ಬೆಳಗಾವಿ -: ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕನ್ನು ತಡೆಗಟ್ಟುವ ಮತ್ತು ಹರಡುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಹೊರಡಿಸಿರುವುದರಿಂದ
ಅಕ್ರಮ ಕೇಂದ್ರಗಳಲ್ಲಿ ನಿರಂತರವಾಗಿ ಅಬಕಾರಿ ದಾಳಿ, ಹಗಲು ರಾತ್ರಿ ಗಸ್ತು, ರಸ್ತೆಗಾವಲು ನಡೆಸಿ, ವಾಹನಗಳನ್ನು ತಪಾಸಣೆ ನಡೆಸಿ, ಕ್ರಮ ಕೈಗೊಳ್ಳಲಾಗಿದೆ.


ಮದ್ಯ, ಬೀಯರ್ ಹಾಗೂ ಇತರೆ ಅಂದಾಜು ಮೌಲ್ಯ ರೂ. 50 ಲಕ್ಷಗಳು ಆಗುತ್ತದೆ (ಒಟ್ಟು ರೂ. 71 ಲಕ್ಷಗಳು),
ಕೊರೋನಾ ವೈರಸ್ ಸೋಂಕನ್ನು ತಡೆಗಟ್ಟುವ ಸಲುವಾಗಿ ಜಿಲ್ಲೆಯಾದ್ಯಂತ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾ ಆಸ್ಪತ್ರೆ, ವಾರ್ತಾ ಇಲಾಖೆ ಹಾಗೂ ಇತರೆ ಇಲಾಖೆಗಳಿಗೆ ಒಟ್ಟು 12,227 ಲೀಟರ್ ಸಾನಿಟೈಜರ್‌ನ್ನು ಹಂಚಿಕೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.