಸೆಯಲ್ಲಿ ಕೂಡ ಕೊರೊನಾ ದೃಢಪಟ್ಟಿದೆ. ಇನ್ನು ಬೆಂಗಳೂರಿನಲ್ಲಿ ಮತ್ತೆ ಮೂರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 226ಕ್ಕೆ ಏರಿಕೆಯಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ