Breaking News
Home / new delhi / ಕೊರೊನಾ ಹಾಟ್‌ಸ್ಪಾಟ್‌ಗಳ ಪಟ್ಟಿ ಬಿಡುಗಡೆ, ……

ಕೊರೊನಾ ಹಾಟ್‌ಸ್ಪಾಟ್‌ಗಳ ಪಟ್ಟಿ ಬಿಡುಗಡೆ, ……

Spread the love

ನವದೆಹಲಿ : ದೇಶವನ್ನೇ ಆಲ್ಲೋಲ ಕಲ್ಲೋಲ ಮಾಡಿರುವ ಮಹಾಮಾರಿ ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಹಲವು ಕ್ರಮಗಳನ್ನ ಕೈಗೊಂಡಿದ್ದು, ದೇಶದಲ್ಲಿ 170 ಜಿಲ್ಲೆಗಳು ಕೊರೊನಾ ವೈರಸ್ ಹಾಟ್‌ಸ್ಪಾಟ್‌ಗಳಾಗಿವೆ. ಇದರಲ್ಲಿ 207 ಜಿಲ್ಲೆಗಳು ಅಪಾಯದಲ್ಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಅತಿ ಹೆಚ್ಚು ಕರೊನಾ ಬಾಧಿತವಾಗಿರುವ ರಾಷ್ಟ್ರದ 170 ಜಿಲ್ಲೆಗಳ ಪೈಕಿ ಕರ್ನಾಟಕದ 8 ಜಿಲ್ಲೆಗಳು ಕೂಡ ಸೇರಿವೆ. ಯಾವ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಜಾಸ್ತಿ ಇದೆಯೋ ಅಂಥಹ ಜಿಲ್ಲೆಗಳನ್ನು ಕೇಂದ್ರ ಆರೋಗ್ಯ ಸಚಿವಾಲಯ ಹಾಟ್ ಸ್ಪಾಟ್ ಎಂದು ಗುರುತಿಸಿದೆ

ಕರ್ನಾಟಕದ ಬೆಂಗಳೂರು ನಗರ, ಮೈಸೂರು, ಬೆಳಗಾವಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಬಾಗಲಕೋಟೆ ಮತ್ತು ಧಾರವಾಡ ಜಿಲ್ಲೆಗಳನ್ನು ಹಾಟ್ ಸ್ಪಾಟ್ ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ಆರೋಗ್ಯ ಇಲಾಖೆ ದೇಶದಲ್ಲಿ ಕೊರೊನಾ ಸೋಂಕು ಇರುವ ಮತ್ತು ಇಲ್ಲದಿರುವ ಜಿಲ್ಲೆಗಳನ್ನ ಒಟ್ಟು ಮೂರು ವಲಯಗಳಲ್ಲಿ ವಿಂಗಡಿಸಿದೆ. ಇದರಲ್ಲಿ ಒಂದು ಹಾಟ್​ಸ್ಪಾಟ್, ಎರಡನೆಯದ್ದು ನಾನ್ ಹಾಟ್​ಸ್ಪಾಟ್ ಮತ್ತು ಮೂರನೆಯದ್ದು ಹಸಿರು ವಲಯದ ಜಿಲ್ಲೆಗಳು.

ಈಗಾಗಲೇ ಕೊರೊನಾ ಸೋಂಕು ದೃಢಪಟ್ಟಿರುವ ಜಿಲ್ಲೆಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗುವ ಸಾಧ್ಯತೆಗಳು ದಟ್ಟವಾಗಿರುವ ಜಿಲ್ಲೆಗಳನ್ನ ಹಾಟ್​ಸ್ಪಾಟ್ ಜಿಲ್ಲೆಗಳು ಎಂದು ಪರಿಗಣಿಸಲಾಗಿದೆ.

ಹಾಟ್​ಸ್ಪಾಟ್​ನಲ್ಲಿ ಒಟ್ಟು 170 ಜಿಲ್ಲೆಗಳಿವೆ. ಇಲ್ಲಿ ಕೊರೊನಾ ನಿಯಂತ್ರಣಕ್ಕೆ ಕ್ಲಸ್ಟರ್ ಲಾಕ್​ಡೌನ್ ಮಾದರಿ ಸೇರಿದಂತೆ ಎಲ್ಲಾ ಅಗತ್ಯ ಕಠಿಣ ಕ್ರಮಗಳನ್ನೂ ಕೈಗೊಳ್ಳಲಾಗುತ್ತದೆ. ದೇಶಾದ್ಯಂತ ಒಟ್ಟು 170 ಜಿಲ್ಲೆಗಳನ್ನು ಹಾಟ್ ಸ್ಪಾಟ್ ಎಂದು ಗುರುತಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರವಾಲ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕೊರೊನಾ ಸೋಂಕು ದೃಢಪಟ್ಟಿರುವ ಪ್ರಕರಣಗಳಿದ್ದು, ಕೆಲ ದಿನಗಳಿಂದ ಯಾವುದೇ ಹೊಸ ಪ್ರಕರಣಗಳು ಕಂಡು ಬಂದಿಲ್ಲ ಅಂದರೆ ಈ ಜಿಲ್ಲೆಗಳನ್ನ ನಾನ್ ಹಾಟ್​ಸ್ಪಾಟ್ ಜಿಲ್ಲೆಗಳು ಅಂತ ಪರಿಗಣಿಸಲಾಗಿದೆ.

ಇಲ್ಲೂ ಸಹ ನಿರ್ಬಂಧಗಳು ಇರುತ್ತದೆ, ಆದರೆ ಒಂದಷ್ಟು ವಿನಾಯಿತಿಯೂ ಇರುತ್ತೆ. ದೇಶದ ಒಟ್ಟು 207 ಜಿಲ್ಲೆಗಳು ನಾನ್​ ಹಾಟ್​ಸ್ಪಾಟ್​ನಲ್ಲಿ ಬರುತ್ತವೆ. ಇಲ್ಲಿವರೆಗೂ ಒಂದೂ ಕೊರೊನಾ ಪ್ರಕರಣಗಳು ಪತ್ತೆಯಾಗದೇ ಇರುವ ಜಿಲ್ಲೆಗಳನ್ನ ಹಸಿರು ವಲಯದಲ್ಲಿರುವ ಜಿಲ್ಲೆಗಳು ಎಂದು ಪರಿಗಣಿಸಲಾಗಿದೆ.

ಈ ಜಿಲ್ಲೆಗಳಲ್ಲಿ ಲಾಕ್​ಡೌನ್ ಸಡಿಲಿಕೆ ಮಾಡಲಾಗುತ್ತದೆ. ಆದರೆ, ಆಯಾ ರಾಜ್ಯ ಸರ್ಕಾರಗಳು ಯಾವ ರೀತಿಯ ವಿನಾಯಿತಿಯನ್ನ ನೀಡುತ್ತವೆಯೋ ಅವು ಮಾತ್ರ ಇಲ್ಲಿ ಜಾರಿಯಲ್ಲಿ ಇರುತ್ತವೆ. ಹಾಟ್​ಸ್ಪಾಟ್ ಹಾಗೂ ನಾನ್ ಹಾಟ್​ಸ್ಪಾಟ್ ಜಿಲ್ಲೆಗಳನ್ನ ಹೊರತುಪಡಿಸಿ ಮಿಕ್ಕೆಲ್ಲಾ ಜಿಲ್ಲೆಗಳೂ ಹಸಿರು ವಲಯದ ಅಡಿಯಲ್ಲಿ ಬರುತ್ತವೆ.

ಇದು ಕೇಂದ್ರ ಸರ್ಕಾರ ಘೋಷಿಸಿರುವ ಹಾಟ್​ಸ್ಪಾಟ್, ನಾನ್ ಹಾಟ್​ಸ್ಪಾಟ್ ಹಾಗೂ ಹಸಿರು ವಲಯದ ಜಿಲ್ಲೆಗಳ ಪಟ್ಟಿಯನ್ನು ಸಂದರ್ಭಕ್ಕೆ ತಕ್ಕಂತೆ ಬದಲಿಸುವ ಅಧಿಕಾರ ಆಯಾ ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇರುತ್ತದೆ ಅಂತ ಕೇಂದ್ರ ಆರೊಗ್ಯ ಇಲಾಖೆ ಹೇಳಿದೆ.

ಹಾಟ್ ಸ್ಪಾಟ್ ಜಿಲ್ಲೆಗಳಲ್ಲಿ ಪ್ರತಿ ಮನೆಯಲ್ಲೂ ತಪಾಸಣೆ ನಡೆಸಲಾಗುತ್ತದೆ. ಯಾವುದೇ ಪಾಸಿಟಿವ್ ಪ್ರಕರಣಗಳು ವರದಿಯಾಗದ ಜಿಲ್ಲೆಗಳಲ್ಲಿ ಏಪ್ರಿಲ್ 20ರ ನಂತರ ಲಾಕ್ ಡೌನ್ ಸಡಿಲಗೊಳಿಸಲಾಗುವುದು ಎಂದು ಹೇಳಿದ್ದಾರೆ. ಅಲ್ಲದೆ
ದೇಶದಲ್ಲಿ ಕೊರೋನಾ ಇನ್ನೂ ಸಮೂಹಕ್ಕೆ ಹೋಗಿಲ್ಲ ಎಂದು ಅಗರವಾಲ್ ಅವರು ಸ್ಪಷ್ಟಪಡಿಸಿದ್ದಾರೆ.

ಏಪ್ರಿಲ್​ 14ರಂದು ಮೊದಲನೇ ಹಂತದ ಲಾಕ್​ಡೌನ್​ ಮುಗಿದಿದ್ದು, ನಿನ್ನೆಯಿಂದಲೇ 2ನೇ ಹಂತದ ಲಾಕ್​ಡೌನ್​ ಆರಂಭವಾಗಿದ್ದು, ಮೇ 3ರವರೆಗೆ ಇಡೀ ರಾಷ್ಟ್ರ ದಿಗ್ಬಂಧನಲ್ಲಿ ಇರಲಿದೆ. ಎರಡನೇ ಹಂತದ ಲಾಕ್​ಡೌನ್​ ಮಾರ್ಗಸೂಚಿಯಲ್ಲಿ ಕೇಂದ್ರ ಸರ್ಕಾರ ಒಂದಿಷ್ಟು ವಿನಾಯಿತಿಗಳನ್ನು ನೀಡಿದೆ.

ಸರ್ಕಾರಿ ವಾಹನಗಳು ಹಾಗೂ ಸಾರ್ವಜನಿಕ ಸ್ಥಳಗಳ ತೆರೆಯುವುದನ್ನು ಸರ್ಕಾರ ನಿಷೇಧಿಸಿದೆ. ಏಪ್ರಿಲ್​ 20ರಿಂದ ಕೃಷಿ, ತೋಟಗಾರಿಕೆ ಚಟುವಟಿಕೆಗಳಿಗೆ ಸರ್ಕಾರ ಅನುಮತಿ ಮಾಡಿಕೊಟ್ಟಿದೆ. ಈ ಮಧ್ಯೆ ದೇಶಾದ್ಯಂತ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 12 ಸಾವಿರ ಗಡಿ ದಾಟಿದ್ದು, 392 ಮಂದಿ ಮೃತಪಟ್ಟಿದ್ದಾರೆ. ಕೋವಿಡ್‌-19 ಗುಣಪಡಿಸಿದ ಮತ್ತು ಬಿಡುಗಡೆಯಾದ ಪ್ರಕರಣಗಳ ಸಂಖ್ಯೆ ಈಗ ರಾಷ್ಟ್ರದಾದ್ಯಂತ 1,305 ರಷ್ಟಿದೆ ಎಂದು ಅಂಕಿ ಅಂಶ ತಿಳಿಸಿದೆ.

ದೇಶದ ಅತ್ಯಂತ ಹೆಚ್ಚು ಹಾನಿಯಾಗಿರುವ ಮಹಾರಾಷ್ಟ್ರದಲ್ಲಿ ಮಂಗಳವಾರ ಬೆಳಿಗ್ಗೆ ಮತ್ತೆ ಹೊಸ ಪ್ರಕರಣಗಳು ಕಂಡುಬಂದಿವೆ. ದೃಢಪಡಿಸಿದ ಪ್ರಕರಣಗಳ ಸಂಖ್ಯೆ 2,687ಕ್ಕೆ ಏರಿಕೆಯಾಗಿದ್ದು, ಹತ್ತು ಹೊಸ ಸಾವುಗಳು ಸಂಭವಿಸಿದೆ. ಇದರೊಂದಿಗೆ ಇಲ್ಲಿಯವರೆಗೆ ಸಾವಿನ ಸಂಖ್ಯೆ 170ಕ್ಕೆ ತಲುಪಿದೆ, ನಂತರ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಈಗ 1,561 ಪ್ರಕರಣಗಳು ದಾಖಲಾಗಿದ್ದು, ಇದುವರೆಗೆ 30 ಸಾವು ಸಂಭವಿಸಿದೆ.


Spread the love

About Laxminews 24x7

Check Also

ಸರ್ಕಾರಿ ವಾಹನದಲ್ಲಿ ಬಿಜೆಪಿ ಹಣ ಸಾಗಣೆ: ದಿನೇಶ್‌ ಗುಂಡೂರಾವ್

Spread the loveಮೈಸೂರು: ‘ಬಿಜೆಪಿ ನಾಯಕರು ಸರ್ಕಾರಿ ವಾಹನಗಳಲ್ಲಿ ಕೋಟ್ಯಂತರ ರೂಪಾಯಿ ಸಾಗಿಸಿ ಹಂಚುತ್ತಿದ್ದಾರೆ. ಐಟಿ, ಇಡಿ ರಕ್ಷಣೆಯಲ್ಲೇ ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ