Breaking News

ದೇಶದ ಆಹಾರ ದಾಸ್ತಾನು ಬಫರ್‌ಗಿಂತ ಮೂರು ಪಟ್ಟು ಹೆಚ್ಚು: ಜೋಶಿ

Spread the love

ನವದೆಹಲಿ: ಭಾರತದ ಆಹಾರ ಭದ್ರತಾ ವ್ಯವಸ್ಥೆ  ಪ್ರಬಲವಾಗಿದ್ದು, ಪ್ರಸ್ತುತದಲ್ಲಿ ಬಫರ್ ಅವಶ್ಯಕತೆಗಿಂತ ಸುಮಾರು ಮೂರು ಪಟ್ಟು ಹೆಚ್ಚಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ  ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ದೇಶದ ಪ್ರತಿಯೊಬ್ಬರಿಗೂ ಆಹಾರ ಭದ್ರತೆ ಒದಗಿಸುವಲ್ಲಿ ಬದ್ಧತೆ ತೋರಿದ್ದು, ಪರಿಣಾಮ ನಮ್ಮ ಆಹಾರ ಭದ್ರತಾ ಚೌಕಟ್ಟು ಬಲವಾಗಿ ಬೆಳೆಯುತ್ತಲೇ ಇದೆ ಎಂದು ಜೋಶಿ ಪ್ರತಿಪಾದಿಸಿದ್ದಾರೆ.

604.02 ಲಕ್ಷ ಮೆಟ್ರಿಕ್ ದಾಸ್ತಾನು:
ಪ್ರಸ್ತುತವಾಗಿ ಕೇಂದ್ರ ಸರ್ಕಾರದ ಆಹಾರ ಧಾನ್ಯ ದಾಸ್ತಾನು 604.02 ಲಕ್ಷ ಮೆಟ್ರಿಕ್ ಟನ್ ತಲುಪಿದೆ. ಇದು ಕಡ್ಡಾಯ ಬಫರ್ ಅವಶ್ಯಕತೆಗಿಂತ ಮೂರು ಪಟ್ಟು ಹೆಚ್ಚಳವನ್ನು ಪ್ರದರ್ಶಿಸುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ದೇಶದಲ್ಲಿ ಗೋಧಿ ಮತ್ತು ಅಕ್ಕಿ ದಾಸ್ತಾನು ಸಮೃದ್ಧವಾಗಿದ್ದು, ದೇಶಾದ್ಯಂತ ಸಾರ್ವಜನಿಕ ವಿತರಣಾ ವ್ಯವಸ್ಥೆ ಹಾಗೂ ವಿವಿಧ ಜನಕಲ್ಯಾಣ ಯೋಜನೆಗಳಿಗೆ ನಿರಂತರ ಪೂರೈಕೆಯನ್ನು ಖಚಿತಪಡಿಸುತ್ತಿದೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಒಂದರಿಂದಲೇ 80 ಕೋಟಿಗೂ ಹೆಚ್ಚು ಭಾರತೀಯರಿಗೆ ಉಚಿತ ಆಹಾರ ಧಾನ್ಯ ವಿತರಣೆ ಸುಲಲಿತವಾಗಿದೆ ಎಂದು ಹೇಳಿದ್ದಾರೆ.

ದೇಶೀಯವಾಗಿ ಆಹಾರ ಭದ್ರತೆ ಒದಗಿಸುವ ಜೊತೆಗೆ ರೈತರಿಂದ ವ್ಯವಸ್ಥಿತ ಖರೀದಿ, ಸಮೃದ್ಧ ಫಸಲು ಮತ್ತು ಅನ್ನದಾತರಿಗೆ ನೀಡುತ್ತಿರುವ ನಿರಂತರ ಬೆಂಬಲವು ರೈತ ಕಲ್ಯಾಣ ಮತ್ತು ದೇಶದ ಸುಭದ್ರತೆ ಕಡೆಗಿನ ಬದ್ಧತೆಯನ್ನು ಮತ್ತಷ್ಟು ಗಟ್ಟಿಗೊಳಿಸುತ್ತಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಸಂತಾನಹರಣ ಚಿಕಿತ್ಸೆ ವೇಳೆ ಕರುಳು ಕಟ್ – ವೈದ್ಯರ ಯಡವಟ್ಟಿನಿಂದ ಮಹಿಳೆ ಸಾವು: ಪತಿ ಆರೋಪ

Spread the loveಚಿಕ್ಕಬಳ್ಳಾಪುರ: ಸಂತಾನಹರಣ ಚಿಕಿತ್ಸೆಗೆ ಒಳಗಾಗಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಚಿಕಿತ್ಸೆ ವೇಳೆ ಕರುಳು ಕತ್ತರಿಸಿ ವೈದ್ಯರ ಯಡವಟ್ಟು ಮಾಡಿದ್ದಾರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ