Breaking News

ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ – 19 ದಿನದಲ್ಲಿ 2.76 ಕೋಟಿ ಕಾಣಿಕೆ ಸಂಗ್ರಹ

Spread the love

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಅಕ್ಟೋಬರ್ – ನವೆಂಬರ್ ತಿಂಗಳಿನ 19 ದಿನದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, 19 ದಿನದಲ್ಲಿ 2.79 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ.

ಪ್ರತಿ ತಿಂಗಳಿನಂತೆ ಈ ಬಾರಿಯೂ ಭಕ್ತರ ದಂಡು ಮಠಕ್ಕೆ ಹರಿದು ಬಂದಿದ್ದು, ಭಾರೀ ಪ್ರಮಾಣದ ಕಾಣಿಕೆ ಸಂಗ್ರವಾಗಿದೆ. ಗುರುರಾಘವೇಂದ್ರ ಸ್ವಾಮಿ ಮಠಕ್ಕೆ 19 ದಿನಗಳಲ್ಲೇ ಕೋಟ್ಯಾಂತರ ರೂ. ಕಾಣಿಕೆ ಹರಿದು ಬಂದಿದ್ದು, ಸಂಗ್ರಹವಾದ ಒಟ್ಟು ಕಾಣಿಕೆಯಲ್ಲಿ 2 ಕೋಟಿ 68 ಲಕ್ಷ 66,655 ರೂ. ಕರೆನ್ಸಿ ನೋಟುಗಳು. 7 ಲಕ್ಷ 96,300 ರೂಪಾಯಿ ನಾಣ್ಯಗಳು ಸಂಗ್ರಹವಾಗಿವೆ. 49 ಗ್ರಾಂ ಚಿನ್ನ, 680 ಗ್ರಾಂ ಬೆಳ್ಳಿಯನ್ನ ಕಾಣಿಕೆ ರೂಪದಲ್ಲಿ ಭಕ್ತರು ನೀಡಿದ್ದಾರೆ.

ಮಂತ್ರಾಲಯ ರಾಯರ ಮಠದಲ್ಲಿ ಅತೀ ಭದ್ರತೆಯಲ್ಲಿ ನಡೆಸಲಾದ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಎಣಿಕೆ ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿ, ಕರ ಸೇವಕರು ಭಾಗವಹಿಸಿದ್ದರು. ಮುಜರಾಯಿ ಇಲಾಖೆ ಅಧಿಕಾರಿಗಳು, ಶ್ರೀಮಠದ ಅಧಿಕಾರಿಗಳು ಹುಂಡಿ ಎಣಿಕೆ ವೇಳೆ ಹಾಜರಿದ್ದರು.


Spread the love

About Laxminews 24x7

Check Also

ಮುಂದಿನ ವರ್ಷ 3 ದಿನಗಳ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ: ಡಿಕೆಶಿ ಘೋಷಣೆ

Spread the loveಮೈಸೂರು: ಮುಂದಿನ ವರ್ಷ ಮೂರು ದಿನಗಳ ಮೂರು ದಿನಗಳ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಲಾಗುವುದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ