Breaking News

ದೇಶದಲ್ಲಿ 6 ಸಾವಿರ ಗಡಿ ಸಮೀಪಿಸಿದ ಹೆಮ್ಮಾರಿ- 24 ಗಂಟೆಯಲ್ಲಿ 24 ಮಂದಿ ಸಾವು

Spread the love

ನವದೆಹಲಿ: ದೇಶದಲ್ಲಿ ಹೆಮ್ಮಾರಿ ಕೊರೊನಾ ಸೋಂಕಿತರ ಸಂಖ್ಯೆ 5,742 ಆಗಿದ್ದು, 174 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಒಂದೇ ದಿನ 773 ಮಂದಿಗೆ ಸೋಂಕು ದೃಢವಾಗಿದ್ದು, 24 ಗಂಟೆಯಲ್ಲಿ 32 ಮಂದಿ ಸಾವನ್ನಪ್ಪಿದ್ದಾರೆ.

ದೇಶದಲ್ಲಿ 402 ದಿನ ಚೇತರಿಸಿಕೊಂಡಿದ್ದಾರೆ. ಹಾಟ್‍ಸ್ಪಾಟ್‍ಗಳ ಮೇಲೆ ನಿರಂತರವಾಗಿ ನಿಗಾವಹಿಸಿದ್ದೇವೆ ಅಂತ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಬರುತ್ತಿಲ್ಲ. ಮಂಗಳವಾರ ಒಂದು ಸಾವಿರ ಸೋಂಕಿತರ ಗಡಿ ದಾಟಿದ್ದ ಮಹಾರಾಷ್ಟ್ರದಲ್ಲಿ ಬುಧವಾರ ರಾತ್ರಿ 7 ಗಂಟೆಯ ವೇಳೆಗೆ ಸೋಂಕಿತರ ಸಂಖ್ಯೆ 1,100ಕ್ಕೂ ಅಧಿಕವಾಗಿದೆ

ಮಹಾರಾಷ್ಟ್ರ ಆರೋಗ್ಯ ಇಲಾಖೆ ಬುಧವಾರ ರಾತ್ರಿ 7 ಗಂಟೆ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 117 ಜನ ಸೋಂಕಿತರು ಪತ್ತೆಯಾಗಿದ್ದು, 8 ಜನರು ಮೃತಪಟ್ಟಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 72ಕ್ಕೆ ಏರಿದರೆ, ಸೋಂಕಿತರ ಸಂಖ್ಯೆ 1135ಕ್ಕೆ ತಲುಪಿದೆ.

ಆಂಧ್ರಪ್ರದೇಶದ ನೋಡಲ್ ಅಧಿಕಾರಿ ಅರ್ಜಾ ಶ್ರೀಕಾಂತ್ ಮಾತನಾಡಿ, ರಾಜ್ಯದಲ್ಲಿ ಇಂದು 19 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು 348 ಜನ ಸೋಂಕಿತರಿದ್ದಾರೆ.


Spread the love

About Laxminews 24x7

Check Also

13 ವರ್ಷಗಳ ನರಕಯಾತನೆಗೆ ಮುಕ್ತಿ – ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ

Spread the loveನವದೆಹಲಿ: ಸುಪ್ರೀಂಕೋರ್ಟ್‌ನಿಂದ ದಯಾಮರಣಕ್ಕೆ  ಅನುಮತಿ ಪಡೆದಿದ್ದ ಉತ್ತರ ಪ್ರದೇಶದ ಹರೀಶ್ ರಾಣಾ  13 ವರ್ಷಗಳ ನರಳಾಟದ ಬಳಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ