Breaking News

ಬೆಳಗಾವಿಯಲ್ಲಿ ಫುಟ್‌ಪಾತ್ ಅತಿಕ್ರಮಣ ತೆರವಿಗೆ ಪಾಲಿಕೆ ಅಧಿಕಾರಿಗಳ ಕಾರ್ಯಾಚರಣೆ

Spread the love

ಬೆಳಗಾವಿ: ಬೆಳಗಾವಿ ನಗರದ ಕೆಪಿಟಿಸಿಎಲ್ ಹಾಗೂ ಜೆಎನ್‌ಎಂಸಿ ರಸ್ತೆಯಲ್ಲಿ ಫುಟ್‌ಪಾತ್ ಮತ್ತು ರಸ್ತೆ ಅತಿಕ್ರಮಣ ತೆರವು ಕಾರ್ಯಾಚರಣೆಯನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ನಡೆಸಿದರು.

ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ಹಾಗೂ ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಯಿತು.

ಪಾಲಿಕೆಯ ಕಂದಾಯ, ಆರೋಗ್ಯ, ಅಭಿಯಂತರಿಕೆ ಸೇರಿದಂತೆ ವಿವಿಧ ವಿಭಾಗಗಳ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡು, ಫುಟ್‌ಪಾತ್ ಹಾಗೂ ರಸ್ತೆಗಳನ್ನು ಅತಿಕ್ರಮಿಸಿ ವ್ಯಾಪಾರ ನಡೆಸುತ್ತಿದ್ದ ಅಂಗಡಿಕಾರರಿಗೆ ಎಚ್ಚರಿಕೆ ನೀಡಿದರು. ಬಳಿಕ ಸಿಬ್ಬಂದಿ ಮೂಲಕ ಅತಿಕ್ರಮಿತ ವಸ್ತುಗಳನ್ನು ತೆರವುಗೊಳಿಸಲಾಯಿತು.

ಇದೇ ವೇಳೆ, ಕೆಲವು ಅಂಗಡಿಕಾರರ ಮನವಿಗೆ ಸ್ಪಂದಿಸಿದ ಅಧಿಕಾರಿಗಳು ಅತಿಕ್ರಮಣವನ್ನು ಸ್ವಯಂ ತೆರವುಗೊಳಿಸಲು ಕಾಲಾವಕಾಶ ನೀಡಿದರು. ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಮತ್ತೆ ಅತಿಕ್ರಮಣ ಮುಂದುವರಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪಾಲಿಕೆ ವಲಯ ಆಯುಕ್ತ ಅನೀಲ ಬೋರಗಾವಿ, ಅಭಿಯಂತರರಾದ ದೇಶಪಾಂಡೆ, ಅನೂಪ ವಾಹಿದ್, ಆದಿಲ್ ಖಾನ್ ಸೇರಿದಂತೆ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಸೌಜನ್ಯ ಪ್ರಕರಣದಲ್ಲಿ ತಂದೆ, ತಾಯಿ ಹಣ ಮಾಡಿಕೊಂಡಿದ್ದಾರೆ – ವಕೀಲ ಅಮೃತೇಶ್ ಗಂಭೀರ ಆರೋಪ

Spread the loveಬೆಂಗಳೂರು: ಸೌಜನ್ಯ ಪ್ರಕರಣದಲ್ಲಿ ಆಕೆಯ ತಂದೆ, ತಾಯಿ ಹಣ ಮಾಡಿಕೊಂಡಿದ್ದಾರೆ ಎಂದು ಹೈಕೋರ್ಟ್  ವಕೀಲ ಅಮೃತೇಶ್ ಗಂಭೀರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ