Breaking News
Home / ಜಿಲ್ಲೆ / ಕೊರೊನಾ ಭೀತಿ, ರಾತ್ರಿ ವೇಳೆಯಲ್ಲಿ ಔಷಧ ಸಿಂಪಡಿಸುತ್ತಿಲ್ಲ- ಧಾರವಾಡ ಡಿ.ಸಿ ಸ್ಪಷ್ಟನೆ

ಕೊರೊನಾ ಭೀತಿ, ರಾತ್ರಿ ವೇಳೆಯಲ್ಲಿ ಔಷಧ ಸಿಂಪಡಿಸುತ್ತಿಲ್ಲ- ಧಾರವಾಡ ಡಿ.ಸಿ ಸ್ಪಷ್ಟನೆ

Spread the love

ಸಾಮಾಜಿಕ ಜಾಲತಾಣಗಳಲ್ಲಿನ ಸುಳ್ಳು ಸುದ್ದಿಗೆ ಸ್ಪಷ್ಟನೆ

ಹುಬ್ಬಳ್ಳಿ: ಕೊರೊನಾ ವೈರಸ್ ಹರಡದಂತೆ ಅರೋಗ್ಯ ಇಲಾಖೆಯಿಂದ ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಗಾಳಿಯಲ್ಲಿ ಔಷಧ ಸಿಂಪಡಿಸುತ್ತಿಲ್ಲ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಇಂದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆ ವರೆಗೆ ಗಾಳಿಯಲ್ಲಿ ಔಷಧ ಸಿಂಪಡಿಸಲಾಗುತ್ತಿದೆ. ಹೀಗಾಗಿ ಸಾರ್ವಜನಿಕರು ಹೊರಗಡೆ ಬರಬಾರದು ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇಂತಹ ಊಹಾಪೋಹದ ಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದಿದ್ದಾರೆ.
ಆರೋಗ್ಯ ತುರ್ತು ಪರಿಸ್ಥಿತಿಯ ಈ ಸಂದರ್ಭದಲ್ಲಿ ಇಂತಹ ಗಾಳಿ ಸುದ್ದಿ, ವದಂತಿಗಳನ್ನು ಯಾರೂ ನಂಬಬಾರದು ಮತ್ತು ಅನಗತ್ಯ ಭಯಭೀತರಾಗಬಾರದು. ಜಿಲ್ಲಾಡಳಿತದಿಂದ ನೀಡಲಾಗುವ ಅಧಿಕೃತ ಮಾಹಿತಿಯನ್ನು ಮಾತ್ರ ಸಾರ್ವಜನಿಕರು ಪರಿಗಣಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಚುನಾವಣೆ ಪ್ರಚಾರದ ವೇಳೆ ಮೋದಿ ಭಾವಚಿತ್ರ ಬಳಕೆ: ವಿಚಾರಣೆ ಏ.20ಕ್ಕೆ ಮುಂದೂಡಿಕೆ

Spread the loveಶಿವಮೊಗ್ಗ: ಲೋಕಸಭೆ ಚುನಾವಣೆ ಶಿವಮೊಗ್ಗ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರು ಚುನಾವಣೆ ಪ್ರಚಾರದ ವೇಳೆ ಹಾಗೂ ಸಭೆಗಳಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ