Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಗೋಕಾಕ್: ಕೊರೊನಾ ಸೋಂಕು ಹರಡುವಿಕೆಯನ್ನು ನಿಯಂತ್ರಣ ಮಾಡಬೇಕಿದೆ:ರಮೇಶ ಜಾರಕಿಹೊಳಿ ಮನವಿ

ಗೋಕಾಕ್: ಕೊರೊನಾ ಸೋಂಕು ಹರಡುವಿಕೆಯನ್ನು ನಿಯಂತ್ರಣ ಮಾಡಬೇಕಿದೆ:ರಮೇಶ ಜಾರಕಿಹೊಳಿ ಮನವಿ

Spread the love

ಗೋಕಾಕ್: ಕೊರೊನಾ ಸೋಂಕು ಹರಡುವಿಕೆಯನ್ನು ನಿಯಂತ್ರಣ ಮಾಡಬೇಕಿದೆ. ನಾವು ಯಾರು ರಾಜಕೀಯ ಮಾಡುವುದು ಬೇಡ. ಸಮಾಜ ರಕ್ಷಿಸುವ ಸಮಯವಾಗಿದೆ. ಆದ ಕಾರಣ ಮನೆಯಿಂದ ಯಾರು ಹೊರ ಬರದಿರಿ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮನವಿ ಮಾಡಿಕೊಂಡಿದ್ದಾರೆ.

ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಅವರು, ಜಗತ್ತಿನಾದ್ಯಂತ ಕೊರೊನಾ ಸೋಂಕು ಹರಡಿದ್ದು,ಎಲ್ಲರನ್ನು ತಲ್ಲಣಗೊಳಿಸಿದೆ. ಇದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಏಪ್ರೀಲ್ 14ರವರೆಗೆ ಲಾಕ್ ಡೌನ್ ಘೋಷಿಸಲಾಗಿದೆ. ಆದ ಕಾರಣ ಜನರು ಮನೆಯಿಂದ ಹೊರಗೆ ಬರದೆ. ಪೊಲೀಸ್ ಅಧಿಕಾರಿಗಳು, ಆರೋಗ್ಯ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ತಿಳಿಸಿದ್ದಾರೆ.

ಅನವಶ್ಯಕವಾಗಿ ಜನರು ಹೊರ ಬರಬೇಡಿ. ಅಗತ್ಯವಿದ್ದಾಗ ಮಾತ್ರ ಮನೆಯಿಂದ ಹೊರಗೆ ಬನ್ನಿ. ಅಂದಾಗ ಮಾತ್ರ ಕೊರೊನಾ ನಿಯಂತ್ರಣ ಮಾಡಲು ಸಾಧ್ಯವಾಗಲಿದೆ. ಪೊಲೀಸ್ , ಆರೋಗ್ಯ ಇಲಾಖೆ ನಿರಂತರ ಕೆಲಸದಲ್ಲಿ ತೊಡಗಿದ್ದಾರೆ. ಅವರೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಪೊಲೀಸ್ ಅಧಿಕಾರಿಗಳಿಗೂ ಸಹ ಜನರೊಂದಿಗೆ ಗೌರವದಿಂದ ವರ್ತಿಸುವಂತೆ ಸೂಚಿಸಲಾಗಿದೆ. ಪರಿಸ್ಥಿತಿ ಅರ್ಥ ಮಾಡಿಕೊಂಡು. ಸರ್ಕಾರ ನೀಡಿರುವ ಸೂಚನೆ, ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಬುಡಾ ಮತ್ತು ಪಾಲಿಕೆ ವಿರುದ್ದ ಪ್ರತಿಭಟನೆ ನಡೆಸಿದ ಬಸವನ ಕುಡಚಿಯ ದೇವರಾಜ ಅರಸ ಕಾಲೋನಿಯ ನಿವಾಸಿಗಳು

Spread the loveಮೂಲಭೂತ ಸೌಕರ್ಯಕ್ಕಾಗಿ ಬಸವನ ಕುಡಚಿಯ ದೇವರಾಜ ಅರಸ ಕಾಲೋನಿಯ ನಿವಾಸಿಗಳು ಮಹಾನಗರ ಪಾಲಿಕೆಯ ನಿರ್ಲಕ್ಷ್ಯವನ್ನು ಖಂಡಿಸಿ ಪ್ರತಿಭಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ