Breaking News
Home / ಜಿಲ್ಲೆ / ಕೊರೋನಾ ಕುರಿತ ಸರ್ವ ಪಕ್ಷಗಳ ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಇಲ್ಲಿವೆ “…

ಕೊರೋನಾ ಕುರಿತ ಸರ್ವ ಪಕ್ಷಗಳ ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಇಲ್ಲಿವೆ “…

Spread the love

ಬೆಂಗಳೂರು, ಮಾ.29-ಕೊರೋನಾ ತಡೆಯಲು ತೆಗೆದುಕೊಂಡಿರುವ ಲಾಕ್ ಡೌನ್ ಕ್ರಮದಿಂದಾಗಿ ಗಡಿಗಳಲ್ಲಿ ಸಿಕ್ಕಿಕೊಂಡಿರುವ ಜನರ ವೈದ್ಯಕೀಯ ತಪಾಸಣೆ ನಡೆಸಿ, ಅವರಿಗೆ ಆಶ್ರಯ ಕಲ್ಪಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ವಿಧಾನಸೌಧದಲ್ಲಿ ನಡೆದ ಸರ್ವಪಕ್ಷ ನಾಯಕರ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಂಕಿಗೆ ಒಳಗಾಗಿರುವ ಪ್ರಯಾಣಿಕರಿಗೆ ಕ್ವಾರಂಟೈನ್ ವ್ಯವಸ್ಥೆಗೆ ಒಳಪಡಿಸಲು ಹಾಗೂ ಆರೋಗ್ಯವಾಗಿರುವ ಪ್ರಯಾಣಿಕರನ್ನು ಅವರ ಸ್ಥಳಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರು, ನರ್ಸ್ ಗಳು ಹಾಗೂ ಅರೇ ವೈದ್ಯಕೀಯ ಸಿಬ್ಬಂದಿಗೆ ಪಿಪಿಇ ಕಿಟ್, ಮಾಸ್ಕ್ ಹಾಗೂ ಸ್ಯಾನಿಟೈಜರ್ ಬಾಟಲಿ ಗಳನ್ನು ಸರಬರಾಜು ಮಾಡಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು. ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ರಕ್ಷಣಾ ಸಾಧನಗಳನ್ನು ಒದಗಿಸಲು ಸಹ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಿಗೆ ಅಗತ್ಯ ಸಂಖ್ಯೆಯಲ್ಲಿ ಟೆಸ್ಟಿಂಗ್ ಕಿಟ್ (ಪರೀಕ್ಷಾ ಸಾಧನಗಳು) ವಿತರಿಸಲಾಗುವುದು. ರೈತರ ಕೃಷಿ ಉತ್ಪನ್ನಗಳ, ಸಾಗಣೆ, ಮಾರಾಟ ಮತ್ತು ಬಳಕೆದಾರರಿಗೆ ಸೂಕ್ತ‌ ರೀತಿಯಲ್ಲಿ ವಿತರಿಸಲು ವ್ಯವಸ್ಥೆ ಮಾಡಲಾಗುವುದು. ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಇತ್ಯಾದಿಗಳ ವಿತರಣೆಗೂ ಸೂಕ್ತ ವ್ಯವಸ್ಥೆ ಮಾಡಲಾಗುವುದು.

ಪಡಿತರವನ್ನು ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವ ಸಲಹೆಯನ್ನು ವಿರೋಧ ಪಕ್ಷದ ನಾಯಕರು ನೀಡಿದ್ದು, ಆ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು ಎಂದರು. ಮುಸ್ಲಿಂ ಬಾಂಧವರ ಜೊತೆ ನಾನು ಸಭೆ ನಡೆಸಿದ್ದು, ಅವರೆಲ್ಲರೂ ತಮ್ಮ ತಮ್ಮ ಮನೆಗಳಲ್ಲಿಯೇ ಪ್ರಾರ್ಥನೆಯನ್ನು ನಡೆಸಲು ಒಪ್ಪಿ ಸಹಕರಿಸಿರುತ್ತಾರೆ. ಅವರನ್ನು ಅಭಿನಂದಿಸುತ್ತೇನೆ.

ಸರ್ವ ಪಕ್ಷಗಳ ನಾಯಕರ ಸಭೆಯಲ್ಲಿ ನಾಯಕರು ಉಪಯುಕ್ತ ಸಲಹೆಗಳನ್ನು ನೀಡಿರುತ್ತಾರೆ. ಸರ್ಕಾರ ಅವುಗಳನ್ನು ಗಂಭೀರವಾಗಿ ಪರಿಗಣಿಸಿ ಅನುಷ್ಠಾನಕ್ಕೆ ತರಲಿದೆ. ಸರ್ವ ಪಕ್ಷದ ಮುಖಂಡರು ಸರ್ಕಾರದ ಕ್ರಮಗಳಿಗೆ ಒಕ್ಕೊರಲಿನ ಬೆಂಬಲ ವ್ಯಕ್ತಪಡಿಸಿ, ಈ ಸಂಕಷ್ಟದ ಸನ್ನಿವೇಶದಲ್ಲಿ ಸರ್ಕಾರದ ಜೊತೆ ಕೈಜೋಡಿಸುವುದಾಗಿ ಸಹಮತ ವ್ಯಕ್ತಪಡಿಸಿದ್ದಾರೆ ಎಂದರು.


Spread the love

About Laxminews 24x7

Check Also

ನೇಹಾ ಕೊಲೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ

Spread the loveಹುಬ್ಬಳ್ಳಿ : ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಫಯಾಝ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ